cabinet expansion

ಗೆದ್ದವರಿಗಷ್ಟೇ ಸಚಿವ ಸ್ಥಾನ, ತಿಂಗಳಾಂತ್ಯಕ್ಕೆ ಸಂಪುಟ ವಿಸ್ತರಣೆ: ಸಿಎಂ ಯಡಿಯೂರಪ್ಪ
ಉಪಚುನಾವಣೆಯಲ್ಲಿ ಗೆದ್ದ ನಾಯಕರಿಗಷ್ಟೇ ಸಚಿವ ಸ್ಥಾನವನ್ನು ನೀಡಲಾಗುತ್ತಿದ್ದು, ಪ್ರಸಕ್ತ ತಿಂಗಳಿನ ಕೊನೆಯ ವಾರದಲ್ಲಿ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಸಂಪುಟ ವಿಸ್ತರಣೆ: ಆಕಾಂಕ್ಷಿಗಳಿಗೆ 'ಸಾಂತಾ ಕ್ಲಾಸ್'ರಂತೆ ಕಾಣುತ್ತಿದ್ದಾರೆ ಸಿಎಂ ಯಡಿಯೂರಪ್ಪ
ಉಪಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಿ ಸರ್ಕಾರ ಸುಭದ್ರಗೊಂಡು ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿರುವಾಗಲೇ ಸಚಿವ ಸ್ಥಾನಕ್ಕೆ ಲಾಬಿ ಆರಂಭವಾಗಿದ್ದು, ಇದೀಗ ಸಚಿವಾಕಾಂಕ್ಷಿಗಳಿಗೆ ಸಿಎಂ ಯಡಿಯೂರಪ್ಪ ಅವರು ಕ್ರಿಸ್ ಮಸ್ ವೇಳೆ ಉಡುಗೊರೆ ನೀಡುವ ಕ್ರಿಸ್ ಮಸ್ ತಾತಾ 'ಸಾಂತಾ ಕ್ಲಾಸ್' ರಂತೆ ಕಾಣಿಸಲು ಆರಂಭಿಸಿದ್ದಾರೆ.

ಸಚಿವ ಸ್ಥಾನಕ್ಕೆ ಹೆಚ್ಚಿದ ಒತ್ತಡ: ಬಿಎಸ್'ವೈಗೆ ಕಗ್ಗಂಟಾಗಿ ಪರಿಣಮಿಸಿದ ಸಂಪುಟ ವಿಸ್ತರಣೆ
ಉಪಚುನಾವಣೆ ಅಂತ್ಯಗೊಂಡ ಬಳಿಕ ಸಚಿವ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಒತ್ತಡ ಹೆಚ್ಚಾಗುತ್ತಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಶಾಸಕರು ಇದೀಗ ಸಮಯವನ್ನು ವ್ಯರ್ಥ ಮಾಡದೆ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ಆರಂಭಿಸಿದ್ದಾರೆ.

ಮಹಾರಾಷ್ಟ್ರ: ಉದ್ಧವ್ ಠಾಕ್ರೆ ಸಂಪುಟ ವಿಸ್ತರಣೆಗೆ ತಲೆನೋವಾದ ಹಿರಿಯ ನಾಯಕರು!
ಮಹಾರಾಷ್ಟ್ರ ಸಂಪುಟ ವಿಸ್ತರಣೆಗೆ ಹಿರಿಯ ನಾಯಕರುಗಳು ತಲೆನೋವಾಗಿ ಪರಿಣಮಿಸಿದ್ದಾರೆ. ಹಿರಿಯರು ಕಿರಿಯ ನಾಯಕರುಗಳಿಗೆ ಸಚಿವ ಸ್ಥಾನವನ್ನು ಬಿಟ್ಟು ಕೊಡಲು ಸಿದ್ಧರಿಲ್ಲ. ಅವರಿಲ್ಲದೆ ಸರ್ಕಾರ ಏನು ಮಾಡಲು ಸಾಧ್ಯವಿಲ್ಲ ಎಂಬ ಕಲ್ಪನೆಯಿಂದ ಹೊರಬರಬೇಕಾಗಿದೆ ಎಂದು ಶಿವಸೇನೆ ಹೇಳಿದೆ.

ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ: ಸಚಿವ ಸಿ.ಟಿ.ರವಿ
ಸಚಿವ ಸಂಪುಟ ವಿಸ್ತರಿಸುವುದು ಇಲ್ಲವೇ ಪುನಾರಚಿಸುವುದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಪರಮಾಧಿಕಾರ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಒಂದೆಡೆ ಅಮಿತ್ ಶಾ ಬ್ಯುಸಿ, ಇನ್ನೊಂದೆಡೆ ಧನುರ್ಮಾಸ: ಸಂಕ್ರಾಂತಿ ಬಳಿಕವಷ್ಟೇ ನೂತನ ಶಾಸಕರಿಗೆ ಸಚಿವ ಭಾಗ್ಯ?
ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರಲ್ಲಿ 12 ಮಂದಿ ಬಿಜೆಪಿಯಿಂದ ಮತ್ತೆ ಆರಿಸಿ ಬಂದು ಬಿಜೆಪಿ ನೇತೃತ್ವದ ಸರ್ಕಾರ ಸುರಕ್ಷಿತವಾಗಿದೆ. ಇನ್ನಿರುವುದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ವಿಸ್ತರಣೆ.

ಸಂಪುಟ ವಿಸ್ತರಣೆ ಕಸರತ್ತು: ಖಾತೆಗಳ 'ಹೊರೆ' ಇಳಿಸಲು ಸಿದ್ದರಾದ ಬಿಎಸ್ ವೈ
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ಮೇಲಿರುವ ಖಾತೆಗಳ ಭಾರ ಇಳಿಸಿಕೊಳ್ಳಲು ನಿರ್ಧರಿಸಿದ್ದಾರೆ. ಹೊಸದಾಗಿ ಚುನಾಯಿತರಾಗಿರುವ ಶಾಸಕರಿಗೆ ತಮ್ಮ ಬಳಿಯಿರುವ ಹೆಚ್ಚುವರಿ ಖಾತಿ ಹಂಚಿಕೆ ಮಾಡು ಯಡಿಯೂರಪ್ಪ ತೀರ್ಮಾನಿಸಿದ್ದಾರೆ.

ಪೌರತ್ವ ಮಸೂದೆ ಬಿಡಿ, ಬಿಎಸ್'ವೈಗಿದು ಸಂಪುಟ ವಿಸ್ತರಣೆಯ ಸಮಯ
ದೇಶದಾದ್ಯಂತ ಪೌರತ್ವ (ತಿದ್ದುಪಡಿ) ಮಸೂದೆ ಕುರಿತಂತೆ ಭಾರೀ ಚರ್ಚೆ ಹಾಗೂ ವಿರೋಧ ವ್ಯಕ್ತವಾಗುತ್ತಿದ್ದು, ಪೌರತ್ವ ಮಸೂದೆ ಕುರಿತು ಇಡೀ ರಾಷ್ಟ್ರವೇ ತಲೆಕೆಡಿಸಿಕೊಂಡಿದೆ. ಆದರೆ, ಯಡಿಯೂರಪ್ಪ ಅವರಿಗೆ ಮಾತ್ರ ಸಂಪುಟ ವಿಸ್ತರಣೆ ಕುರಿತು ತಲೆಬಿಸಿ ಶುರುವಾಗಿದೆ.

ಸಚಿವ ಸಂಪುಟ ವಿಸ್ತರಣೆ ಕುರಿತು ವರಿಷ್ಠರು ಹೇಳಿದಂತೆ ತೀರ್ಮಾನ:ಸಿಎಂ ಬಿ ಎಸ್ ಯಡಿಯೂರಪ್ಪ
ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಬಗ್ಗೆ ಬಿಜೆಪಿ ವರಿಷ್ಠರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

