captain miller

ಧನುಷ್, ಶಿವಣ್ಣ ಅಭಿನಯದ ಕ್ಯಾಪ್ಟನ್ ಮಿಲ್ಲರ್: ಲಿರಿಕಲ್ ವಿಡಿಯೋ ಬಿಡುಗಡೆ
ಧನುಷ್ ಹಾಗೂ ಡಾ.ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ತಮಿಳು ಚಿತ್ರ ಕ್ಯಾಪ್ಟನ್ ಮಿಲ್ಲರ್ ಚಿತ್ರದ ಲಿರಿಕಲ್ ವಿಡಿಯೋವೊಂದು ಬಿಡುಗಡೆಯಾಗಿದೆ. ಕನ್ನಡ ವರ್ಸನ್ ನ ಕೊರನಾರು ಸಾಂಗ್ ನಲ್ಲಿ ಇಬ್ಬರೂ ನಟರು ಒಟ್ಟಿಗೆ ಡ್ಯಾನ್ಸ್ ಮಾಡಿದ್ದಾರೆ.

ಧನುಷ್ ನಟನೆಯ ಬಹು ನಿರೀಕ್ಷಿತ ಕ್ಯಾಪ್ಟನ್ ಮಿಲ್ಲರ್ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ!
ಅರುಣ್ ಮಾಥೇಶ್ವರನ್ ನಿರ್ದೇಶನದ ನಟ ಧನುಷ್ ಅವರ ಬಹು ನಿರೀಕ್ಷಿತ ಚಿತ್ರ 'ಕ್ಯಾಪ್ಟನ್ ಮಿಲ್ಲರ್' ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಹಿಂದೆ ಡಿಸೆಂಬರ್ 15 ರಂದು ಚಿತ್ರ ಬಿಡುಗಡೆಗೆ ಯೋಜಿಸಲಾಗಿತ್ತು. ಇದೀಗ 2024ರ ಸಂಕ್ರಾಂತಿ ವೇಳೆಗೆ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ.

ಕ್ಯಾಪ್ಟನ್ ಮಿಲ್ಲರ್ ಚಿತ್ರದ ಟೀಸರ್
ನಟ ಧನುಷ್ ಹಾಗೂ ಶಿವರಾಜ್ ಕುಮಾರ್ ಅಭಿನಯದ ಕ್ಯಾಪ್ಟನ್ ಮಿಲ್ಲರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅರುಣ್ ಮಾಥೇಶ್ವರನ್ ನಿರ್ದೇಶಿಸಿದ್ದಾರೆ.

ಧನುಷ್, ಶಿವರಾಜ್ ಕುಮಾರ್ ಅಭಿನಯದ ಕ್ಯಾಪ್ಟನ್ ಮಿಲ್ಲರ್ ಚಿತ್ರದ ಟೀಸರ್
ಖ್ಯಾತ ನಟ ಧನುಷ್ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಕ್ಯಾಪ್ಟನ್ ಮಿಲ್ಲರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅರುಣ್ ಮಾಧೇಶ್ವರನ್ ನಿರ್ದೇಶಿಸಿದ್ದಾರೆ.

ಧನುಷ್ ನಟನೆಯ 'ಕ್ಯಾಪ್ಟನ್ ಮಿಲ್ಲರ್' ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಿದ ನಟ ಶಿವರಾಜ್‌ಕುಮಾರ್!
ರಜಿನಿಕಾಂತ್ ಅಭಿನಯದ ಜೈಲರ್ ಚಿತ್ರದ ಮೂಲಕ ಶಿವರಾಜಕುಮಾರ್ ತಮಿಳು ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂದು ಈ ಹಿಂದೆ ಘೋಷಿಸಲಾಗಿತ್ತು. ಈಮಧ್ಯೆ, ಧನುಷ್ ಅಭಿನಯದ 'ಕ್ಯಾಪ್ಟನ್ ಮಿಲ್ಲರ್' ಚಿತ್ರದ ಭಾಗವಾಗಿದ್ದ ಶಿವರಾಜ್‌ಕುಮಾರ್, ತಮ್ಮ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ.

ಧನುಷ್ ನಟನೆಯ 'ಕ್ಯಾಪ್ಟನ್ ಮಿಲ್ಲರ್' ಚಿತ್ರೀಕರಣದಲ್ಲಿ ಶಿವರಾಜ್‌ಕುಮಾರ್ ಭಾಗಿ
ಇತ್ತೀಚೆಗಷ್ಟೇ ರಜನಿಕಾಂತ್ ಅವರ ಜೈಲರ್ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ ಶಿವರಾಜಕುಮಾರ್, ಈಗ ಧನುಷ್ ನಾಯಕನಾಗಿ ನಟಿಸುತ್ತಿರುವ ಅವರ ಮುಂದಿನ ತಮಿಳು ಚಿತ್ರ ಕ್ಯಾಪ್ಟನ್ ಮಿಲ್ಲರ್ ಸೆಟ್‌ಗೆ ಸೇರಲಿದ್ದಾರೆ.

'ಕ್ಯಾಪ್ಟನ್ ಮಿಲ್ಲರ್' ಚಿತ್ರದಲ್ಲಿ ನಟ ಧನುಷ್ ಅಣ್ಣನ ಪಾತ್ರದಲ್ಲಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್
ಅರುಣ್ ಮಾಥೇಶ್ವರನ್ ನಿರ್ದೇಶನದ ಧನುಷ್ ಅವರ ಮುಂಬರುವ ಚಿತ್ರ ಕ್ಯಾಪ್ಟನ್ ಮಿಲ್ಲರ್‌ನಲ್ಲಿ ಕನ್ನಡದ ನಟ ಶಿವರಾಜ್‌ಕುಮಾರ್ ಅವರು ಅಭಿನಯಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. ನಿರ್ಮಾಪಕರ ಕಡೆಯಿಂದ ಅಧಿಕೃತ ದೃಢೀಕರಣವಿಲ್ಲವಾದರೂ, ಕನ್ನಡದ ಹಿರಿಯ ನಟ ಇತ್ತೀಚೆಗೆ ಚಿತ್ರದಲ್ಲಿ ತಾವು ನಟಿಸುವುದಾಗಿ ಖಚಿತಪಡಿಸಿದ್ದಾರೆ.

ಧನುಷ್ ನಟನೆಯ 'ಕ್ಯಾಪ್ಟನ್ ಮಿಲ್ಲರ್' ನಲ್ಲಿ ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್?
ರಜನಿಕಾಂತ್ ನಟನೆಯ ನೆಲ್ಸನ್ ನಿರ್ದೇಶನದ ಜೈಲರ್ ಸಿನಿಮಾದಲ್ಲಿ ಶಿವರಾಜಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬುದು ಖಚಿತವಾಗಿದೆ. ಇದೀಗ ಸೆಂಚುರಿ ಸ್ಟಾರ್ ಶಿವಣ್ಣ ಮತ್ತೊಂದು ಬಿಗ್-ಬಜೆಟ್ ತಮಿಳು ಚಿತ್ರದಲ್ಲಿ ನಟಿಸುವ ಸಾಧ್ಯತೆಯಿದೆ.

