CAA

ಸಿಎಎ ಪರ ಜನಬೆಂಬಲ ಪಡೆಯಲು ಬಿಜೆಪಿಯಿಂದ ಟೋಲ್ ಫ್ರೀ ಸಂಖ್ಯೆ
ಹೊಸದಾಗಿ ಜಾರಿಯಾಗಿರುವ ವಿವಾದಾತ್ಮಕ ಪೌರತ್ವ ಕಾನೂನಿಗೆ ತಮ್ಮ ಬೆಂಬಲವನ್ನು ನೋಂದಾಯಿಸಲು ಮಿಸ್ಡ್ ಕರೆಗಳನ್ನು ನೀಡಲು ಜನರಿಗೆ ಅನುಕೂಲವಾಗುವಂತೆ ಟೋಲ್-ಫ್ರೀ ಸಂಖ್ಯೆಯೊಂದಿಗೆ ಆಡಳಿತಾರೂಢ BJP ಬಿಜೆಪಿ ಶುಕ್ರವಾರ ಅಭಿಯಾನವನ್ನು ಪ್ರಾರಂಭಿಸಿದೆ.

ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆ ರಾಜಕೀಯವಾಗಿದ್ದು, ಜನರ ಮನವೊಲಿಸುವ ಯತ್ನ ನಡೆಯುತ್ತಿದೆ: ಅಮಿತ್ ಶಾ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗಳು ರಾಜಕೀಯವಾಗಿದ್ದು, ಕಾಯ್ದೆ ಕುರಿತು ಜನರ ಮನವೊಲಿಸುವ ಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ.

ಸಂವಿಧಾನ ರಕ್ಷಣೆಗೆ ಮತ್ತೊಂದು ಸ್ವಾತಂತ್ರ್ಯ ಚಳವಳಿ ಅಗತ್ಯ; ರಮಾನಾಥ ರೈ
ದೇಶದ ಸಂವಿಧಾನ ವಿರೋಧಿಯಾದ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಕೇಂದ್ರದ ಸರಕಾರದ ವಿರುದ್ಧ ದೇಶದ ಎಲ್ಲಾ ವರ್ಗಗಳ ಜನರು ಎರಡನೆ ಸ್ವಾತಂತ್ರ ಚಳವಳಿ ನಡೆಸುವುದು ಅಗತ್ಯವಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಸಂವಿಧಾನ ಬಾಹಿರ: ಕೇರಳ ರಾಜ್ಯಪಾಲ
ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ರದ್ದುಗೊಳಿಸುವಂತೆ ಒತ್ತಾಯಿಸಿ ರಾಜ್ಯ ವಿಧಾನಸಭೆ ನಿರ್ಣಯ ಅಂಗೀಕರಿಸಿರುವುದು ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಅವರು ಗುರುವಾರ ಹೇಳಿದ್ದಾರೆ.

ಪೌರತ್ವ ಕಾಯ್ದೆ ವಿರುದ್ಧದ ವಿಧಾನಸಭೆ ನಿರ್ಣಯ ಅಕ್ರಮ, ಅಸಂವಿಧಾನಿಕ: ಕೇರಳ ರಾಜ್ಯಪಾಲ
ಪೌರತ್ವ ಕಾಯ್ದೆ ವಿರುದ್ಧದ ರಾಜ್ಯ ವಿಧಾನಸಭೆಯ ನಿರ್ಣಯ ಅಕ್ರಮ ಹಾಗೂ ಅಸಂವಿಧಾನಿಕವಾದದ್ದು ಎಂದು ಕೇರಳ ರಾಜ್ಯ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಗುರುವಾರ ಹೇಳಿದ್ದಾರೆ.

ಸಿಎಎ ಹಿಂಸಾಚಾರದಲ್ಲಿ ಪಾತ್ರ: ಪಿಎಫ್ಐ ವಿರುದ್ದ ಕ್ರಮಕ್ಕೆ ಗೃಹ ಸಚಿವಾಲಯ ಚಿಂತನೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಹಿಂಸಾಚಾರದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಪಾತ್ರವಿದ್ದು, ಸಂಘಟನೆ ವಿರುದ್ಧ ಶೀಘ್ರದಲ್ಲೇ ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಬುಧವಾರ ಹೇಳಿದ್ದಾರೆ.

ವಿರೋಧ ವ್ಯಕ್ತಪಡಿಸುತ್ತಿರುವ ರಾಜ್ಯಗಳಿಗೆ ಸಡ್ಡು ಹೊಡೆಯಲು ಮುಂದಾದ ಕೇಂದ್ರ: ಸಿಎಎ ಅಡಿ ಆನ್'ಲೈನ್ ಪೌರತ್ವ?
ದೇಶದಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿ ಮಾಡುವುದಿಲ್ಲ ಎಂದು ಬಿಜೆಪಿಯೇತರ ಹಲವು ರಾಜ್ಯಗಳು ಘೋಷಿಸಿರುವ ಹಿನ್ನೆಲೆಯಲ್ಲಿ ಆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಟಾಂಗ್ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಉಗ್ರ ಸಂಘಟನೆಗಳು: ನೈಜ ಮುಸ್ಲಿಂರು ತೊಡಗಿಸಿಕೊಂಡಿಲ್ಲ- ಕಟೀಲ್
ದೇಶಾದ್ಯಂತ ನಡೆಯುತ್ತಿರುವ ಪೌರತ್ವ ತಿದ್ದುಪಡಿ ವಿರುದ್ಧದ ಪ್ರತಿಭಟನೆಯಲ್ಲಿ ಉಗ್ರ ಸಂಘಟನೆಗಳು ಭಾಗಿಯಾಗಿದ್ದು, ನೈಜ ಮುಸ್ಲಿಂರು ತೊಡಗಿಸಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಿಎಎ ವಿರೋಧಿ ಪ್ರತಿಭಟನೆಗೆ ಕುಮ್ಮಕ್ಕು ; ಪಿ.ಎಫ್.ಐ. ನಿಷೇಧಕ್ಕೆ ಯೋಗಿ ಸರ್ಕಾರ ಶಿಫಾರಸು
ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದ ಪೌರತ್ವ ತಿದ್ದುಪಡಿ ವಿರೋಧಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇರೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.) ಸಂಘಟನೆಯನ್ನು ನಿಷೇಧಿಸುವಂತೆ ಸಿಎಂ ಯೋಗಿ ಆದಿತ್ಯಾನಾಥ್ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.

