BWSSB

ಸಾಂಕ್ರಾಮಿಕ ರೋಗ ತಡೆಗೆ ಸಹಕಾರ ನೀಡಿ: BWSSB ಗೆ ಬಿಬಿಎಂಪಿ ಪತ್ರ
ನಗರದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಸಹಕಾರ ನೀಡುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ಅವರು ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ಕೈಗಾರಿಕೆಗಳಿಗೆ ಪ್ರತ್ಯೇಕ ಪೈಪ್ ಲೈನ್ ಮೂಲಕ ಸಂಸ್ಕರಿಸಿದ ನೀರು ಪೂರೈಕೆಗೆ ಚಿಂತನೆ- ಜಲಮಂಡಳಿ ಅಧ್ಯಕ್ಷ
ಸಂಸ್ಕರಿಸಿದ ನೀರಿನ ಬಳಕೆಯನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಕೈಗಾರಿಕೆಗಳಿಗೆ ಪ್ರತ್ಯೇಕ ಪೈಪ್‌ಲೈನ್ ಮೂಲಕ ಸಂಸ್ಕರಿಸಿದ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಜಲಮಂಡಳಿ ಚಿಂತನೆ ನಡೆಸುತ್ತಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಬೆಂಗಳೂರು: BBMP ಉದ್ಯಾನವನಗಳ ಸಸ್ಯ ಸಂಕುಲ ಉಳಿಕೆಗೆ BWSSB ಸಂಸ್ಕರಿಸಿದ ನೀರು ಬಳಕೆ!
ತಾಪಮಾನ ಏರಿಕೆಯಾಗುತ್ತಿದ್ದಂತೆ ನಗರದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದ್ದು, ಕೇವಲ ಮನುಷ್ಯರಷ್ಟೇ ಅಲ್ಲದೆ, ಗಿಡ-ಮರಗಳಿಗೂ ಕೂಡ ನೀರಿನ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಸ್ಯ ಸಂಕುಲ ಉಳಿಕೆಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಸಂಸ್ಕರಿಸಿದ ನೀರು ಬಳಸಲು ಬಿಬಿಎಂಪಿ ಮುಂದಾಗಿದೆ.

ಬೆಂಗಳೂರು ಜಲಕ್ಷಾಮ: ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ಗಡುವು ಏಪ್ರಿಲ್ 7ರವರೆಗೆ ವಿಸ್ತರಣೆ
ಅನಗತ್ಯವಾಗಿ ನೀರು ಪೋಲಾಗುವುದನ್ನ ತಡೆಯಲು ವಾಣಿಜ್ಯ ಕಟ್ಟಡಗಳು, ಕೈಗಾರಿಕಾ ಪ್ರದೇಶಗಳು, ರೆಸ್ಟೋರೆಂಟ್‌ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿನ ನಲ್ಲಿಗಳಿಗೆ ಏರಿಯೇಟರ್ ಹಾಗೂ ಫ್ಲೋ ಕಂಟ್ರೋಲರ್ ಅಳವಡಿಸಿಕೊಳ್ಳುವಂತೆ ನೀಡಿದ್ದ ಗಡುವನ್ನು ಏಪ್ರಿಲ್ 7 ರ ವರೆಗೆ ವಿಸ್ತರಿಸಲಾಗಿದೆ.

ಬೆಂಗಳೂರು: ಅಂತರ್ಜಲ ವೃದ್ಧಿಗೆ ಸಮುದಾಯ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಕೆಗೆ ಜಲಮಂಡಳಿ ಚಿಂತನೆ!
ನಗರದಲ್ಲಿ ಅಂತರ್ಜಲ ವೃದ್ಧಿಗೆ ಹಾಗೂ ಕೆರೆಗಳಿಗೆ ಮಳೆ ನೀರು ತುಂಬಿಸುವ ಉದ್ದೇಶದಿಂದ ಬೆಂಗಳೂರು ಜಲ ಮಂಡಳಿಯಿಂದ ಸಮುದಾಯ ಮಳೆ ನೀರು ಕೊಯ್ಲು (community rainwater harvesting project) ಪ್ರಾರಂಭಿಸಲು ಚಿಂತನೆ ನಡೆಸಿದೆ.

ಕೊಳವೆ ಬಾವಿ ನಿರ್ವಹಣೆಗೆ ‘AI’ ತಂತ್ರಜ್ಞಾನ ಅಳವಡಿಕೆ; BWSSB ಮುಂದು!
ನಗರದಲ್ಲಿನ ಕೊಳವೆ ಬಾವಿಗಳ ನಿರ್ವಹಣೆಗೆ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಮುಂದಾಗಿದೆ.

ಬೆಂಗಳೂರು: ಅನುಮತಿ ಇಲ್ಲದೆ 20 ಕೊಳವೆ ಬಾವಿ ಕೊರೆದವರ ವಿರುದ್ಧ ಕ್ರಮಕ್ಕೆ BWSSB ಆದೇಶ!
ನಗರದಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಈ ನಡುವಲ್ಲೇ ಅನುಮತಿ ಇಲ್ಲದೆ 20 ಕೊಳವೆ ಬಾವಿಗಳನ್ನು ಕೊರೆದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಎಂಜಿನಿಯರ್‌ಗಳಿಗೆ ಸೂಚನೆ ನೀಡಿದೆ.

ಅನ್ಯ ಬಳಕೆಗೆ ಕುಡಿಯುವ ನೀರು: ನಿವಾಸಿಗಳಿಗೆ BWSSB 1.1 ಲಕ್ಷ ರೂಪಾಯಿ ದಂಡ!
ಕುಡಿಯುವ ನೀರನ್ನು ಅನ್ಯ ಬಳಕೆಗೆ ಬಳಸಿದ್ದಕ್ಕಾಗಿ ಅಪಾರ್ಟ್ ಮೆಂಟ್ ಸಂಕೀರ್ಣಗಳಿಗೆ ಹಾಗೂ ನಿವಾಸಿಗಳಿಗೆ ಬಿಡಬ್ಲ್ಯುಎಸ್ಎಸ್ ಬಿ 1,10,000 ರೂಪಾಯಿ ದಂಡ ವಿಧಿಸಿದೆ.

ಬೆಂಗಳೂರು: ಜನ ಸಾಂದ್ರತೆ ಪ್ರದೇಶಗಳಿಗೆ ಪ್ರತಿ ದಿನ 1 ಲಕ್ಷ ಲೀಟರ್ ಕಾವೇರಿ ನೀರು ಉಚಿತವಾಗಿ ಸರಬರಾಜು
ನಗರದಲ್ಲಿ ಬಡ ಜನರು ಹೆಚ್ಚಾಗಿ ವಾಸಿಸುವ ಕೊಳಚೆ ಪ್ರದೇಶಗಳು ಹಾಗೂ ಜನಸಾಂದ್ರತೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ನೀಡಲಾಗುತ್ತಿದ್ದು, ಪ್ರತಿನಿತ್ಯ ಈ ಪ್ರದೇಶಗಳಿಗೆ 1 ಲಕ್ಷ ಲೀಟರ್ ಗಳಷ್ಟು ಕುಡಿಯುವ ನೀರನ್ನ ಉಚಿತವಾಗಿ ಸರಬರಾಜು ಮಾಡಲಾಗುತ್ತಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಡಾ. ವಿ. ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.

