CAA

ಪೌರತ್ವ ತಿದ್ದುಪಡಿ ಕಾಯ್ದೆಗೂ ಜಾರ್ಖಂಡ್ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ: ಬಿಜೆಪಿ
ಪೌರತ್ವ ತಿದ್ದುಪಡಿ ಕಾಯ್ದೆಗೂ ಜಾರ್ಖಂಡ್ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ಹೇಳಿದೆ.

ಪಂಕ್ಚರ್ ಶಾಪ್, ಗುಜರಿ ಅಂಗಡಿ, ಟೀ ಅಂಗಡಿ, ಮುಸ್ಲಿಮರಿಗೆ ಕಾಂಗ್ರೆಸ್ ನ ಕೊಡುಗೆಗಳು: ನಿತಿನ್ ಗಡ್ಕರಿ ವ್ಯಂಗ್ಯ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವ ಮೂಲಕ ಅಲ್ಪ ಸಂಖ್ಯಾತರನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮತ್ತೆ ಕ್ಷುಲ್ಲಕ ರಾಜಕೀಯ ಮಾಡುತ್ತಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಕಿಡಿಕಾರಿದ್ದಾರೆ.

ಸಿಎಎ ವಿರೋಧಿಸಿ ಬೃಹತ್ ಸಮಾವೇಶ, ಬೆಂಗಳೂರಿನಲ್ಲಿ ಭಾರಿ ಭದ್ರತೆ
ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮುಸ್ಲಿಂ ಶಾಂತಿ ಸೌಹಾರ್ದ ಸಭೆಯ ಬೃಹತ್ ಸಮಾವೇಶದ ಹಿನ್ನಲೆಯಲ್ಲಿ ನಗರದಲ್ಲಿ ಭಾರಿ ಬಿಗಿ ಭದ್ರತೆ ಒದಗಿಸಲಾಗಿದೆ.

ಬೆಂಗಳೂರಿಗರೇ ಗಮನಿಸಿ: ಪೌರತ್ವ ಕಾಯ್ದೆ ವಿರೋಧಿಸಿ ಇಂದು ಮತ್ತೆ ಬೃಹತ್ ರ್ಯಾಲಿ
ಪೌರತ್ವ ಕಾಯ್ದೆಪರವಾಗಿ ನಿನ್ನೆ ಟೌನ್ ಹಾಲ್ ನಲ್ಲಿ ಬೃಹತ್ ರ್ಯಾಲಿ ನಡೆದ ಬೆನ್ನಲ್ಲೇ ಇಂದು ಮತ್ತೆ ಮುಸ್ಲಿಂ ಸಂಘಟನೆಗಳು ಪೌರತ್ವ ಕಾಯ್ದೆ ವಿರೋಧಿಸಿ ಬೃಹತ್ ರ್ಯಾಲಿ ಹಮ್ಮಿಕೊಂಡಿವೆ.

ಗೋಲಿಬಾರ್ ನಲ್ಲಿ ಮೃತಪಟ್ಟವರ ಮನೆಗೆ ಕುಮಾರಸ್ವಾಮಿ ಭೇಟಿ, 5 ಲಕ್ಷ ರೂ ಪರಿಹಾರ ವಿತರಣೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದಿದ್ದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ನಲ್ಲಿ ಮೃತಪಟ್ಟವರ ಸಂತ್ರಸ್ತರನ್ನು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ.

ಪ್ರಚೋದನಾಕಾರಿ ಹೇಳಿಕೆ: ಶಾಸಕ ಯು.ಟಿ.ಖಾದರ್ ವಿರುದ್ಧ ಎಫ್ಐಆರ್ ದಾಖಲು
ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧದ ಪ್ರತಿಭಟನೆ ಕುರಿತು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಾಜಿ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಸಿಎಎ, ಎನ್ಆರ್'ಸಿ ಬಳಿಕ ಎನ್'ಪಿಆರ್'ನತ್ತ ಪ್ರಧಾನಿ ಮೋದಿ ಗುರಿ?
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸುವಲ್ಲಿ ಸಫಲವಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್'ಪಿಆರ್) ಜಾರಿಗೆ ಮುಂದಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಪೌರತ್ವ ರೋಷಾಗ್ನಿ ಆರಿಸಲು ಬಿಜೆಪಿಯಿಂದ 250 ಪತ್ರಿಕಾಗೋಷ್ಠಿ, 1000 ರ್ಯಾಲಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶದಾದ್ಯಂತ ಹೊತ್ತಿಕೊಂಡಿರುವ ಕಿಚ್ಚನ್ನು ಆರಿಸಲು ಮುಂದಾಗಿರುವ ಬಿಜೆಪಿ, ಇದಕ್ಕಾಗಿ ರಾಷ್ಟ್ರಾದಾದ್ಯಂತ ಜನ ಸಂಪರ್ಕ ಕಾರ್ಯಕ್ರಮ ಆಯೋಜನೆಗೆ ನಿರ್ಧಾರ ಮಾಡಿದೆ ಎಂದು ವರದಿಗಳು ತಿಳಿಸಿವೆ.

ಧರ್ಮದ ಹೆಸರಿನಲ್ಲಿ ಪೌರತ್ವ ಸರಿಯಲ್ಲ, ಬಿಜೆಪಿ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ: ಯತೀಂದ್ರ ಸಿದ್ದರಾಮಯ್ಯ
ಧರ್ಮದ ಹೆಸರಿನಲ್ಲಿ ಪೌರತ್ವ ಕೊಡುವುದು ಸರಿಯಾದ ಕ್ರಮವಲ್ಲ, ಪೌರತ್ವ ಸಾಬೀತು ಪಡಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಇತರ ಧರ್ಮಗಳ ಜನರು ಭಾರತದ ಪೌರತ್ವ ಕಳೆದುಕೊಳ್ಳುವ ಆತಂಕವಿದೆ. ಇದು ಸರಿಯಾದ ಕಾಯ್ದೆಯಲ್ಲ ಎಂದು ಶಾಸಕ, ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

