ದೇಶರೈತರ ಪ್ರತಿಭಟನೆ ಕುರಿತು ಕೆನಡಾ ಪ್ರಧಾನಿ ಹೇಳಿಕೆ ಅನಪೇಕ್ಷಿತ ಹಾಗೂ ಅನಗತ್ಯ: ಭಾರತ
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯಿದೆಗಳನ್ನು ವಿರೋಧಿಸಿ ಕಳೆದ ಆರು ದಿನಗಳಿಂದ ಬೃಹತ್ ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಕೆನಡಾ ಪ್ರಧಾನಿ ಜಸ್ಟೀನ್ ಟ್ರಡೋ ಅವರಿಗೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿರುವ ಭಾರತ, ಅವರ ಹೇಳಿಕೆ ಅನಪೇಕ್ಷಿತ ಮತ್ತು ಅನಗತ್ಯ ಎಂದಿದೆ.