ರಾಜಕೀಯಕಾಂಗ್ರೆಸ್ ನಿಂದ ಎರಡು ತಂಡಗಳಾಗಿ ರಾಜ್ಯಾದ್ಯಂತ ಬಸ್ ಯಾತ್ರೆ, ಸದ್ಯದಲ್ಲಿಯೇ 'ಕೈ' ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ
ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ದುರಾಡಳಿತವನ್ನು ಜನತೆ ಮುಂದೆ ತೋರಿಸಲು ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಹೋಗುತ್ತೇವೆ. ಕಾಂಗ್ರೆಸ್ ನಿಂದ ನನ್ನ ನೇತೃತ್ವದಲ್ಲಿ ನಾಲ್ಕೈದು ಜನರ ತಂಡ ಮತ್ತು ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ನಾಲ್ಕೈದು ನಾಯಕರ ತಂಡ ವಿಶೇಷ ಬಸ್ಸಿನಲ್ಲಿ ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.