Bypolls

ಉಪ ಚುನಾವಣೆ ಫಲಿತಾಂಶ: ಬಿಹಾರ, ಹರಿಯಾಣದಲ್ಲಿ ಬಿಜೆಪಿ ಗೆಲುವು, ಒಡಿಶಾದಲ್ಲಿ ಮುನ್ನಡೆ
ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ನಡೆದಿದ್ದ ಉಪ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಬಿಹಾರ ಮತ್ತು ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.

ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ: ಮತದಾನ ಆರಂಭ
ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಇಂದು ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ. ಪ್ರಮುಖವಾಗಿ ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಉಪಚುನಾವಣೆ ಮತ ಎಣಿಕೆ: ವಿಜಯೋತ್ಸವ ಮೆರವಣಿಗೆಗಳ ಮೇಲೆ ಚುನಾವಣಾ ಆಯೋಗ ನಿಷೇಧ
ವಿವಿಧ ರಾಜ್ಯಗಳಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಫಲಿತಾಂಶ ಹೊರಬಿದ್ದ ನಂತರ ವಿಜಯೋತ್ಸವದ ಮೆರವಣಿಗೆಗಳನ್ನು ನಡೆಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಚುನಾವಣಾ ಆಯೋಗ ಮಂಗಳವಾರ ಸೂಚನೆ ನೀಡಿದೆ.

ಉಪಚುನಾವಣೆ: ಸಿಂದಗಿಯಲ್ಲಿ ಶೇ.69, ಹಾನಗಲ್ ಶೇ.83ರಷ್ಟು ಮತದಾನ
ಮಾಜಿ ಸಚಿವ, ಜೆಡಿಎಸ್ ಶಾಸಕ ಮನಗೂಳಿ ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಸಿಂದಗಿ ಮತ್ತು ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನದಿಂದ ತೆರವಾಗಿದ್ದ ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು ಶನಿವಾರ ಉತ್ಸಾಹದಿಂದ...

ಬಿಜೆಪಿಗಿಂತ ಬೊಮ್ಮಾಯಿಗೆ ಮುಖ್ಯವಾದ ಬೈ ಎಲೆಕ್ಷನ್ (ನೇರ ನೋಟ)
ಕೂಡ್ಲಿ ಗುರುರಾಜಕರ್ನಾಟಕದ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪ ಚುನಾವಣೆ ರಾಜ್ಯದ ಮೂರು ಪ್ರಮುಖ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆ. ಆಳುವ ಪಕ್ಷ ಬಿಜೆಪಿಗಿಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒಂದು ತೂಕ ಹೆಚ್ಚು ಪ್ರತಿಷ್ಠೆ.

ಹಾನಗಲ್, ಸಿಂದಗಿ ಉಪಚುನಾವಣೆ: ಎರಡು ಕ್ಷೇತ್ರಗಳ ಮೇಲೆ ಚುನಾವಣಾ ಆಯೋಗದ ಕಣ್ಗಾವಲು
ಅಕ್ಟೋಬರ್ 30 ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಸಿಂದಗಿ ಮತ್ತು ಹಾನಗಲ್‌ನಲ್ಲಿ ಮತದಾರರ ಓಲೈಕೆಗೆ ಹಣದ ಹಂಚಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ತಡೆಯಲು ರಾಜ್ಯ ಚುನಾವಣಾ ಆಯೋಗ ಕಟ್ಟೆಚ್ಚರ ವಹಿಸಿದೆ.

ಉಪ ಚುನಾವಣೆ ಪ್ರಚಾರದಲ್ಲಿ ಮುಖ್ಯಮಂತ್ರಿ, ಸಚಿವರು ಬ್ಯುಸಿ: ವಿಧಾನಸೌಧ ಕಾರಿಡಾರ್ ಬಿಕೋ ಬಿಕೋ!
ಹಾನಗಲ್ ಹಾಗೂ ಸಿಂಧಗಿ ಉಪ ಚುನಾವಣೆಗೆ ಇನ್ನೂ ಕೇವಲ ನಾಲ್ಕು ದಿನ ಬಾಕಿ ಉಳಿದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸುಮಾರು 20 ಸಚಿವರು ಉಭಯ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿರುವುದರಿಂದ ವಿಧಾನಸೌಧದ ಕಾರಿಡಾರ್ ಖಾಲಿ ಖಾಲಿಯಾಗಿ ಬಿಕೋ ಎನ್ನುವಂತಿದೆ.

ಹಾನಗಲ್ ನಲ್ಲಿ ಬೊಮ್ಮಾಯಿ, ಶ್ರೀನಿವಾಸ್ ಮಾನೆ ನಡುವೆ ಸ್ಪರ್ಧೆ: ಡಿ.ಕೆ. ಶಿವಕುಮಾರ್
ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ನಡುವೆ ಸ್ಪರ್ಧೆ ಇಲ್ಲ ಎಂದು ಬಿಜೆಪಿ ಹೇಳುತ್ತಿದೆ. ಆದರೆ, ಅಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ನಡುವಣ ಸ್ಪರ್ಧೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೋಮವಾರ ಹೇಳಿದರು.

ಇನ್ನೂ ಮೂರು ದಿನಗಳ ಉಪ ಚುನಾವಣೆ ಪ್ರಚಾರದಲ್ಲಿ ಹಣದ ಹರಿವು ಸಾಧ್ಯತೆ, ದೇವೇಗೌಡ ಆತಂಕ
ಸಿಂಧಗಿ ವಿಧಾನಸಭಾ ಉಪ ಚುನಾವಣೆ ಪ್ರಚಾರಕ್ಕೆ ಇನ್ನೂ ಮೂರು ದಿನ ಬಾಕಿಯಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಿಂದ ಭಾರೀ ಪ್ರಮಾಣದ ಹಣ ಹರಿದಾಡುವ ಶಂಕೆಯನ್ನು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್ .ಡಿ. ದೇವೇಗೌಡ ವ್ಯಕ್ತಪಡಿಸಿದ್ದಾರೆ.

