CAA

ಸಿಎಎ, ಕಲಂ 370 ರದ್ದು ನಿರ್ಧಾರದಲ್ಲಿ ನಮ್ಮ ಸರ್ಕಾರ ಅಚಲವಾಗಿದೆ: ಪ್ರಧಾನಿ ಮೋದಿ
ರಾಷ್ಟ್ರೀಯ ಹಿತದೃಷ್ಟಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಪಪಡಿಸಿದ್ದಾರೆ.

ಸಿಎಎ ಕುರಿತು ಕಾಂಗ್ರೆಸ್ ಹಿಂದು, ಮುಸ್ಲಿಮರ ನಡುವೆ ಒಡಕು ಮೂಡಿಸುತ್ತಿದೆ: ನಳಿನ್ ಕುಮಾರ್ ಕಟೀಲ್
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದನಿ ಎತ್ತುವ ಮೂಲಕ ಕಾಂಗ್ರೆಸ್ ಹಿಂದು ಹಾಗೂ ಮುಸ್ಲಿಮರ ನಡುವೆ ಒಡಕು ಮೂಡಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರ ಹೇಳಿದ್ದಾರೆ.

ಸಿಎಎ ಪ್ರತಿಭಟನೆಯಲ್ಲಿ ಬಾಗವಹಿಸಿದ್ದ ಪೋಲಿಷ್ ವಿದ್ಯಾರ್ಥಿಗೆ ಭಾರತವನ್ನು ತೊರೆಯುವಂತೆ ಸೂಚನೆ
ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿ ನಡೆದ ಸಿಎಎ ವಿರೋಧಿ ರ್ಯಾಲಿಯಲ್ಲಿ ಭಾಗವಹಿಸಿದ ಜಾದವ್‌ಪುರ್ ವಿಶ್ವವಿದ್ಯಾಲಯದ ಪೋಲಿಷ್ ವಿದ್ಯಾರ್ಥಿಯನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ದೇಶವನ್ನು ತೊರೆಯುವಂತೆ ಕೇಳಿದೆ ಎಂದು ವಿಶ್ವವಿದ್ಯಾನಿಲಯ ಮೂಲಗಳು ಭಾನುವಾರ ತಿಳಿಸಿವೆ.

ದೆಹಲಿ ಆಯ್ತು, ಈಗ ಮೇಘಾಲಯದಲ್ಲೂ ಸಿಎಎ ಪರ-ವಿರೋಧಿ ಸಂಘರ್ಷ: 10 ಜನರಿಗೆ ಚಾಕು ಇರಿತ, ಇಬ್ಬರ ಸಾವು
42 ಮಂದಿಯ ಸಾವಿಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಪರ-ವಿರೋದಿ ಸಂಘರ್ಷ ಮೇಘಾಲಯಕ್ಕೂ ವ್ಯಾಪಿಸಿದ್ದು, ಶಿಲ್ಲಾಂಗ್ ನಲ್ಲಿ ನಡೆದ ಸಂಘರ್ಷದಲ್ಲಿ 10 ಮಂದಿಗೆ ಚಾಕು ಇರಿಯಲಾಗಿದ್ದು, ಈ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸಿಎಎ ಪ್ರತಿಭಟನೆಗೆ ಹೊತ್ತಿ ಉರಿದ ದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಲಿ ಎಂದ ಸಿಟಿ ರವಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗೆ ರಾಷ್ಟ್ರ ರಾಜಧಾನಿ ದೆಹಲಿ ಉರಿಯುತ್ತಿದ್ದು, ಈ ನಡುವಲ್ಲೇ ದೇಶದಲ್ಲಿ ಏಕರೂಪ ನಾಗರೀಕ ಸಂಹಿತೆ ಜಾರಿಗೆ ತರಲು ಇದು ಸಕಾಲವಾಗಿದೆ ಎಂದು ಕನ್ನಡ-ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿಟಿ. ರವಿಯವರು ಹೇಳಿದ್ದಾರೆ.

