cabinet expansion

ಸಂಪುಟ ವಿಸ್ತರಣೆ ಕುರಿತು ಯಾವುದೇ ಚಿಂತನೆಗಳಿಲ್ಲ: ಬಿಜೆಪಿ
ಪ್ರವಾಹ ಪೀಡಿತರಿಗೆ ಪರಿಹಾರ ನೀಡುವುದರತ್ತ ರಾಜ್ಯ ಸರ್ಕಾರ ಗಮನ ಹರಿದಿದ್ದು, ಪ್ರಸ್ತುತವಂತೂ ಸಚಿವ ಸಂಪುಟ ವಿಸ್ತರಣೆಯಿಲ್ಲ ರಾಜ್ಯದ ಆಡಳಿತಾರೂಢ ಬಿಜೆಪಿ ಪಕ್ಷ ಶನಿವಾರ ಹೇಳಿದೆ.

ಸಚಿವರಿಗೆ ಖಾತೆ ಹಂಚಿಕೆ: ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ?
ನೂತನ ಸಚಿವರುಗಳಿಗೆ ಇಂದು ಮಧ್ಯಾಹ್ನ ಖಾತೆ ಹಂಚಿಕೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದಾರೆ.ಇಂದೇ ಖಾತೆ ಹಂಚಿಕೆ ಮಾಡುವುದಾಗಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಯಾರಿಗೆ ಯಾವ ಖಾತೆ ದೊರೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

ಸಚಿವ ಸ್ಥಾನ ಸಿಗದಿರುವುದಕ್ಕೆ ತಮಗೆ ಯಾವುದೇ ಬೇಸರವಿಲ್ಲ: ಮುರುಗೇಶ್ ನಿರಾಣಿ
ಸಚಿವ ಸ್ಥಾನ ಸಿಗದಿರುವುದಕ್ಕೆ ತಮಗೆ ಯಾವುದೇ ಬೇಸರವಿಲ್ಲ, ನಾನು ಇನ್ನೂ 25 ವರ್ಷಗಳ ಕಾಲ ಕೆಲಸ ಮಾಡುವ ಅವಕಾಶವಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯಿಸಿದ್ದಾರೆ.

ಇಂದು ಸಂಜೆ ದೆಹಲಿಗೆ, ಖಾತೆ ಹಂಚಿಕೆ ಬಗ್ಗೆ ಅಮಿತ್ ಷಾರೊಂದಿಗೆ ಚರ್ಚೆ: ಬಿ.ಎಸ್.ಯಡಿಯೂರಪ್ಪ
ನೂತನ ಸಚಿವರಿಗೆ ಖಾತೆಗಳ ಹಂಚಿಕೆ ವಿಷಯವಾಗಿ ಇಂದು ಸಂಜೆ ದೆಹಲಿಗೆ ಭೇಟಿ ನೀಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರೊಂದಿಗೆ ಬಗ್ಗೆ ಚರ್ಚಿಸಿ ಇತ್ಯರ್ಥ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಇಲ್ಲಿ ತಿಳಿಸಿದ್ದಾರೆ..

ಸಚಿವ ಸ್ಥಾನಕ್ಕಾಗಿ ಬಂಡಾಯ ಸಾರುವುದಿಲ್ಲ , ಪಕ್ಷದ ನಿಷ್ಠಾವಂತ : ಎಂ ಪಿ ರೇಣುಕಾಚಾರ್ಯ
ಸಚಿವಸ್ಥಾನಕ್ಕಾಗಿ ನಾನು ಪಕ್ಷದ ವಿರುದ್ಧ ಬಂಡಾಯ ಸಾರುವುದಿಲ್ಲ ಎಂದು ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.

17 ಸಚಿವರ ಪದಗ್ರಹಣ: ಹಳೇ ಮೈಸೂರಿಗಿಲ್ಲ ಒಂದೂ ಸ್ಥಾನ: ಬಿಎಸ್ ವೈ ಕಾಲಿಗೆರಗಿದ ರಾಮುಲು, ಅಶ್ವತ್ಥ ನಾರಾಯಣ
ಕಳೆದ 26 ದಿನಗಳಿಂದ ಗಜ ಪ್ರಸವದಂತಾಗಿದ್ದ ಸಂಪುಟ ವಿಸ್ತರಣೆ ಕೊನೆಗೂ ಇಂದು ನೆರೆವೇರಿದೆ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಇಂದು 17 ಶಾಸಕರು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದ ಜ್ವಾಲಾಮುಖಿ
17 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಕೊನೆಯ ಕ್ಷಣದವರೆಗೂ ಸಚಿವರು ಯಾರಾಗಲಿದ್ದಾರೆ ಎಂಬುದು ರಹಸ್ಯವಾಗೇ ಉಳಿದಿತ್ತು. ...

ಸಂಪುಟ ರಚನೆಗೆ ಅಮಿತ್ ಶಾ ಅಂಕಿತ; ನೂತನ ಸಚಿವರ ಪಟ್ಟಿ ಇಲ್ಲಿದೆ
ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಎಲ್ಲರೂ ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಸಚಿವ ಸಂಪುಟ ರಚನೆಗೆ ಕೊನೆಗೂ ಅಧಿಕೃತ ಮುದ್ರೆ ಬಿದ್ದಿದೆ.

ಮಂಗಳವಾರ ಯಾರಿಗೆ ಮಂಗಳ? ಅಂತಿಮ ಪಟ್ಟಿಯಲ್ಲಿ ತಮ್ಮ ಹೆಸರಿಗಾಗಿ ಕಾಯುತ್ತಿರುವ ಶಾಸಕರು!
ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಮಂಗಳವಾರ ನಡೆಯಲಿದ್ದು, ಯಾರ್ಯಾರು ಯಡಿಯೂರಪ್ಪ ಸಂಪುಟಕ್ಕೆ ಸೇರಲಿದ್ದಾರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ...

