BY Vijayendra

ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದು ಯಾರು? ನನ್ನ ವಿರೋಧಿಸಿದರೆ ಮೋದಿಯನ್ನು ವಿರೋಧಿಸಿದಂತೆ: ಬಿ.ವೈ ವಿಜಯೇಂದ್ರ
ನನಗೆ ಮೊದಲ ಶುಭಾಶಯ ಕೋರಿದವರು ಸಚಿವ ಪ್ರಹ್ಲಾದ್ ಜೋಶಿ ಮತ್ತು ಬಿಎಲ್ ಸಂತೋಷ್. ಅವರು ಪಕ್ಷದ ಅತ್ಯಂತ ಉನ್ನತ ನಾಯಕರುಗಳು. ನಾಯಕರಾದ ವಿ ಸೋಮಣ್ಣ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಕಾಂತರಾಜ್ ಸಮಿತಿ ವರದಿ ಅವೈಜ್ಞಾನಿಕ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್ ಕಾಂತರಾಜ್ ನೇತೃತ್ವದ ಕಾಂತರಾಜ್ ಆಯೋಗದ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ ಗಣತಿ ಮತ್ತು ಶಿಫಾರಸುಗಳನ್ನು ಅವೈಜ್ಞಾನಿಕ ಎಂದು ಬಣ್ಣಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ ಬಂದ ವರದಿಯನ್ನು ಏಕೆ ಅನುಷ್ಠಾನಗೊಳಿಸಲಿಲ್ಲ ಎಂದು ಗುರುವಾರ ಪ್ರಶ್ನಿಸಿದರು.

ಜನಸೇವಾ ವಿದ್ಯಾಕೇಂದ್ರ ಶಾಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ಭೇಟಿ: ಹಳೇಯ ನೆನಪು ಸ್ಮರಿಸಿದ ವಿಜಯೇಂದ್ರ!
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಬಿ.ವೈ.ವಿಜಯೇಂದ್ರ ಅವರು ಬುಧವಾರ ಮಾಗಡಿ ರಸ್ತೆಯ ಚನ್ನೇನಹಳ್ಳಿಯಲ್ಲಿರುವ ಜನಸೇವಾ ವಿದ್ಯಾಕೇಂದ್ರ ಶಾಲೆಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿದ್ದರು.

ನವೆಂಬರ್ 17 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ: ಬಿ.ವೈ.ವಿಜಯೇಂದ್ರ
ನವೆಂಬರ್ 17 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಈ ಸಭೆಗೆ ಇಬ್ಬರು ವೀಕ್ಷಕರು ಬರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬುಧವಾರ ಹೇಳಿದ್ದಾರೆ.

ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ನೇಮಕ; ಪಕ್ಷದ ನಾಯಕರಲ್ಲಿ ಯಾವುದೇ ಅಸಮಾಧಾನವಿಲ್ಲ: ಪ್ರಲ್ಹಾದ್ ಜೋಶಿ
ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಂಗಳವಾರ ಹೇಳಿದ್ದಾರೆ.

ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಿ ದೇವೇಗೌಡರ ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಅವರು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರನ್ನು ಸೋಮವಾರ ಭೇಟಿ ಮಾಡಿದ್ದು, ಆಶೀರ್ವಾದ ಪಡೆದುಕೊಂಡರು.

ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ: ಆಕ್ರೋಶಗೊಂಡು, ಮೌನಕ್ಕೆ ಶರಣಾದ ಹಿರಿಯ ನಾಯಕರು!
ಯುವ ಶಾಸಕ ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಹಲವರು ಸಂಭ್ರಮಿಸುತ್ತಿದ್ದರೆ, ಪಕ್ಷದ ಅನೇಕ ಹಿರಿಯ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಮೌನಕ್ಕೆ ಶರಣಾಗಿದ್ದಾರೆ.

ಯಡಿಯೂರಪ್ಪ ಪಟ್ಟು- ಬಗ್ಗಿದ ಹೈಕಮಾಂಡ್: ಬಿಎಸ್ ವೈ ಪುತ್ರಕಾಮೇಷ್ಠಿಯಾಗ ಸಕ್ಸಸ್; ಹಿರಿತಲೆಗಳನ್ನು ಬದಿಗಿಟ್ಟು ವಿಜಯೇಂದ್ರಗೆ ಪಟ್ಟ!
48 ವರ್ಷದ ವಿಜಯೇಂದ್ರ ಮೊದಲ ಬಾರಿಗೆ ಶಾಸಕರಾಗಿದ್ದು 2024 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸಲಿದ್ದಾರೆ. ವಿಧಾನಸಭೆ ಚುನಾವಣೆ ಬಳಿಕ, ನೆಲ ಕಚ್ಚಿರುವ ಪಕ್ಷ ಸಂಘಟನೆಗೆ ಹೊಸ ಹುರುಪು ನೀಡಿ ಮಹಾ ಸಮರಕ್ಕೆ ಪಕ್ಷವನ್ನು ಸಜ್ಜುಗೊಳಿಸುವ ದೊಡ್ಡ ಹೊಣೆ ವಿಜಯೇಂದ್ರ ಅವರ ಮೇಲಿದೆ.

ಪಕ್ಷದ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ; ನಮಗೆ ಸಾಮೂಹಿಕ ನಾಯಕತ್ವ ಬೇಕು ಎಂದ ಕೆಎಸ್ ಈಶ್ವರಪ್ಪ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರು ವಿಜಯೇಂದ್ರ ಅವರನ್ನು ಅಭಿನಂದಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಈಶ್ವರಪ್ಪ, ನಮ್ಮ ಪಕ್ಷವು ಸಾಮೂಹಿಕ ನಾಯಕತ್ವವನ್ನು ಬಯಸುತ್ತದೆ ಎಂದರು.

