Bypolls

ಸಂಪುಟ ವಿಸ್ತರಣೆ ಸದ್ಯಕ್ಕೆ ಕನಸು: ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ
ರಾಜ್ಯದ ರಾಜರಾಜೇಶ್ವರಿನಗರ ಮತ್ತು ತುಮಕೂರು ಜಿಲ್ಲೆಯ ಸಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಾಗೂ ವಿಧಾನ ಪರಿಷತ್‌ನ ಪದವೀಧರ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿರುವುದರಿಂದ ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಲಿರುವುದು ಸಚಿವಾಕಾಂಕ್ಷಿ ಶಾಸಕರಲ್ಲಿ ನಿರಾಸೆ ಮೂಡಿಸಿದೆ.

ಬೆಳಗಾವಿ, ಮಸ್ಕಿ, ಬಸವ ಕಲ್ಯಾಣ ಉಪ ಚುನಾವಣೆಗೆ ಶೀಘ್ರವೇ ದಿನಾಂಕ ಘೋಷಣೆ: ಆಯೋಗ
ಶಿರಾ ಮತ್ತು ರಾಜ ರಾಜೇಶ್ವರಿ ವಿಧಾನ ಸಭಾ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಈಗಾಗಲೇ ದಿನಾಂಕ ಪ್ರಕಟಿಸಿದೆ, ಶೀಘ್ರದಲ್ಲೇ ಮಸ್ಕಿ ಮತ್ತು ಬಸವಕಲ್ಯಾಣ ಮತ್ತು ಬೆಳಗಾವಿ ಲೋಕಸಭೆ ಕ್ಷೇತ್ರಗಳ ಚುನಾವಣೆಗೆ ದಿನಾಂಕ ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ

ಉಪಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಗೆಲ್ಲುವುದು ಜೆಡಿಎಸ್ ಗೆ ದೊಡ್ಡ ಸವಾಲು: ಎಚ್‌ಡಿಕೆ
ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3 ರಂದು ಉಪಚುನಾವಣೆ ಘೋಷಣೆಯಾಗಿದ್ದು, ಈ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಮೀರಿ ಗೆಲುವು ಸಾಧಿಸುವುದು ತಮ್ಮ ಪಕ್ಷಕ್ಕೆ ದೊಡ್ಡ ಸವಾಲಾಗಿದೆ ಎಂದು ಜೆಡಿ(ಎಸ್) ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಬುಧವಾರ ಹೇಳಿದ್ದಾರೆ.

ಶಿರಾ ಕ್ಷೇತ್ರಕ್ಕೆ ವಿಜಯೇಂದ್ರ ಮೊದಲ ಭೇಟಿ: ಕೆಆರ್ ಪೇಟೆ ಉಪಚುನಾವಣೆ ತಂತ್ರ ಬಳಕೆಯ ಸುಳಿವು
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಮೊದಲ ಬಾರಿಗೆ ಶಿರಾ ಕ್ಷೇತ್ರಕ್ಕೆ ಸೋಮವಾರ ಭೇಟಿ ನೀಡಿದ್ದು ರಾಜಕೀಯ ವಲಯದಲ್ಲಿ ಹುಬ್ಬೇರುವಂತೆ ಮಾಡಿದೆ.

ಉಪ ಚುನಾವಣೆಗೆ ಸಿದ್ಧ, ಬಿಜೆಪಿ ಸೇರುವ ಬಗ್ಗೆ ಚಿಂತಿಸಿಲ್ಲ: ಮಧ್ಯಪ್ರದೇಶ ಶಾಸಕರು
ತಾವು ಜ್ಯೋತಿರಾಧಿತ್ಯ ಸಿಂಧಿಯಾ ಅವರನ್ನು ಬೆಂಬಲಿಸುತ್ತಿದ್ದರೂ, ಬಿಜೆಪಿ ಸೇರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಮಧ್ಯಪ್ರದೇಶದ ಕಾಂಗ್ರೆಸ್‌ನ ಬಂಡಾಯ ಶಾಸಕರು ಹೇಳಿದ್ದಾರೆ

ರಿಜ್ವಾನ್ ಅರ್ಷದ್ ರಿಂದ ತೆರವಾಗಿದ್ದ ಪರಿಷತ್ ಸ್ಥಾನಕ್ಕೆ ಫೆ. 17 ರಂದು ಚುನಾವಣೆ
ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ಅವರಿಂದ ತೆರವಾಗಿರುವ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಫೆಬ್ರವರಿ 17 ರಂದು ಚುನಾವಣೆ ನಡೆಯಲಿದೆ.

ಪಕ್ಷಾಂತರ, ಹಣ ಹಾಗೂ ಅಭ್ಯರ್ಥಿಗಳ ಕೊರತೆಯಿಂದಾಗಿ ಚುನಾವಣೆಯಲ್ಲಿ ಸೋಲು ಕಂಡೆವು: ಎಐಸಿಸಿಗೆ ಸಿದ್ದರಾಮಯ್ಯ
ಹಿರಿಯ ನಾಯಕರು ಪಕ್ಷ ತೊರೆದಿದ್ದು, ಹಣ ಹಾಗೂ ಗೆಲ್ಲುವ ಅಭ್ಯರ್ಥಿಗಳ ಕೊರತೆಯಿಂದಾಗಿ ಈ ಬಾರಿಯ ಉಪ ಚುನಾವಣೆಯಲ್ಲಿ ಸೋಲು ಕಾಣಲು ಕಾರಣವಾಯಿತು ಎಂದು ಎಐಸಿಸಿಗೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷಗಳ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಉಪ ಚುನಾವಣೆ ಗೆಲುವು: ಯಡಿಯೂರಪ್ಪಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ
ರಾಜ್ಯ ವಿಧಾನಸಭೆಯ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ರಲ್ಲಿ ಗೆದ್ದು ಅಭೂತಪೂರ್ವ ಗೆಲುವು ಸಾಧಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪ್ರಧಾನಿ ನರೇಂದ್ರಮೋದಿ ಅಭಿನಂದಿಸಿದ್ದಾರೆ

ಶಿವಾಜಿನಗರ ಕ್ಷೇತ್ರವನ್ನು ಉಳಿಸಿಕೊಂಡ ಕಾಂಗ್ರೆಸ್: ರಿಜ್ವಾನ್ ಅರ್ಷದ್ ವಿಧಾನಸಭೆಗೆ ಪ್ರವೇಶ
ಅತಿ ಹೆಚ್ಚು 20 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದ ಶಿವಾಜಿನಗರ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಪಕ್ಷದ ಅಭ್ಯರ್ಥಿ ವಿಧಾನಸ ಪರಿಷತ್ ಸದಸ್ಯರೂ ಆಗಿರುವ ರಿಜ್ವಾನ್ ಅರ್ಷದ್ ಜಯಗಳಿಸಿದ್ದಾರೆ.

