cabinet expansion

ಅಮಿತ್ ಶಾ ಭೇಟಿ: ಗರಿಗೆದರಿದ ಸಂಪುಟ ವಿಸ್ತರಣೆ ಚಟುವಟಿಕೆ, ಮನವೊಲಿಸಲು ಯಡಿಯೂರಪ್ಪ ಕಸರತ್ತು
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜ್ಯ ಭೇಟಿ ಹಿನ್ನೆಲೆಯಲ್ಲಿ ಮಂತ್ರಿಮಂಡಲ ವಿಸ್ತರಣೆ ಚಟುವಟಿಕೆ ಚುರುಕು ಪಡೆದಿದ್ದು,

ಈ ವಾರಾಂತ್ಯ ಅಮಿತ್ ಶಾ ರಾಜ್ಯ ಭೇಟಿ,ಸಂಪುಟ ವಿಸ್ತರಣೆ ಚರ್ಚೆ?: ವ್ಯಾಪಕ ಭದ್ರತೆ
ನಾಳೆ ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಮಿತ್ ಶಾ ಜೊತೆ ಬಹು ನಿರೀಕ್ಷಿತ, ಈಗಾಗಲೇ ವಿಳಂಬವಾಗಿರುವ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

ಯಾರೋ ಹೇಳಿದ ಮಾತ್ರಕ್ಕೆ ಸಂಪುಟಕ್ಕೆ ಸೇರಿಸಿಕೊಳ್ಳಲ್ಲ: ಸಿಎಂ ಬಿಎಸ್ ಯಡಿಯೂರಪ್ಪ
ಯಾರೋ ಹೇಳಿದ, ಕೇಳಿದ ಮಾತ್ರಕ್ಕೆ ಎಲ್ಲರಿಗೂ ಮಂತ್ರಿಮಂಡಲದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ. ಯಾರಿಗೆ ಯಾವ ಹುದ್ದೆ ಕೊಡಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ದಾವೂಸ್ ಗೆ ತೆರಳುವ ಮುನ್ನವೇ ಸಂಪುಟ ವಿಸ್ತರಣೆ: ನಾಳೆಯೇ ದೆಹಲಿಗೆ; ಯಡಿಯೂರಪ್ಪ
ದೆಹಲಿ ಚುನಾವಣೆ ನಂತರ ಸಂಪುಟ ವಿಸ್ತರಣೆ ಎನ್ನುವುದೆಲ್ಲ ಸುಳ್ಳು. ಮಂತ್ರಿಮಂಡಲ ವಿಸ್ತರಣೆ ಸಂಬಂಧ ಸತ್ಯವಿಲ್ಲದ ಸುದ್ದಿಗಳು ಹರಿದಾಡುತ್ತಿವೆ. ಸಾಧ್ಯವಾದರೆ ನಾಳೆಯೇ ದೆಹಲಿಗೆ ತೆರಳುತ್ತಿದ್ದು ಈ ತಿಂಗಳಾಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ.

ನಡೆಯದ ಸಂಪುಟ ವಿಸ್ತರಣೆ: ಆಕಾಂಕ್ಷಿಗಳಲ್ಲಿ ಅಸಮಾಧಾನ, ದುಗುಡ-ದುಮ್ಮಾನ
ಸಂಪುಟ ವಿಸ್ತರಣೆ ನಡೆಯದಿರುವ ಹಿನ್ನೆಲೆಯಲ್ಲಿ ಸಚಿವಕಾಂಕ್ಷಿಗಳಲ್ಲಿ ನಿರಾಸೆ ಅಸಮಾಧಾನ ಮೂಡಿದೆ. ಸಂಪುಟ ವಿಸ್ತರಣೆ ಸಂಬಂಧ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ಔಪಚಾರಿಕ ಭೇಟಿ ಕೂಡ ಮುಂದೂಡಲಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿ ಪ್ರವಾಸ ರದ್ದು
ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೆಹಲಿ ಪ್ರವಾಸ ರದ್ದಾಗಿದೆ.

ಹೈಕಮಾಂಡ್'ಗೆ ದೆಹಲಿ ಗದ್ದುಗೆ ಚಿಂತೆ: ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ ಸಾಧ್ಯತೆ
ಜಾರ್ಖಾಂಡ್ ಚುನಾವಣೆ ಬಳಿಕ ಬಿಜೆಪಿ ಕೇಂದ್ರೀಯ ನಾಯಕತ್ವ ಇದಿಗ ದೆಹಲಿ ಚುನಾವಣೆಯತ್ತ ಗಮನ ಹರಿಸಿದ್ದು, ಇದರ ಪರಿಣಾಮ ರಾಜ್ಯ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬವಾಗುವ ಸಾದ್ಯತೆಗಳಿವೆ.

ವಿದೇಶಕ್ಕೆ ಹೋಗುವ ಮುನ್ನ ಸಂಪುಟ ವಿಸ್ತರಣೆ ಮಾಡುವ ಅಪೇಕ್ಷೆ ಇದೆ: ಸಿಎಂ ಯಡಿಯೂರಪ್ಪ
8-10 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, ನಾನು ವಿದೇಶಕ್ಕೆ ಹೋಗುವ ಮುನ್ನ ಸಂಪುಟ ವಿಸ್ತರಣೆ ಮಾಡುವ ಅಪೇಕ್ಷೆ ಇದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಸಂಪುಟ ವಿಸ್ತರಣೆ ಬಗ್ಗೆ ಯಾರಿಗೂ ಅಸಮಾಧಾನ ಇಲ್ಲ: ಮಹಾ ಡಿಸಿಎಂ ಅಜಿತ್ ಪವಾರ್
ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಶಿವಸೇನೆಯಲ್ಲಿ ಅಸಮಾಧಾನ ಭುಗಿಲೆದ್ದಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು, ಸಂಪುಟ ವಿಸ್ತರಣೆ ಬಗ್ಗೆ ಯಾರಿಗೂ ಅಸಮಾಧಾನ ಇಲ್ಲ ಎಂದು ಭಾನುವಾರ ಹೇಳಿದ್ದಾರೆ.

