cabinet meeting

ಜೂನ್ 1ಕ್ಕೆ ಎರಡನೇ ಸಚಿವ ಸಂಪುಟ ಸಭೆ: ಅಂದೇ ಕಾಂಗ್ರೆಸ್ '5 ಗ್ಯಾರಂಟಿ' ಯೋಜನೆಗಳ ಜಾರಿ?
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 15 ದಿನಗಳು ಕಳೆದಿದೆ. ಚುನಾವಣಾ ಪೂರ್ವ ಭರವಸೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ಪ್ರತಿಪಕ್ಷಗಳ ನಾಯಕರು ಆಗ್ರಹಿಸುತ್ತಿದ್ದರೆ ಇತ್ತ ಸಾರ್ವಜನಿಕರು ಕೂಡ ಒತ್ತಡ ಹಾಕುತ್ತಿದ್ದಾರೆ.

ಐದು ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ, ಮುಂದಿನ ಸಂಪುಟ ಸಭೆ ಬಳಿಕ ಅಧಿಕೃತ ಘೋಷಣೆ: ಸಿಎಂ ಸಿದ್ದರಾಮಯ್ಯ
ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಕರ್ನಾಟಕ: ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ
ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ ನಡೆಸುವುದಾಗಿ ಹೇಳಿದೆ.

ಸಿದ್ದರಾಮಯ್ಯ ನೇತೃತ್ವದಲ್ಲಿಂದು ಮೊದಲ ಸಂಪುಟ ಸಭೆ: 5 ಗ್ಯಾರಂಟಿಗಳತ್ತ ಎಲ್ಲರ ಚಿತ್ತ
ಶನಿವಾರದಿಂದ ರಾಜ್ಯದಲ್ಲಿ ಹೊಸ ಸರ್ಕಾರ ಆಡಳಿತ ನಡೆಸಲಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಂದು ವಿಧಾನಸೌಧದಲ್ಲಿ ಮೊದಲ ಸಂಪುಟ ಸಭೆ ನಡೆಯಲಿದೆ. ಹೀಗಾಗಿ ರಾಜ್ಯದ ಜನರ ಚಿತ್ತ 5 ಗ್ಯಾರಂಟಿಗಳತ್ತ ನೆಟ್ಟಿದೆ.

ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕೊನೆಯ ಸಚಿವ ಸಂಪುಟ ಸಭೆ, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಣೆ ಸಾಧ್ಯತೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ತಮ್ಮ ಸರ್ಕಾರದ ಕೊನೆಯ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವೇಳೆ ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳು ಮತ್ತು ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ.

'ಬಿಎಂಎಸ್ ವಿಶ್ವವಿದ್ಯಾಲಯ'ಕ್ಕೆ ಸಂಪುಟ ಸಮ್ಮತಿ
ಬಿಎಂಎಸ್ ಶಿಕ್ಷಣ ಸಂಸ್ಥೆಯನ್ನು ವಿಶ್ವವಿದ್ಯಾಲಯ ಮಾಡುವ ಪ್ರಸ್ತಾವನೆಗೆ ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಫೆ.10 ರಿಂದ ವಿಧಾನಮಂಡಲ ಬಜೆಟ್ ಅಧಿವೇಶನ, ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
ಮುಂದಿನ ತಿಂಗಳ 10 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಂಜೆ ಸಚಿವ ಸಂಪುಟ ಸಭೆ: ಮೀಸಲಾತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಹತ್ವದ ಚರ್ಚೆ ನಿರೀಕ್ಷೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ಗುರುವಾರ ಸಂಜೆ ಮಹತ್ವದ ಸಚಿವ ಸಂಪುಟ ಸಭೆ ಬೆಳಗಾವಿಯಲ್ಲಿ ನಡೆಯಲಿದೆ. ವಿವಿಧ ವರ್ಗಗಳಿಗೆ ಮೀಸಲಾತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯುವ ನಿರೀಕ್ಷೆ ಇದೆ.

ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ
ರಾಮನಗರ ಜಿಲ್ಲೆಯ ಅರ್ಚಕರಹಳ್ಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ (RGUHS) 600 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಕ್ಯಾಂಪಸ್ ನಿರ್ಮಿಸಲು ಬಸವರಾಜ ಬೊಮ್ಮಾಯಿ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

