C M Ibrahim

ಜೆಡಿಎಸ್ ನಿಂದ ಸಿ.ಎಂ. ಇಬ್ರಾಹಿಂ, ಸಿ.ಕೆ ನಾನು ಉಚ್ಛಾಟನೆ: ದೇವೇಗೌಡರು ಹೇಳಿದ್ದೇನು?
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಮತ್ತು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ ಕೆ ನಾಣು ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ.

ಡಿ. 11 ರಂದು ಪಕ್ಷದ ಸಮಾವೇಶ ಆಯೋಜಿಸಿದ ಜೆಡಿಎಸ್ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ!
ಜೆಡಿಎಸ್ ಪಕ್ಷದ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರು ಡಿ.11 ರಂದು ಬೆಂಗಳೂರಿನಲ್ಲಿ ಪಕ್ಷದ ಸಮಾವೇಶ ಆಯೋಜಿಸುವ ಮೂಲಕ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಅವರ ಕುಟುಂಬದ ವಿರುದ್ಧ ಭಾರಿ ಹಣಾಹಣಿಗೆ...

ಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತು
ಜೆಡಿಎಸ್‌ನ ಮಾಜಿ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರನ್ನು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಅಧ್ಯಕ್ಷ ಎಚ್‌ಡಿ ದೇವೇಗೌಡ ಅವರು ಶುಕ್ರವಾರ ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿದ್ದಾರೆ.

ಜೆಡಿಎಸ್ ನಿಂದ ಉಚ್ಛಾಟನೆ: ಮಾಜಿ ಪ್ರಧಾನಿ ದೇವೇಗೌಡ ಕುಟುಂಬ ವಿರುದ್ಧ ಕಾನೂನು ಸಮರಕ್ಕೆ ಸಿಎಂ ಇಬ್ರಾಹಿಂ ಸಜ್ಜು
ಬಿಜೆಪಿಯೊಂದಿಗಿನ ಮೈತ್ರಿಯನ್ನು ವಿರೋಧಿಸಿ ಬಂಡಾಯವೆದ್ದ ಸಿಎಂ ಇಬ್ರಾಹಿಂ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಇತ್ತೀಚೆಗಷ್ಟೇ ಹೆಚ್ ಡಿ ದೇವೇಗೌಡರು ವಜಾಗೊಳಿಸಿ ತಮ್ಮ ಪುತ್ರ ಹೆಚ್ ಡಿ ಕುಮಾರಸ್ವಾಮಿಯವರನ್ನು ರಾಜ್ಯಾಧ್ಯಕ್ಷರನ್ನಾಗಿ ಘೋಷಿಸಿದ್ದರು.

ಬಿಜೆಪಿ-ಜೆಡಿಎಸ್ ಮೈತ್ರಿ: ಸಿಎಂ ಇಬ್ರಾಹಿಂ ಮುಂದಿನ ರಾಜಕೀಯ ನಿರ್ಧಾರ ಇಂದು?
2024ರ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪಕ್ಷದ ನಾಯಕತ್ವದ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರು ಪಕ್ಷ ತೊರೆದು ಮತ್ತೊಂದು ಪಕ್ಷ ಸೇರುವ ಕುರಿತು ಇಂದು ಸೋಮವಾರ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆ
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದರಿಂದ ಸೋಲಿನ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆ ನೀಡಿದ್ದಾರೆ.

ಬಾದಾಮಿಯಲ್ಲಿ ಓಡಾಡಿ ಸಿದ್ದರಾಮಯ್ಯನ ಗೆಲ್ಲಿಸಿದ್ದು ನಾನು, ಬಿಎಸ್ವೈಗೆ ಮೋಸ ಮಾಡುತ್ತಾರೆಂದು 4 ವರ್ಷದ ಹಿಂದೆ ಹೇಳಿದ್ದೆ: ಸಿಎಂ ಇಬ್ರಾಹಿಂ
ಬಸವ ಕೃಪದವರಿಗೆ ಕೇಶವ ಕೃಪದಲ್ಲಿ ಜಾಗವಿಲ್ಲ ಯಡಿಯೂರಪ್ಪ, ನಿಮಗೆ ಮೋಸ ಮಾಡುತ್ತಾರೆ ಎಂದು ನಾನು 4 ವರ್ಷಗಳ ಹಿಂದೆಯೇ ಹೇಳಿದ್ದೆ. ಯಡಿಯೂರಪ್ಪನವರು ಇವತ್ತು ಅದನ್ನು ಅನುಭವಿಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಲೇವಡಿ ಮಾಡಿದ್ದಾರೆ.

ಕುಮಾರಸ್ವಾಮಿ ಗ್ರಹಬಲ ನೋಡಿದ್ರೆ ಕೇಂದ್ರದಲ್ಲಿ ಅಧಿಕಾರ ಹಿಡಿಯುತ್ತಾರೆ; ಅವರು ಮುಂದಿನ ಸಿಎಂ ಆಗುವುದು ನಿಶ್ಚಿತ: ಸಿ.ಎಂ ಇಬ್ರಾಹಿಂ
ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಬಸವರಾಜ ಬೊಮ್ಮಾಯಿಗೆ ಸ್ವಾತಂತ್ರ್ಯವಿಲ್ಲ, ಕೇಶವಕೃಪದಲ್ಲಿ ಹೇಳಿದಷ್ಟು ಕೆಲಸವನ್ನು ಮಾತ್ರ ಬೊಮ್ಮಾಯಿ ಮಾಡುತ್ತಿದ್ದಾರೆ ಹೊರತು ಬೊಮ್ಮಾಯಿಯವರಿಗೆ ಸ್ವತಂತ್ರವಾಗಿ ಕೆಲಸ ಮಾಡುವ ಸ್ವಾತಂತ್ರ್ಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಟೀಕಿಸಿದ್ದಾರೆ.

'ಬೊಮ್ಮಾಯಿಯವರು ಹೇಗೂ ಹೋಗ್ತಾ ಇದ್ದಾರೆ, ಈ ಮತಾಂತರ ನಿಷೇಧ ಕಾಯ್ದೆ ಎಂಬ ಗೂಬೆಯನ್ನು ತಲೆಮೇಲೆ ಇಟ್ಕೊಂಡು ಏಕೆ ಹೋಗ್ತಾರೋ': ಸಿಎಂ ಇಬ್ರಾಹಿಂ
ಬಸವರಾಜ ಬೊಮ್ಮಾಯಿಯವರು ಹೇಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಹೋಗುತ್ತಿದ್ದಾರೆ, ಹೋಗುವ ಸಂದರ್ಭದಲ್ಲಿ ಒಳ್ಳೆ ಕೆಲಸ ಮಾಡಿ ಹೋಗಲಿ, ಯಾಕೆ ಗೂಬೆಯನ್ನು ತಲೆ ಮೇಲೆ ಕೂರಿಸಿಕೊಳ್ಳುತ್ತೀರಿ ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಸಿ ಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.

