ರಾಜ್ಯಪಾದರಾಯನಪುರ ಘಟನೆ ಸಿಸಿಬಿಗೆ ವರ್ಗಾವಣೆ: ಬಸವರಾಜ್ ಬೊಮ್ಮಾಯಿ
ನಗರದ ಪಾದರಾಯನಪುರದಲ್ಲಿ ಭಾನುವಾರ ಕೊರೋನಾ ಶಂಕಿತರನ್ನು ಹೋಂ ಕ್ವಾರಂಟೈನ್ ಗೆ ಕರೆದುಕೊಂಡು ಹೋಗುತ್ತಿದ್ದ ಸರ್ಕಾರಿ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯಕರ್ತೆಯರ ಮೇಲೆ ಸ್ಥಳೀಯರ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.