Cabinet

2023-24ನೇ ಸಾಲಿನ ಕರ್ನಾಟಕ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ
ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2023-24ನೇ ಸಾಲಿನ ರಾಜ್ಯ ಬಜೆಟ್ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಕಾಂಗ್ರೆಸ್ ನ ಮೂರು ಗ್ಯಾರಂಟಿಗಳಿಗೆ ಅನುಮೋದನೆ?: ಸರ್ಕಾರಕ್ಕೆ ನೀಲನಕ್ಷೆ ಸಲ್ಲಿಸಿದ ಹಣಕಾಸು ಇಲಾಖೆ
ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಶುಕ್ರವಾರ ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು ಅದರಲ್ಲಿ ಮೂರು ಗ್ಯಾರಂಟಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ರಾಜಕೀಯದಲ್ಲಿ ದೂರದೃಷ್ಟಿ, ತಾಳ್ಮೆ ಅಗತ್ಯ, ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರವಿಲ್ಲ: ಲಕ್ಷ್ಮಣ ಸವದಿ
ದೂರದೃಷ್ಟಿ ಮತ್ತು ತಾಳ್ಮೆ ರಾಜಕೀಯದಲ್ಲಿ ಬಹಳ ಮುಖ್ಯ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನನಗಂತೂ ನಿರಾಸೆ ಆಗಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ಶಾಸಕ ಲಕ್ಷ್ಮಣ ಸವದಿ ಅವರು ಸೋಮವಾರ ಹೇಳಿದ್ದಾರೆ.

ಆಡಳಿತಕ್ಕೆ ಹೊಸ ಸ್ಪರ್ಶ ನೀಡಲು ಎಲ್ಲಾ 34 ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ
ರಾಜ್ಯದ ಆಡಳಿತಕ್ಕೆ ಹೊಸ ಸ್ಪರ್ಶ ನೀಡುವ ಉದ್ದೇಶದಿಂದ ಎಲ್ಲಾ 34 ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಯಾವುದೇ ಆಂತರಿಕ ಭಿನ್ನಾಭಿಪ್ರಾಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯದ ಹಿತದೃಷ್ಟಿಯಿಂದ ವಿವಿಧ ವಿಷಯಗಳನ್ನು ಚರ್ಚಿಸಬೇಕಾಗಿದೆ. ಪಕ್ಷದ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತು: ದೆಹಲಿಗಿಂದು ಸಿದ್ದು-ಡಿಕೆಶಿ, 20 ಸಚಿವರ ಆಯ್ಕೆ ಕುರಿತು ಹೈಕಮಾಂಡ್ ಜೊತೆ ಚರ್ಚೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡುತ್ತಿದ್ದು, ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ಕೇಂದ್ರ ನಾಯಕತ್ವ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಅಳೆದು-ತೂಗಿ ಸಚಿವ ಸಂಪುಟ ರಚನೆ ಲೆಕ್ಕಾಚಾರ: ಲೋಕಸಭೆ ಚುನಾವಣೆ ದೃಷ್ಟಿಯಿಂದ ಜನಪ್ರಿಯ ಶಾಸಕರಿಗಷ್ಟೇ ಮಣೆ!
ಸಂಪುಟ ವಿಸ್ತರಣೆ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸಚಿವ ಸ್ಥಾನಕ್ಕಾಗಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಬಣದವರ ಮಧ್ಯೆ ಪೈಪೋಟಿ ಜೋರಾಗಿದೆ. ಹಿರಿಯ ಶಾಸಕರೂ ಕೂಡ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ.

ಸಂಪುಟ ಬಿಕ್ಕಟ್ಟು: ಸಿದ್ದು ಆಪ್ತ ಮಹಾದೇವಪ್ಪಗೆ ಸ್ಥಾನ ನೀಡದಂತೆ ಡಿಕೆ ಪಟ್ಟು; ದಲಿತರು-ಒಕ್ಕಲಿಗರ ಸ್ವಾಭಿಮಾನಕ್ಕೆ ಪೆಟ್ಟು!
ಲಿಂಗಾಯತ ಮುಖಂಡ ಮತ್ತು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯನವರ ಪರವಾಗಿ ವರುಣಾ ಮತ್ತು ಮೈಸೂರಿನಲ್ಲಿ ದಲಿತ ಸಮಾವೇಶಗಳನ್ನು ಆಯೋಜಿಸುವಲ್ಲಿ ಮಹದೇವಪ್ಪ ಪ್ರಮುಖ ಪಾತ್ರ ವಹಿಸಿದ್ದರು.

ಮುಖ್ಯಮಂತ್ರಿ, ಸಚಿವ ಸಂಪುಟ ಆಯ್ತು; ಈಗ ಖಾತೆ ಹಂಚಿಕೆ ಕುರಿತು ಪೈಪೋಟಿ; ಡಿಕೆಶಿ-ಸಿದ್ದು ಭೇಟಿಯಲ್ಲಿ ನಾಯಕರು ಬ್ಯುಸಿ
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ, ಎಂಟು ಕ್ಯಾಬಿನೆಟ್ ಮಂತ್ರಿಗಳು ಸೇರಿ ಅನೇಕ ನಾಯಕರು ತಮ್ಮ ತಮ್ಮ ಸ್ಥಾನಗಳನ್ನು ಕಾಯ್ದಿರಿಸಲು ಭಾನುವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

