cabinet meeting

ಮಹಾರಾಷ್ಟ್ರ ಸಿಎಂ ಆಗಿ ಅಧಿಕಾರ ಸ್ವೀಕರಿಸಿ, ಮೊದಲ ಸಂಪುಟ ಸಭೆ ನಡೆಸಿದ ಫಡ್ನವಿಸ್
ಮಂತ್ರಾಲಯಕ್ಕೆ ಆಗಮಿಸಿದ ನೂತನ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಹಾಗೂ ಅಜಿತ್ ಪವಾರ್ ಅವರಿಗೆ ಸಿಬ್ಬಂದಿ ಸಾಂಪ್ರದಾಯಿಕ ಸ್ವಾಗತ ಕೋರಿದರು.

BJP-JDS ಸಮ್ಮಿಶ್ರ ಸರ್ಕಾರದ 6 ಗಣಿ ಕೇಸ್ ತನಿಖೆಗೆ ನಿರ್ಧಾರ; SIT ರಚನೆಗೆ ಸಂಪುಟ ಅನುಮೋದನೆ..!
ಅಕ್ರಮ ಗಣಿಗಾರಿಕೆ ಎಲ್ಲಾ ಪ್ರಕರಣಗಳನ್ನು ಸೂಕ್ತವಾದ ತನಿಖೆಗೆ ಒಳಪಡಿಸುವುದು ಅಗತ್ಯವಾಗಿದೆ. ಆದ್ದರಿಂದ ಮುಂದಿನ ಸಚಿವ ಸಂಪುಟ ಸಭೆಗೆ ಈ ಪ್ರಕರಣಗಳ ತನಿಖೆ ಕುರಿತ ವಿವರಗಳನ್ನು ಮಂಡಿಸಬೇಕೆಂದು ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿದರು.

ಇಂದು ರಾಜ್ಯ ಸಚಿವ ಸಂಪುಟ ಸಭೆ: ಚಳಿಗಾಲ ಅಧಿವೇಶನ ದಿನಾಂಕ ನಿಗದಿ?
ವಿಧಾನಸೌಧದಲ್ಲಿ ಇಂದು ಬೆಳಿಗ್ಗೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಚಳಿಗಾಲದ ಅಧಿವೇಶನದ ವೇಳಾಪಟ್ಟಿ ಅಂತಿಮಗೊಳಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

ಇಂದು ಸಚಿವ ಸಂಪುಟ ಸಭೆ: ಒಳಮೀಸಲಾತಿ-ಜಾತಿಗಣತಿ ಕುರಿತು ಅನೌಪಚಾರಿಕ ಚರ್ಚೆ?
ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ನ.13 ರಂದು ಉಪಚುನಾವಣೆ ನಡೆಯಲಿದ್ದು, ಚುನಾವಣಾ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವುದರಿಂದ ಯಾವುದೇ ದೃಢ ನಿರ್ಧಾರ ಕೈಗೊಳ್ಳಲು ಸರ್ಕಾರಕ್ಕೆ ಸಾಧ್ಯವಿಲ್ಲ.

ಎಸ್‌ಸಿ ಒಳ ಮೀಸಲಾತಿ: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ?
ಸಚಿವರಾದ ಕೆ.ಎಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್ ಸೇರಿದಂತೆ ಪರಿಶಿಷ್ಟ ಜಾತಿ (ಎಸ್‌ಸಿ) ಮುಖಂಡರು ಶನಿವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು. ಈ ವೇಳೆ ಒಳಮೀಸಲಾತಿ ಜಾರಿ ಮಾಡುವವರೆಗೆ ನೇಮಕಾತಿ ಪ್ರಕ್ರಿಯೆಗಳನ್ನು ಮುಂದೂಡುವಂತೆ ಆಗ್ರಹಿಸಿದರು.

ಉಪ ಚುನಾವಣೆ ನೀತಿ ಸಂಹಿತೆ ಅಡ್ಡಿ: ಸಂಪುಟ ಸಭೆ 1 ವಾರ ಮುಂದೂಡಿಕೆ; ಅಕ್ಟೋಬರ್ 25ಕ್ಕೆ ಜಾತಿಗಣತಿ ವರದಿ ಭವಿಷ್ಯ ನಿರ್ಧಾರ?
ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಜಾತಿ ಗಣತಿ ವರದಿಯನ್ನು ಮಾನ್ಯ ಮಾಡಬೇಕು ಎಂದು ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಶಾಸಕರು, ಸಂಸದರು ಮತ್ತಿತರ ಪ್ರಮುಖರು ಸಭೆ ನಡೆಸಿ ಒತ್ತಡ ತಂದಿದ್ದರು.

ಬೆಂಗಳೂರು ಬ್ಯುಸಿನೆಸ್ ಕಾರಿಡಾರ್: ಭೂಸ್ವಾಧೀನಕ್ಕೆ ಹೆಚ್ಚಿನ ಪರಿಹಾರಕ್ಕೆ ಸಚಿವ ಸಂಪುಟ ಅನುಮೋದನೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ದಿನಾಂಕ: 19.09.2024 ರಂದು ಸಲ್ಲಿಸಿರುವ ಪ್ರಸ್ತಾವನೆಯನ್ವಯ ಈಗಾಗಲೇ ದಿನಾಂಕ: 12.09.2024 ರಂದು ಹೊರಡಿಸಿರುವ ಸರ್ಕಾರಿ ಆದೇಶದ ಭಾಗ ಕ್ರಮ ಸಂಖ್ಯೆ (3)ರ ಅಂಶವನ್ನು ರದ್ದುಪಡಿಸಿ ತಿದ್ದುಪಡಿ ಆದೇಶವನ್ನು ಹೊರಡಿಸಿರುವ ಕ್ರಮಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಎಸ್‌ಸಿ ಒಳ ಮೀಸಲಾತಿ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಹೈಕಮಾಂಡ್ ಭೇಟಿಗೆ ನಿರ್ಧಾರ
ಸಚಿವ ಸಂಪುಟ ಸಭೆಯಲ್ಲಿ ದಲಿತ ಸಮುದಾಯದ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ ಅವರು ಈ ವಿಷಯ ಪ್ರಸ್ತಾಪಿಸಿದರು. ಆಡಳಿತ ಪಕ್ಷವನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಸಚಿವ ಸಂಪುಟ ಸಭೆ: ಸರಣಿ ಸಭೆ ನಡೆಸಿದ ಸಚಿವರಿಗೆ ಸಿಎಂ ಕ್ಲಾಸ್, ಹೈಕಮಾಂಡ್ ಕ್ರಮ ಕೈಗೊಂಡರೆ ನಾನು ಹೊಣೆಯಲ್ಲ ಎಂದು ಎಚ್ಚರಿಕೆ
ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಚಹಾ, ಭೋಜನದ ನೆಪದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ, ಎಚ್.ಸಿ. ಮಹದೇವಪ್ಪ, ಜಿ. ಪರಮೆಶ್ವರ್ ಅವರು ಗೌಪ್ಯವಾಗಿ ಸಭೆ ಸೇರಿ ಚರ್ಚಿಸಿರುವ ವಿಚಾರ ಸಭೆಯಲ್ಲಿ ಪ್ರಸ್ತಾವವಾಗಿದೆ.

