CAA Act

CAA ಅಡಿಯಲ್ಲಿ ಪಾಕ್‌ನ 188 ನಿರಾಶ್ರಿತರಿಗೆ ಭಾರತ ಪೌರತ್ವ ನೀಡಿದ ಅಮಿತ್ ಶಾ!
ಕಳೆದ ಹಲವು ವರ್ಷಗಳಿಂದ ಗುಜರಾತ್‌ನ ಮೋರ್ಬಿ, ಪಟಾನ್, ಸುರೇಂದ್ರನಗರ, ಮಹೇಶನ, ರಾಜ್‌ಕೋಟ್ ಮತ್ತು ವಡೋದರದಲ್ಲಿ ವಾಸಿಸುತ್ತಿರುವ ಹಿಂದೂ ವಲಸಿಗರಿಗೆ ಕೇಂದ್ರ ಸಚಿವ ಅಮಿತ್ ಶಾ ಅವರು ಸಿಎಎ ಅಡಿಯಲ್ಲಿ ಭಾರತೀಯ ಪೌರತ್ವದ ಪ್ರಮಾಣಪತ್ರಗಳನ್ನು ನೀಡಿದರು.

ಮಮತಾ ದೀದಿ ವಿರೋಧದ ನಡುವೆ ಬಂಗಾಳದಲ್ಲಿ ಪೌರತ್ವ ಪ್ರಮಾಣಪತ್ರ ವಿತರಿಸಿದ ಕೇಂದ್ರ ಸರ್ಕಾರ
ಯಾವುದೇ ಕಾರಣಕ್ಕೂ ಪಶ್ಚಿಮ ಬಂಗಾಳದಲ್ಲಿ CAA ಜಾರಿಯಾಗಲು ಬಿಡುವುದಿಲ್ಲ ಎಂಬ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ (CAA) ಅಡಿಯಲ್ಲಿ ಬಂಗಾಳದಲ್ಲಿ ಪೌರತ್ವ ಪ್ರಮಾಣಪತ್ರ ನೀಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.

'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸಿಎಎ ರದ್ದು: ಕಾಂಗ್ರೆಸ್ ನಾಯಕ ಪಿ. ಚಿದಂಬರಂ
'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರದ್ದುಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದ್ದಾರೆ.

CAA ಅನುಷ್ಠಾನಕ್ಕೆ ತಡೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ಲೀಗ್
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಅಧಿಸೂಚನೆ ನಿಯಮಗಳ ಅನುಷ್ಠಾನಕ್ಕೆ ತಡೆ ನೀಡುವಂತೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಸಿಎಎ ಹೋರಾಟದಿಂದ ಅಖಂಡ ಭಾರತಕ್ಕೆ ಧಕ್ಕೆಯಾಗಬಾರದು: ಎಚ್.ಎಸ್. ವೆಂಕಟೇಶ ಮೂರ್ತಿ
ಪೌರತ್ವ ತಿದ್ದುಪಡಿ ಕಾಯ್ದೆ - ಸಿಎಎ ದೇಶದಲ್ಲಿ ಬಹು ಚರ್ಚೆಗೆ ಒಳಗಾಗಿದ್ದು, ಇಂತಹ ಸಂದರ್ಭದಲ್ಲಿ ದೇಶ ಒಡೆಯದೇ ಅಖಂಡ ಭಾರತದ ರಕ್ಷಣೆಗೆ ಆದ್ಯತೆ ನೀಡಬೇಕಾಗಿದೆ ಎಂದು 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್.ಎಸ್. ವೆಂಕಟೇಶ ಮೂರ್ತಿ ಹೇಳಿದ್ದಾರೆ.

ಸಂವಿಧಾನದ ಆಶಯಕ್ಕೆ ವಿರುದ್ಧವಾದ ಕೇಂದ್ರದ ಸಿಎಎ ಕಾಯ್ದೆಗೆ ನನ್ನ ವಿರೋಧವಿದೆ: ಚಿತ್ರ ನಿರ್ದೇಶಕ ಬಿ.ಸುರೇಶ್
ಕೇಂದ್ರ ಸರಕಾರ ಜಾರಿ ಮಾಡುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಧರ್ಮಾಧಾರಿತವಾಗಿದ್ದು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಆದ್ದರಿಂದ ಈ ಕಾಯ್ದೆಯನ್ನು ವಿರೋಧಿಸುವುದಾಗಿ ಕಿರುತೆರೆ ಸಿನಿಮಾಗಳ ನಿರ್ದೇಶಕ ಬಿ.ಸುರೇಶ್ ಹೇಳಿದ್ದಾರೆ.

