cabinet expansion

ಸಂಪುಟ ವಿಸ್ತರಣೆ ಕಸರತ್ತು: ಯಾರಿಗುಂಟು ಯಾರಿಗಿಲ್ಲ? ಹಿರಿಯರಿಗೆ ಬೇವು-ಕಿರಿಯರಿಗೆ ಬೆಲ್ಲ!
ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂಪುಟ ವಿಸ್ತರಣೆಗೆ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ, ಮೂರ್ನಾಲ್ಕು ಬಾರಿ ಗೆದ್ದಿರುವ ಹಿರಿಯರು ಹಾಗೂ ಹೊಸ ಮುಖಗಳು ಈ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಸಂಪುಟ ವಿಸ್ತರಣೆ ನಂತರ ಭುಗಿಲೆದ್ದ ಅಸಮಾಧಾನದ ಬೇಗುದಿ: ಒಳಗೊಳಗೆ ಕುದಿಯುತ್ತಿರುವ ಶಾಸಕರು!
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನೆಲ್ಲೇ ಅಸಮಾಧಾನದ ಕಟ್ಟೆಯೊಡೆದಿದೆ. ಕರ್ನಾಟಕ ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯದ ಹೊಗೆ ಹೊತ್ತಿದೆ ಎಂದು ಮೂಲಗಳು ತಿಳಿಸಿವೆ.

ಸಚಿವ ಸಂಪುಟ ವಿಸ್ತರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಕೈ ಮೇಲು: ಲಿಂಗಾಯತ- ದಲಿತರಿಗೆ ಸಿಂಹಪಾಲು!
ರಾಜ್ಯದ ಗಮನ ಸೆಳೆದಿದ್ದ ಸಚಿವ ಸಂಪುಟ ವಿಸ್ತರಣೆ ಮುಗಿದಿದೆ, ಸಿಎಂ ಸಿದ್ದರಾಮಯ್ಯ ಸಂಪುಟಕ್ಕೆ 24 ಸಚಿವರ ಸೇರ್ಪಡೆಯಾಗಿದೆ. ಹಲವು ಸರಣೆ ಸಭೆಗಳ ಬಳಿಕ ಕಾಂಗ್ರೆಸ್ ಸರಕಾರದ ನೂತನ ಸಚಿವರ ಪಟ್ಟಿ ಶುಕ್ರವಾರ ಬಿಡುಗಡೆಯಾಗಿದೆ.

ಸಿದ್ದರಾಮಯ್ಯ ಸಂಪುಟ ಸಂಪೂರ್ಣ ಭರ್ತಿ: ಶೆಟ್ಟರ್, ಸವದಿ ಔಟ್; ಯಾವ ಸಮುದಾಯಕ್ಕೆ ಎಷ್ಟು ಪ್ರಾತಿನಿಧ್ಯ?
ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಯಾರೆಲ್ಲಾ ಸೇರ್ಪಡೆಯಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ಸಂಪುಟ ವಿಸ್ತರಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದ್ದು, ಇಂದು 24 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಂಪುಟ ಸರ್ಕಸ್: ಅಂತಿಮ ಸುತ್ತಿನ ಚರ್ಚೆ ಬಳಿಕ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ವಾಪಸ್
ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆಯ ಬಳಿಕ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾರೆ.

ನಾಳೆ ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆಯೂ ಆಗಲಿದೆ: ಸಚಿವ ಕೆಎಚ್ ಮುನಿಯಪ್ಪ
ಶನಿವಾರ ಮಧ್ಯಾಹ್ನ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಸಂಜೆ ವೇಳೆಗೆ ಖಾತೆ ಹಂಚಿಕೆಯಾಗಲಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಶುಕ್ರವಾರ ಹೇಳಿದ್ದಾರೆ. ನಾಲ್ಕೈದು ಸಚಿವ ಸ್ಥಾನಗಳನ್ನು ಹೊರತುಪಡಿಸಿ ಉಳಿದ ಸ್ಥಾನಗಳನ್ನು ಒಂದೇ ದಿನದಲ್ಲಿ ಭರ್ತಿ ಮಾಡಲಾಗುವುದು ಎಂದು ಹೇಳಿದರು.

ಸಂಪುಟ ಸರ್ಕಸ್: ಇನ್ನೂ ಅಂತಿಮವಾಗದ ಸಚಿವರ ಪಟ್ಟಿ, ಆದರೆ ಶನಿವಾರ ಪ್ರಮಾಣವಚನ ಫಿಕ್ಸ್
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಚಿವ ಸಂಪುಟ ವಿಸ್ತರಣೆ ಸಂಬಂಧ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ತೀವ್ರ ಕಸರತ್ತು ನಡೆಸುತ್ತಿದ್ದು, ಸಚಿವರ ಪಟ್ಟಿ ಇನ್ನೂ ಅಂತಿಮವಾಗಿಲ್ಲ.

ಸಚಿವ ಸಂಪುಟ ವಿಸ್ತರಣೆ: ಖಾತೆ ಹಂಚಿಕೆ ಕಸರತ್ತು: ದೆಹಲಿಯಲ್ಲಿ ಸಿದ್ದರಾಮಯ್ಯ- ಡಿಕೆ.ಶಿವಕುಮಾರ್; ಹೈಕಮಾಂಡ್ ಜೊತೆ ಫೈನಲ್ ಸಭೆ!
ಮುಖ್ಯಮಂತ್ರಿ ಸ್ಥಾನದ ಕುರಿತು ಸಿದ್ದರಾಮಯ್ಯ-ಡಿಕೆ.ಶಿವಕುಮಾರ್ ನಡುವಿನ ಹೋರಾಟದ ಬಳಿಕ ಇದೀಗ ಉಭಯ ನಾಯಕರು ತಮ್ಮ ನಿಷ್ಠಾವಂತರಿಗೆ ಸಚಿವ ಸ್ಥಾನ ದೊರಕುವಂತೆ ಮಾಡಲು ಹಗ್ಗಜಗ್ಗಾಟ ನಡೆಸುತ್ತಿದ್ದಾರೆ. ಮತ್ತೊಂದೆಡೆ ದಂಡು ದಾಳಿ ಕಟ್ಟಿಕೊಂಟು ಸಚಿವ ಆಕಾಂಕ್ಷಿಗಳು ಹೈಕಮಾಂಡ್ ಮಟ್ಟದಲ್ಲಿಯೇ ಲಾಬಿ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿಗಳಿಂದಲೇ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ: ಡಿ.ಕೆ.ಶಿವಕುಮಾರ್
ಮುಖ್ಯಮಂತ್ರಿಗಳಿಂದಲೇ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಸಂಪುಟ ವಿಸ್ತರಣೆ ಮಾಡುವ ಅಧಿಕಾರ ಅವರಿಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

