CAA

ಸಿಎಎ, ಎನ್ ಆರ್ ಸಿ ಮತ್ತು ಎನ್ ಪಿಆರ್ ವಿರುದ್ಧ ಸೈಕಲ್ ಜಾಥಾ: ಅಖಿಲೇಶ್ ಚಾಲನೆ
ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರುದ್ಧ ಸಮಾಜವಾದಿ ಶಾಸಕರು ಪಕ್ಷದ ಕಚೇರಿಯಿಂದ ವಿಧಾನಸಭೆಯವರೆಗೂ ಹಮ್ಮಿಕೊಂಡಿದ್ದ ಸೈಕಲ್ ಜಾಥಾಕ್ಕೆ ಎಸ್ ಪಿ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಇಂದು ಚಾಲನೆ ನೀಡಿದರು.

ಕೇರಳ: ಸಿಎಎ ವಿರುದ್ಧ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಪಿಣರಾಯ್ ವಿಜಯನ್
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿರ್ಣಯವೊಂದನ್ನು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

ಪೌರತ್ವ ಕಾಯ್ದೆ ವಿರೋಧಿಸುವ ಮೂಲಕ ಕಾಂಗ್ರೆಸ್ ಅಮಾನವೀಯವಾಗಿ ವರ್ತಿಸುತ್ತಿದೆ: ಯಡಿಯೂರಪ್ಪ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು 'ಜಾಗೃತಿ ಮೂಡಿಸಲು' ಶಾ ನೇತೃತ್ವದಲ್ಲಿ ಬೃಹತ್ ರ‍್ಯಾಲಿ
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಪೌರತ್ವ (ತಿದ್ದುಪಡಿ) ಕಾಯ್ದೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜಸ್ತಾನದ ಜೋಧ್ ಪುರದಲ್ಲಿ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಬೃಹತ್ ರ‍್ಯಾಲಿಯನ್ನು ಆಯೋಜಿಸಲಾಗಿದೆ

“#ಇಂಡಿಯಾ ಸಪೋರ್ಟ್ಸ್ ಸಿಎಎ”: ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ ಪ್ರಧಾನಿ ಮೋದಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶದಾದ್ಯಂತ ತೀವ್ರ ವಿರೋಧ ಹಾಗೂ ಆಕ್ರೋಶಗಳು ವ್ಯಕ್ತವಾಗುತ್ತಿರುವ ನಡುವಲ್ಲೆ ಕಾಯ್ದೆಗೆ ಬೆಂಬಲ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.

ಯಾವುದೇ ಪ್ರತಿಭಟನೆ ನಡೆಸುವ 24 ಗಂಟೆ ಮುನ್ನ ಮಾಹಿತಿ ನೀಡಿ: ವಿದ್ಯಾರ್ಥಗಳಿಗೆ ದೆಹಲಿ ವಿ.ವಿ ಆದೇಶ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹಲವು ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನೆ ಮುಂದುವರಿದಿರುವ ಸಂದರ್ಭದಲ್ಲಿ ದೆಹಲಿ ವಿಶ್ವವಿದ್ಯಾಲಯ ನೊಟೀಸ್ ಜಾರಿ ಮಾಡಿದ್ದು ಯಾವುದೇ ಪ್ರತಿಭಟನೆ ನಡೆಸುವ 24 ಗಂಟೆ ಮೊದಲು ಮಾಹಿತಿ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಹೇಳಿದೆ.

ಪೌರತ್ವ ಕಾಯ್ದೆ ಕುರಿತು ಹೇಳಿಕೆ: ನಿಮ್ಮ ಕೆಲಸ ನೋಡಿಕೊಳ್ಳಿ- ಸೇನಾ ಮುಖ್ಯಸ್ಥ ರಾವತ್ ವಿರುದ್ಧ ಚಿದಂಬರಂ ಕಿಡಿ
ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಹೇಳಿಕೆ ನೀಡಿದ್ದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ಹೇಳಿಕೆಗೆ ಕಿಡಿಕಾರಿರುವ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರು, ನಿಮ್ಮ ಕೆಲಸವನ್ನು ನೋಡಿಕೊಳ್ಳಿ ಎಂದು ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಪೌರತ್ವ ಕಾಯ್ದೆ ಹಿಂಪಡೆಯುವುದಿಲ್ಲ: ಮುಖ್ತಾರ್ ಅಬ್ಬಾಸ್ ನಖ್ವಿ
ಪೌರತ್ವ ಕಾಯ್ದೆ ಮುಸ್ಲಿಂ ಸಮುದಾಯಕ್ಕೆ ಅಪಾಯಕಾರಿಯಲ್ಲ. ಕಾಯ್ದೆಯನ್ನು ಹಿಂಪಡೆಯುವ ಮಾತೇ ಇಲ್ಲ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿಯವರು ಹೇಳಿದ್ದಾರೆ.

ನುಸುಳುಕೋರರ ಮೇಲೆ ರಾಹುಲ್'ಗೆ ಪ್ರೀತಿಯಿದ್ದರೆ, ಇಟಲಿಗೆ ಕರೆದೊಯ್ಯಲಿ: ಗಿರಿರಾಜ್ ಸಿಂಗ್
ನುಸುಳುಕೋರರ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಪ್ರೀತಿಯಿದ್ದರೆ, ಅವರನ್ನು ಇಟಲಿಗೆ ಕರೆದೊಯ್ಯಲಿ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಹೇಳಿದ್ದಾರೆ.

