ರಾಜ್ಯಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ: ಜೀವ ಉಳಿಸಿದ IPS ಅಧಿಕಾರಿ
ಇಂದು ಮಧ್ಯಾಹ್ನ ಮೃಣಾಲ್ ಅವರ ಕಾರು ಚಾಲಕ, ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡೋಲ್ಕರ್(32) ಅವರಿಗೆ ಬೈಕ್ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಎದೆ, ಭುಜ, ತೊಡೆ ಸೇರಿ 4 ಕಡೆ ಚಾಕುವಿನಿಂದ ಇರಿದು ಪರಾರಿ ಆಗಿದ್ದಾರೆ.