campaign

ಗಾಯದಿಂದ ಚೇತರಿಸಿಕೊಂಡ ಪರಮೇಶ್ವರ್: ಕಲ್ಲೇಟು ಬಿದ್ದ ಸ್ಥಳದಿಂದಲೇ ಮರಳಿ ಚುನಾವಣಾ ಪ್ರಚಾರ ಆರಂಭ!
ಗಾಯದಿಂದ ಚೇತರಿಸಿಕೊಂಡಿರುವ ಕಾಂಗ್ರೆಸ್ ಹಿರಿಯ ಮುಖಂಡ ಡಾ.ಜಿ.ಪರಮೇಶ್ವರ ಅವರು, ಕಲ್ಲೇಟು ಬಿದ್ದ ಬೈರೇನಹಳ್ಳಿಯಿಂದಲೇ ಭಾನುವಾರ ಮರಳಿ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ.

ರಾಜ್ಯದಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ: ದಕ್ಷಿಣ ಕರ್ನಾಟಕದ 4 ಕಡೆ ಇಂದು ರೋಡ್ ಶೋ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಭರ್ಜರಿ ಪ್ರಚಾರ ಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಕೋಲಾರ, ಚನ್ನಪಟ್ಟಣ, ಬೇಲೂರುಗಳಲ್ಲಿ ಬೃಹತ್ ಸಮಾವೇಶ ನಡೆಸಿ, ಬಿಜೆಪಿ ಪರ ಮತಯಾಚನೆ ಮಾಡಲಿದ್ದಾರೆ. ಸಂಜೆ ಮೈಸೂರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ.

ವರುಣಾ: ಮೊಟ್ಟ ಮೊದಲ ಬಾರಿ ಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ರಾಕೇಶ್ ಪ್ರಚಾರ
ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸೋಮಣ್ಣನ ಪರ ಚುನಾವಣಾ ಪ್ರಚಾರ ಬಿರುಸುಗೊಂಡಿದೆ. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಸೊಸೆ ಸ್ಮಿತಾ ರಾಕೇಶ್ ಮಾವನ ಪರ ಪ್ರಚಾರ ಕೈಗೊಂಡಿದ್ದು, ವರುಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಮತಯಾಚಿಸುತ್ತಿದ್ದಾರೆ.

ಮುಂದಿನ 11 ದಿನ 42 ಸ್ಥಳಗಳಲ್ಲಿ ಜೆಡಿಎಸ್ ಪರ ದೇವೇಗೌಡ ಪ್ರಚಾರ
ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಇಳಿ ವಯಸ್ಸಿನಲ್ಲೂ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿದ್ದು, ನಾಳೆಯಿಂದ ಮುಂದಿನ 11 ದಿನಗಳಲ್ಲಿ 42 ಸ್ಥಳಗಳಲ್ಲಿ ತಮ್ಮ ಪಕ್ಷದ ಪರ ಪ್ರಚಾರ ನಡೆಸುವುದಾಗಿ ಗುರುವಾರ

ರಾಮನಗರಕ್ಕೆ ಮೋದಿಯಾದರೂ ಬರಲಿ, ಅಮೆರಿಕ ಅಧ್ಯಕ್ಷರಾದರೂ ಬರಲಿ, ನನಗೇನು ಭಯವಿಲ್ಲ: ಎಚ್‌ಡಿ ಕುಮಾರಸ್ವಾಮಿ
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಚಾರದ ಅಬ್ಬರ ಜೋರಾಗಿದ್ದು ರಾಜ್ಯ ಬಿಜೆಪಿ ಕೇಂದ್ರದ ನಾಯಕರನ್ನ ಕರೆಸಿ ರೋಡ್ ಶೋ ನಡೆಸಿ, ಮತದಾರನ್ನ ಸೆಳೆಯುತ್ತಿದೆ. ಈ ಮಧ್ಯೆ ರಾಮನಗರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ಎಚ್.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್; ಮತ್ತೆ ಭರ್ಜರಿ ಚುನಾವಣಾ ಕ್ಯಾಂಪೇನ್
ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಜೆಡಿಎಸ್ ಮುಖಂಡ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮತ್ತೆ ಚುನಾವಣಾ ಕಣಕ್ಕೆ ಇಳಿಯಲು ಹವಣಿಸುತ್ತಿದ್ದಾರೆ.

ಭಯ! ಆ ಭಯ ಇರಬೇಕು ಸಿದ್ದರಾಮಯ್ಯನವರೆ! ಸಿದ್ದು ಕಾಲೆಳೆದ ಪ್ರತಾಪ್ ಸಿಂಹ
ಜಿದ್ದಾಜಿದ್ದಿನ ಕಣವೆಂದೆ ಬಿಂಬಿತವಾಗಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮತ್ತು ಸೋಮಣ್ಣ ಈಗಾಗಲೇ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ.

ಚುನಾವಣಾ ಪ್ರಚಾರಕ್ಕೆ ಕಿಚ್ಚ ಸುದೀಪ್ ಎಂಟ್ರಿ: ಸಿಎಂ ಬೊಮ್ಮಾಯಿ ಪರ ಸ್ಟಾರ್ ನಟ ಕ್ಯಾಂಪೇನ್
ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಲು ಮುಖಅಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಈ ಹಿನ್ನೆಲೆ ಇಂದು ಶಿಗ್ಗಾಂವಿಗೆ ಆಗಮಿಸಲಿರುವ ನಟ ಕಿಚ್ಚ ಸುದೀಪ್ ಅವರು, ಸಿಎಂ ಬೊಮ್ಮಾಯಿ ಪರ ಪ್ರಚಾರ ನಡೆಸಲಿದ್ದಾರೆ.

2024ರ ಲೋಕಸಭೆ ಮೇಲೆ ಕಣ್ಣು: ವಿರೋಧ ಪಕ್ಷಗಳ ನಾಯಕರಿಂದ ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪ್ರಯತ್ನ
ಮೇ 10 ರಂದು ನಡೆಯಲಿರುವ ಕರ್ನಾಟಕ ಚುನಾವಣೆಗಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಡಿಎಂಕೆ ನಾಯಕಿ ಕನ್ನಿಮೋಳಿ ಪ್ರಚಾರ ಮಾಡುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಇಂತಹ ಪ್ರಯತ್ನ ಮಾಡುತ್ತಿದೆ.

