CAA

ಎನ್ ಆರ್ ಸಿ, ಎನ್ ಪಿ ಆರ್ ಮತ್ತು ಪೌರತ್ವ ಕಾಯಿದೆ ವಿರೋಧಿಸಲು ಪಕ್ಷಗಳಿಗೆ ನ್ಯಾಯಮೂರ್ತಿ ಗೋಪಾಲಗೌಡ ಕರೆ
ಪೌರತ್ವ ಮತ್ತು ಎನ್ ಆರ್ ಸಿ ಕಾಯಿದೆ ಸೇರಿದಂತೆ ಬಿಜೆಪಿಯ ಜನವಿರೋಧಿ ನೀತಿಗಳನ್ನು ವಿರೋಧಿಸಿ ರಾಜಕೀಯ ಪಕ್ಷಗಳು ಹೋರಾಟ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲ ಗೌಡ ಹೇಳಿದ್ದಾರೆ.

ಗುಂಡು ಹಾರಿಸುವುದನ್ನು ನಿಲ್ಲಿಸಿ: ಸಿಎಎ ವಿರುದ್ಧ ಲೋಕಸಭೆಯಲ್ಲಿ ದನಿ ಎತ್ತಿದ ವಿರೋಧ ಪಕ್ಷಗಳು
ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರು ದನಿ ಎತ್ತಿದ್ದು, ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸುವುದನ್ನು ನಿಲ್ಲಿಸಿ ಎಂದು ಘೋಷಣೆ ಕೂಗುತ್ತಿದ್ದಾರೆ.

ಮೋದಿ ಸರ್ಕಾರ ಎಲ್ಲರಿಗೂ ಡಿಎನ್‌ಎ ಪರೀಕ್ಷೆ ಮಾಡಿಸಲಿ: ಸಿಎಎ ಕುರಿತು ಬಿಜೆಪಿಯನ್ನು ಕುಟುಕಿದ ಮಹಾರಾಷ್ಟ್ರ ಸಚಿವ
ಎನ್‌ಆರ್‌ಸಿ-ಸಿಎಎ ಕಾನೂನು ಜಾರಿಯಾಗಿದ್ದು ಈ ಕಾಯ್ದೆ ಮೂಲಕ ಭಾರತೀಯ ಮೂಲನಿವಾಸಿಗಳನ್ನು ಗುರುತಿಸುವುದು ಅತ್ಯಂತ ಮುಖ್ಯ ಎಂದಾದರೆ ಎಲ್ಲಾ ಪ್ರಜೆಗಳ ಮೇಲೆ ಡಿಎನ್‌ಎ ಪರೀಕ್ಷೆ ನಡೆಸಿ ಎಂದು ಮಹಾರಾಷ್ಟ್ರ ವಸತಿ ಸಚಿವ ಜಿತೇಂದ್ರ ಅವ್ಹಾದ್ ಹೇಳಿದ್ದಾರೆ. ಅವ್ಹಾದ್ ಅವರು ತಮ್ಮ ಈ ಹೇಳಿಕೆ ಮೂಲಕ ಮೋದಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.

ಪೌರತ್ವ ನಿರಾಕರಣೆ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಬಿಜೆಪಿ ಪ್ರಯತ್ನ: ಸಿದ್ದರಾಮಯ್ಯ ಗಂಭೀರ ಆರೋಪ
ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಜಾರಿ ಬಗೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಕೇಸರಿ ಪಕ್ಷ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಸಿಎಎ ವಿರುದ್ಧ ಆಯೋಜಿಸಲಾಗಿದ್ದ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ ಅವರು, ಸಂವಿಧಾನದ ಮೂಲ ಸ್ವರೂಪ ಮತ್ತು ಮನೋಭಾವಕ್ಕೆ ವಿರುದ್ಧವಾದ ಇಂತಹ ಕಾನೂನುಗಳನ್ನು ರೂಪಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲ

ವಲಸಿಗರನ್ನು ಪತ್ತೆ ಹಚ್ಚಲು ಹೊಸ ಕಾನೂನು ಅಗತ್ಯವಿಲ್ಲ, ಸದ್ಯದ ಕಾನೂನು ಸಾಕು: ಪ್ರಶಾಂತ್ ಭೂಷಣ್
ಅಕ್ರಮ ವಲಸಿಗರನ್ನು ಪತ್ತೆ ಮಾಡಲು ಹೊಸ ಕಾನೂನಿನ ಅಗತ್ಯವಿಲ್ಲ. ಈಗ ಇರುವ ಕಾನೂನುಗಳೇ ಸಾಕು ಎಂದು ಸಾಮಾಜಿಕ ಹೋರಾಟಗಾರ ಮತ್ತು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.

ರಕ್ಷಣಾತ್ಮಕವಾಗಿರುವುದು ಬೇಡ, ಸಂಸತ್ ನಲ್ಲಿ ಸಿಎಎಯನ್ನು ಬಲವಾಗಿ ಸಮರ್ಥಿಸಿಕೊಳ್ಳಿ: ಎನ್ ಡಿಎ ನಾಯಕರಿಗೆ ಪ್ರಧಾನಿ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ ಬಗ್ಗೆ ರಕ್ಷಣಾತ್ಮಕವಾಗಿರುವುದು ಬೇಡ, ಬಲವಾಗಿ ಸಮರ್ಥಿಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಎನ್ ಡಿಎ ನಾಯಕರಿಗೆ ಸೂಚನೆ ನೀಡಿದ್ದಾರೆ.

ಬಜೆಟ್ ಅಧಿವೇಶನಕ್ಕೆ ಮುನ್ನ ಕಾಂಗ್ರೆಸ್ ಪ್ರತಿಭಟನೆ, ಜಾಮಿಯಾ ಶೂಟರ್ ಗೆ ಹಣ ಕೊಟ್ಟಿದ್ದು ಯಾರು?: ರಾಹುಲ್ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಶುಕ್ರವಾರ ಸಂಸತ್ತು ಆವರಣದ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಷ್ಠೆ ಬೇಡ, ಸಿಎಎ ಹಿಂಪಡೆಯಿರಿ ಮೋದಿಗೆ ಸಿಎಂ ಭೂಪೇಶ್ ಪತ್ರ
ದೇಶದ ಉದ್ದಗಲಕ್ಕೂ ಭಾರಿ ಸಂಚಲನ, ತಲ್ಲಣ ಮೂಡಿಸಿರುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಿಂಪಡೆಯುವಂತೆ ಚತ್ತಿಸ್ ಗಡದ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಪಡಿಸಿದ್ದಾರೆ.

ಸಿಎಎ ವಿರುದ್ಧ ಛತ್ತೀಸ್ ಗಢ ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕಾರ
ಕಾಂಗ್ರೆಸ್ ನೇತೃತ್ವದ ಛತ್ತೀಸ್ ಗಢ ಸರ್ಕಾರ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಗುರುವಾರ ನಿರ್ಣಯ ಅಂಗೀಕರಿಸಿದ್ದು, ಇದರೊಂದಿಗೆ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದ ಐದನೇ ರಾಜ್ಯವಾಗಿದೆ.

