CAA

ಸಿಎಎ ವಿರುದ್ಧ ಪ್ರತಿ ತಿಂಗಳು 2024 ರವರೆಗೆ ಪ್ರತಿಭಟನೆ-ಶತಾಯುಷಿ ದೊರೆಸ್ವಾಮಿ
ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಶತಾಯುಷಿ ದೊರೆಸ್ವಾಮಿ ಹೇಳಿದ್ದಾರೆ.

#ಸಿಎಎ ದೇಶದಲ್ಲಿ ಜಾರಿಯಾದಾಗಲೇ ರಾಜ್ಯದಲ್ಲೂ ಅನುಷ್ಠಾನ: ಮುಖ್ಯಮಂತ್ರಿ ಯಡಿಯೂರಪ್ಪ
ನೂತನ ಸಚಿವರಿಗೆ ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ. ನಾಳೆ ನೂತನ ಸಚಿವರಿಗೆ ಖಾತೆ ಹಂಚಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸಿಎಎ ವಿರುದ್ಧ ಮುಂಬೈನಲ್ಲಿ ಪ್ರತಿಭಟನೆ: ಆಯೋಜಕರು, 300 ಮಹಿಳೆಯರ ವಿರುದ್ಧ ಪ್ರಕರಣ ದಾಖಲು
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ಆಯೋಜನೆ ಮಾಡಿದ್ದ ಹಾಗೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 300 ಮಹಿಳೆಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆಂದು ತಿಳಿದುಬಂದಿದೆ.

ಸಿಎಎ, ಅಸ್ಸಾಂ ಒಪ್ಪಂದದ ಅನುಷ್ಠಾನವನ್ನು ಪ್ರಶ್ನಿಸಿ ಅರ್ಜಿ, ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯ ಸಾಂವಿಧಾನಿಕ ಸಿಂಧುತ್ವ ಮತ್ತು ಅಸ್ಸಾಂ ಒಪ್ಪಂದದ ಪರಿಣಾಮಕಾರಿ ಅನುಷ್ಠಾನವನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಯ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಅಸ್ಸಾಂ ಸೋಷಿಯಲ್ ಜಸ್ಟೀಸ್ ಫೋರಮ್ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಅವರನ್

ಪೊಲೀಸರು ಅನುಮತಿ ನೀಡದಿದ್ದರೂ ಪ್ರತಿಭಟನೆ ಮುಂದುವರೆಸುತ್ತೇನೆ- ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ
ಪೊಲೀಸರು ಅನುಮತಿ ನೀಡದಿದ್ದರೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ 24 ಗಂಟೆಗಳ ಪ್ರತಿಭಟನೆ ನಡೆಸಲಾಗುವುದು ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ತಿಳಿಸಿದ್ದಾರೆ

ಶಾಹೀನ್ ಬಾಗ್ ನಲ್ಲಿ ಆತ್ಮಾಹುತಿ ದಾಳಿಕೋರರನ್ನು ಬೆಳೆಸಲಾಗುತ್ತಿದೆ: ಕೇಂದ್ರ ಸಚಿವ ಗಿರಿರಾಜ್ ಸಿಂಗ್
ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ಮೂಲಕ ಶಾಹೀನ್ ಬಾಗ್ ಆತ್ಮಾಹುತಿ ದಾಳಿಕೋರರನ್ನು ಹುಟ್ಟುಹಾಕುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.

ನಾವು ಎಚ್ಚೆತ್ತುಕೊಳ್ಳದಿದ್ದರೆ ಈ ದೇಶದಲ್ಲಿ ಮೊಘಲ್ ಆಡಳಿತ ಬರುವ ದಿನಗಳು ದೂರವಿಲ್ಲ: ಸಂಸದ ತೇಜಸ್ವಿ ಸೂರ್ಯ
ಇಂದು ದೇಶದ ಬಹುತೇಕ ಸಮುದಾಯಗಳು ಎಚ್ಚರಿಕೆಯಿಂದಿರಬೇಕು, ಇಲ್ಲದಿದ್ದರೆ ಮೊಘಲ್ ಆಡಳಿತ ದೇಶಕ್ಕೆ ಮರಳುವುದಕ್ಕೆ ಹೆಚ್ಚು ಸಮಯವಿಲ್ಲ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಅವರು ಶಹೀನಾ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯನ್ನುದ್ದೇಶಿಸಿ ಈ ಮಾತುಗಳನ್ನು ಆಡಿದ್ದಾರೆ.

#ಸಿಎಎಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ, ಹೊರಗಿನವರ ಪತ್ತೆ ಮಾಡಲು ಎನ್ ಪಿಆರ್ ಬಹುಮುಖ್ಯ: ರಜನಿಕಾಂತ್
ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ನಡೆಯುತ್ತಿರುವ ಹೋರಾಟ ಮುಂದುವರೆದಿರುವಂತೆಯೇ ಇತ್ತ ಸೂಪರ್ ಸ್ಟಾರ್ ರಜನಿಕಾಂತ್ ಇದಕ್ಕೆ ಪ್ರತಿಕ್ರಿಯೆ ನೀಡಿ ಸುದ್ದಿಗೆ ಗ್ರಾಸವಾಗಿದ್ದಾರೆ.

ಸಿಎಎ, ಎನ್ ಆರ್ ಸಿಯಿಂದ ದೇಶದಲ್ಲಿ ಮುಸ್ಲಿಮರ ಜೀವನ ಕಷ್ಟಕರವಾಗಿದೆ: ಮಾಯಾವತಿ
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ ಸಿ)ಯಿಂದಾಗಿ ದೇಶದಲ್ಲಿ ಮುಸ್ಲಿಮರ ಜೀವನ ಕಷ್ಟಕರವಾಗಿದೆ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರು ಟೀಕಿಸಿದ್ದಾರೆ.