ದೆಹಲಿಯಲ್ಲಿ ಬೀಭತ್ಸ ಹಿಂಸೆ: ಪ್ರತಿಭಟನೆ ವೇಳೆ ನಾನಾ ರೀತಿಯ ಮಾರಕಾಸ್ತ್ರ ಬಳಕೆ, ದೇಶವನ್ನೇ ಬೆಚ್ಚಿಬೀಳಿಸುತ್ತಿದೆ ದುಷ್ಕರ್ಮಿಗಳ ಕೃತ್ಯ
ದಂಗೆ, ಕೋಮು ಗಲಭೆ ವೇಳೆ ದುಷ್ಕರ್ಮಿಗಳು, ಕಲ್ಲು, ಮಾರಾಸ್ತ್ರ ಬಳಸಿ ದಾಳಿ ಮಾಡುವುದು ಹೊಸದೇನಲ್ಲ. ಆದರೆ, ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ದುಷ್ಕರ್ಮಿಗಳು ಬಳಸಿರುವ ಅಸ್ತ್ರ, ಮಾರಾಕಾಸ್ತ್ರ ಹಾಗೂ ತಂತ್ರಗಳು ಇಡೀ ದೇಶವನ್ನೇ

ದೆಹಲಿ ಹಿಂಸಾಚಾರ: 20 ಕ್ಕೇರಿದ ಸಾವಿನ ಸಂಖ್ಯೆ, ಪರಿಸ್ಥಿತಿ ಕುರಿತು ಸಂಪುಟ, ಪ್ರಧಾನಿಗೆ ವರದಿ ಸಲ್ಲಿಸಲಿರುವ ದೋವಲ್
ಪೌರತ್ವ ತಿದ್ದುಪಡಿ ಪರ-ವಿರೋಧವಾಗಿ ಈಶಾನ್ಯ ದೆಹಲಿಯಲ್ಲಿ ಶನಿವಾರ ಸಣ್ಣ ಪ್ರಮಾಧಲ್ಲಿ ಆರಂಭವಾಗಿ, ಭಾನುವಾರ-ಸೋಮವಾರಗಳಂದು ಹಿಂಸಾಚಾರ ರೂಪ ಪಡೆದುಕೊಂಡಿದ್ದ ಪ್ರತಿಭಟನೆ, ಮಂಗಳವಾರ ರಕ್ತಪಾತಕ್ಕೆ ಕಾರಣವಾಗಿದೆ. ಮಂಗಳವಾರ ಬೆಳಿಗ್ಗೆಯಿಂದಲೂ ಜಫ್ರಾಬಾದ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಹಿಂಸಾಚಾರ ನಡೆಸಿದ್ದು, 20 ಮಂದಿ ಸಾವನ್ನಪ್ಪಿದ್ದಾರೆ.

ದೆಹಲಿ ಸಿಎಎ ರಕ್ತಪಾತ: ಹಿಂಸಾಚಾರ ಪ್ರಕರಣ ವಿಚಾರಣೆ ನಡೆಸಿದ ದೆಹಲಿ 'ಹೈ', ಗಾಯಾಳುಗಳ ಚಿಕಿತ್ಸೆಗೆ ಪೊಲೀಸರಿಗೆ ಸೂಚನೆ
ರಾಜಧಾನಿ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಹೈಕೋರ್ಟ್ ಮಂಗಳವಾರ ತಡರಾತ್ರಿ ವಿಚಾರಣೆ ನಡೆಸಿದ್ದು ಜನರಿಗೆ ರಕ್ಷಣೆ ಒದಗಿಸುವಂತೆ ಹಾಗೂ ಗಾಯಾಳುಗಳಿಗೆ ಚಿಕಿತ್ಸೆ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಭಾರತದ ಆಂತರಿಕ ವಿಚಾರ, ನಾನು ಯಾವುದೇ ಪ್ರಸ್ತಾಪ ಮಾಡಲ್ಲ: ಟ್ರಂಪ್
ಭಾರತದಲ್ಲಿ ವಿವಾದ ಎಬ್ಬಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋಜಿ ಜತೆಗಿನ ಮಾತುಕತೆಯಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಸ್ತಾಪಿಸಬಹುದು ಎಂಬುದು ಇದೀಗ ಹುಸಿಯಾಗಿದೆ. ಈ ವಿಚಾರದ ಬಗ್ಗೆ ನಾನು ಯಾವುದೇ ಪ್ರಸ್ತಾಪ ಮಾಡಿಲ್ಲ. ಇದು ಭಾರತಕ್ಕೆ ಬಿಟ್ಟ ವಿಚಾರ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ.

