ರಾಜ್ಯಬೆಂಗಳೂರು: ರಸ್ತೆಯ ಕಳಪೆ ಕಾಮಗಾರಿಗೆ ದಂಡ ಕಟ್ಟಿದ್ದ ಗುತ್ತಿಗೆದಾರನಿಗೆ ಮತ್ತೆ 99 ಕೋಟಿ ರೂ. ಮೌಲ್ಯದ ಗುತ್ತಿಗೆ!
ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಜೂನ್ನಲ್ಲಿ ಬೆಂಗಳೂರಿಗೆ ಭೇಟಿ ನೀಡುವುದಕ್ಕೆ ಮೊದಲು ಮಾಡಿದ ಕಳಪೆ ರಸ್ತೆ ಕಾಮಗಾರಿಯ ಧೂಳು ಇನ್ನೂ ಮಾಸುವ ಮುನ್ನವೇ ಅದರ ಕಾಮಗಾರಿಯ ಗುತ್ತಿಗೆ ಪಡೆದಿದ್ದ ರಮೇಶ್ ಎಸ್ ಗೆ ಮತ್ತೊಂದು ಕೋಟ್ಯಂತರ ರೂಪಾಯಿ ಮೌಲ್ಯದ ಗುತ್ತಿಗೆ ಕಾಮಗಾರಿ ಸಿಕ್ಕಿದೆ.