CAA

ದೆಹಲಿ ಹಿಂಸಾಚಾರ: ಪಿಸ್ತೂಲ್ ಹಿಡಿದು ಪೊಲೀಸರತ್ತ ಗುಂಡು ಹಾರಿಸಿದ್ದ ಆರೋಪಿ ಬಂಧನ
ಪೌರತ್ವ ತಿದ್ದುಪಡಿ ವಿರೋಧಿಸಿ ದೆಹಲಿಯ ಜಫ್ರಾಬಾದ್ ನಲ್ಲಿ ನಡೆದ ಪ್ರತಿಭಟನೆ ವೇಳೆ ಪಿಸ್ತೂಲ್ ಹಿಡಿದು ಪೊಲೀಸರ ನುಗ್ಗಿ ಆತಂಕ ಸೃಷ್ಟಿಸಿದ್ದ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ.

ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ: ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತ ವರ್ಚಸ್ಸಿಗೆ ಧಕ್ಕೆ ತರಲು ಪಿತೂರಿ- ಗೃಹ ಸಚಿವಾಲಯ
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೆಹಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಹಿಂಸಾಚಾರದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ವರ್ಚಸ್ಸಿಗೆ ಧಕ್ಕೆ ತರಲು ಪಿತೂರಿ ನಡೆಸಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಕಿಶನ್ ರೆಡ್ಡಿಯವರು ಹೇಳಿದ್ದಾರೆ.

ಟ್ರಂಪ್ ಭೇಟಿ ಬೆನ್ನಲ್ಲೇ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ: ಪೊಲೀಸ್ ಮುಖ್ಯ ಪೇದೆ ಸೇರಿ 5 ಸಾವು, 100 ಜನರಿಗೆ ಗಾಯ
ರಾಜಧಾನಿ ನವದೆಹಲಿಯ ಜಫ್ರಾಬಾದ್ ಪ್ರದೇಶದಲ್ಲಿ ಭಾನುವಾರ ಸಂಜೆ ವೇಳೆಗೆ ನಡೆದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಪರ ಮತ್ತು ವಿರೋಧಿ ಹೋರಾಟಗಾರರ ನಡುವಣ ಸಂಘರ್ಷ, ಸೋಮವಾರ ತೀವ್ರ ಹಿಂಸಾ ಸ್ವರೂಪ ಪಡೆದುಕೊಂಡಿದ್ದು, ಘಟನೆಯಲ್ಲಿ ಪೊಲೀಸ್ ಮುಖ್ಯ ಪೇದೆ ಸೇರಿ ಐವರು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.

ಹಿಂದೂ ಧರ್ಮಕ್ಕೆ ಗಂಡಾಂತರ ಬಂದಿಲ್ಲ: ಮೋದಿ, ಶಾ ಬಂದ ಬಳಿಕ ಗಂಡಾಂತರ - ಸಿಎಂ ಇಬ್ರಾಹಿಂ
ಹಿಂದೂ ಧರ್ಮಕ್ಕೆ ಗಂಡಾಂತರ ಬಂದಿಲ್ಲ. ಮೋದಿ, ಅಮಿತ್ ಶಾ ಬಂದ ಬಳಿಕ ಗಂಡಾಂತರ ಎದುರಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಅಭಿಪ್ರಾಯಪಟ್ಟಿದ್ದಾರೆ.

ಶಹೀನಾಬಾಗ್ ಬಳಿಕ ಜಫರಾಬಾದ್ ನಲ್ಲಿ ಸಿಎಎ ವಿರುದ್ಧ ಪ್ರತಿಭಟನೆ: ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ
ಶಹೀನಾಬಾಗ್ ಬಳಿಕ ಜಫರಾಬಾದ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಭುಗಿಲೆದಿದ್ದು, ಸುಮಾರು 500ಕ್ಕೂ ಹೆಚ್ಚು ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಣಾಮ ದೆಹಲಿಯ ಪ್ರಮುಖ ರಸ್ತೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ತಿಳಿದುಬಂದಿದೆ.

ಅಮೂಲ್ಯ ಪ್ರಕರಣದ ಮೂಲಕ ಸಿಎಎ ಕುರಿತು ಜನರ ಗಮನ ಬೇರೆಡೆಗೆ ಸೆಳೆಯಲೂ ಬಿಜೆಪಿ ಯತ್ನ: ವಿಪಕ್ಷಗಳು
ಅಮೂಲ್ಯ ವಿರುದ್ಧದ ದೇಶದ್ರೋಹ ಪ್ರಕರಣದ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನರ ಗಮನ ಬೇರೆಡೆಗೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ಸಿಎಎ ಬಗ್ಗೆ ಭಯಪಡುವ ಅಗತ್ಯವಿಲ್ಲ: ಪ್ರಧಾನಿ ಮೋದಿ ಭೇಟಿ ಬಳಿಕ ಉದ್ಧವ್ ಠಾಕ್ರೆ ಹೇಳಿಕೆ
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ದೇಶದ ಯಾವುದೇ ಪ್ರಜೆ ಅಥವಾ ದೇಶದ ಅಲ್ಪ ಸಂಖ್ಯಾತರು ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಅಮೂಲ್ಯಾಗೆ ನಕ್ಸಲ್ ನಂಟು: ಮುಖ್ಯಮಂತ್ರಿ ಯಡಿಯೂರಪ್ಪ
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಅಮೂಲ್ಯಾ ಲಿಯೋನಾಗೆ ನಕ್ಸಲ್ ನಂಟಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಶಾಹೀನ್ ಶಾಲೆಯ ವಿದ್ಯಾರ್ಥಿಗಳ ವಿಚಾರಣೆ ಕಾನೂನುಬದ್ಧ; ಹೈಕೋರ್ಟ್‌ಗೆ ಸರ್ಕಾರ ಹೇಳಿಕೆ
ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ನಾಟಕ ಪ್ರದರ್ಶಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಬೀದರ್ ನಗರದ ಶಾಹಿನ್ ಶಾಲಾ ಮಕ್ಕಳ ವಿಚಾರಣೆ ನಡೆಸುವಾಗ ಪೊಲೀಸರಿಂದ ಯಾವುದೇ ಕಾನೂನು ಹಾಗೂ ನಿಯಮಗಳು ಉಲ್ಲಂಘನೆಯಾಗಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಹೇಳಿಕೆ ನೀಡಿದೆ.

