ರಾಜ್ಯಕರ್ನಾಟಕ ಚುನಾವಣೋತ್ತರ ಸಮೀಕ್ಷೆ: ಕಾಂಗ್ರೆಸ್ಗೆ ಹೆಚ್ಚು ಸೀಟ್, ಅತಂತ್ರ ವಿಧಾನಸಭೆ ಸುಳಿವು
ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು ಮತದಾನ ಪೂರ್ಣಗೊಂಡಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಈಮಧ್ಯೆ ಬಹುತೇಕ ಮಂದಿ ಕಾಯುತ್ತಿದ್ದ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಈ ಹಿಂದೆಯೇ ಕೆಲ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಹೇಳಿದಂತೆ ಅತಂತ್ರ ವಿಧಾನಸಭೆಯ ಸುಳಿವನ್ನು ನೀಡಿದೆ.