Candidates

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ: ಟಿಡಿಪಿ ಮತ್ತು ಜನಸೇನಾ ಪಕ್ಷದ 118 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ
ಮುಂಬರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಜಂಟಿಯಾಗಿ 118 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಜೆಡಿಎಸ್-ಬಿಜೆಪಿ ದೋಸ್ತಿ; ಅಭ್ಯರ್ಥಿಗಳ ಆಯ್ಕೆಗಾಗಿ 'ಕೈ' ಜಂಗೀಕುಸ್ತಿ! ಸುರಕ್ಷಿತ ಕ್ಷೇತ್ರಕ್ಕಾಗಿ ಸುರೇಶ್ ಹುಡುಕಾಟ!
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಜಂಟಿಯಾಗಿ ಸ್ಪರ್ಧಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಭಾವ್ಯರ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಕಾಂಗ್ರೆಸ್ ಹರಸಾಹಸ ಪಡುತ್ತಿದೆ.

ಕೆಪಿಎಸ್‌ಸಿ ಪರೀಕ್ಷಾ ಅಭ್ಯರ್ಥಿಗಳ ತಪಾಸಣೆಗೆ ಮಕ್ಕಳ ಬಳಕೆ!
ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್ ಸಿ ವೃಂದದ ಕಿರಿಯ ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ಭಾನುವಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದು, ಈ ವೇಳೆ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ತಪಾಸಣೆಗೆ ಮಕ್ಕಳನ್ನು ಬಳಕೆ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.

ಉತ್ತಮ ವಾಕ್ಚಾತುರ್ಯ ಹೊಂದಿರುವ ಯುವ, ಪರಿಚಿತ ಹೊಸ ಮುಖಗಳಿಗೆ ಲೋಕಸಭೆ ಚುನಾವಣೆ ಟಿಕೆಟ್: ಡಿಕೆ ಶಿವಕುಮಾರ್
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಯುವ, ಹೊಸ ಮುಖಗಳು, ಜನರಿಗೆ ಪರಿಚಿತರು ಹಾಗೂ ಉತ್ತಮ ವಾಕ್ಚಾತುರ್ಯ ಹೊಂದಿರುವವರು ಪಕ್ಷದ ಅಭ್ಯರ್ಥಿಗಳಾಗಿ ಆಯ್ಕೆಯಾಗುವ ಉಜ್ವಲ ಅವಕಾಶವಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಆಸ್ತಿ ಘೋಷಣೆ ಮಾಡದಿರುವುದೂ ಭ್ರಷ್ಟಾಚಾರಕ್ಕೆ ಸಮ: ಹೈಕೋರ್ಟ್
ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ, ಕುಟುಂಬ ಮತ್ತು ಅವಲಂಬಿತರ ಆಸ್ತಿ ವಿವರಗಳನ್ನು ಘೋಷಿಸದಿದ್ದರೆ ಅಥವಾ ಮರೆ ಮಾಚಿದರೆ ಅದೂ ಕೂಡ ಭ್ರಷ್ಟಾಚಾರ ಎನಿಸಲಿದ್ದು, ಇದು ಅನರ್ಹತೆಗೂ ಕಾರಣವಾಗಲಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಪಿಎಸ್ಐ ನೇಮಕಾತಿ ಹಗರಣ: ಅಕ್ರಮ ಎಸಗಿದ್ದ 52 ಅಭ್ಯರ್ಥಿಗಳು ಶಾಶ್ವತ ಡಿಬಾರ್!
ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆ ನಡೆಸುವ ಯಾವುದೇ ನೇಮಕಾತಿ ಪರೀಕ್ಷೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಡಿಬಾರ್ ಮಾಡಿ ಆದೇಶಿಸಲಾಗಿದೆ.

ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು.

2019 ರಲ್ಲಿ ಬಿಜೆಪಿ ಸರ್ಕಾರ ರಚನೆಗೆ ಸಹಕರಿಸಿದ್ದ ಶಾಸಕರ ಪೈಕಿ 8 ಮಂದಿಗೆ ಈಗ ಸೋಲು
ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಹಲವು ಮಂದಿ ಘಟಾನುಘಟಿ ನಾಯಕರು ಪರಾಭವಗೊಂಡಿದ್ದಾರೆ.

ಕರ್ನಾಟಕ ಚುನಾವಣೆ: ಕ್ರಿಮಿನಲ್ ಪ್ರಕರಣಗಳು ಮಾನದಂಡವಲ್ಲ, ಗೆಲ್ಲುವ ಸಾಮರ್ಥ್ಯವೇ ಪ್ರಮುಖ ಅಂಶ!
ಕರ್ನಾಟಕ ವಿಧಾನಸಭಾ ಚುನಾವಣಾ ಕಣದಲ್ಲಿರುವ ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿಗಳಲ್ಲಿ ಹೆಚ್ಚಿನ ಮಂದಿ ಗೆಲ್ಲುವ ಸಾಮರ್ಥ್ಯ ಹೊಂದಿದ್ದಾರೆ. ಆದ್ದರಿಂದ ಅವರಿಗೆ ಪಕ್ಷಗಳು ಆದ್ಯತೆ ನೀಡಿವೆ ಎಂಬುದು ಇತ್ತೀಚಿನ ಅಧ್ಯಯನವೊಂದರ ವರದಿಯಲ್ಲಿ ಹೇಳಲಾಗಿದೆ.

