Case

ಐಪಿಎಲ್ ಬೆಟ್ಟಿಂಗ್ ದಂಧೆ: ಸಿಸಿಬಿ ಪೊಲೀಸರಿಂದ 6 ಮಂದಿ ಬಂಧನ, 6 ಲಕ್ಷ ರೂ. ವಶ
ಐಪಿಎಲ್-2020 ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳ ಮೇಲೆ ಸಿಸಿಬಿ ಪೊಲೀಸರು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ.

ಉದ್ಧವ್ ಠಾಕ್ರೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಂಗಾನಾ ವಿರುದ್ಧ ದೂರು ಕೇಸ್ ದಾಖಲು
ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಬಾಂದ್ರಾದಲ್ಲಿರುವ ಮನೆಯ ಕೆಲ ಭಾಗಗಳನ್ನು ಬೃಹನ್ ಮುಂಬೈ ಪಾಲಿಕೆ ಅಧಿಕಾರಿಗಳು ಧ್ವಂಸಗೊಳಿಸಿದ ನಂತರ ಶಿವಸೇನೆ ಹಾಗೂ ಕಂಗನಾ ನಡುವಿನ ಮಾತಿನ ಸಮರ ತೀವ್ರಗೊಂಡಿದೆ.

ಬಿಜೆಪಿ ನಾಯಕರ ವಿರುದ್ಧದ ಕ್ರಿಮಿನಲ್ ಕೇಸ್ ವಾಪಸ್: ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರ ಕಿಡಿ
ಬಿಜೆಪಿ ಮುಖಂಡರು ಸೇರಿದಂದೆ ವಿವಿಧ ಸಂಘಟನೆಗಳು ಮತ್ತು ವ್ಯಕ್ತಿಗಳ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ವಾಪಸ್ ಪಡೆದ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರವಾಗಿ ಕಿಡಿಕಾರಿದೆ.

ಲೈಂಗಿಕ ಕಿರುಕುಳ ಪ್ರಕರಣ: ಸಂತ್ರಸ್ತೆ, ಬಿಜೆಪಿ ಶಾಸಕನ ಮಂಪರು ಪರೀಕ್ಷೆ ನಡೆಸಲು ಪತ್ನಿ ಮನವಿ
ಬಿಜೆಪಿ ಶಾಸಕ ಮಹೇಶ್ ನೆಗಿ ಹಾಗೂ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಮಹಿಳೆಯನ್ನು ಮಂಪರು ಪರೀಕ್ಷೆಗೆ ಒಳಪಡಿಸುವಂತೆ ನೇಗಿ ಅವರ ಪತ್ನಿ ಮನವಿ ಮಾಡಿರುವುದಾಗಿ ಪೊಲೀಸರು ಭಾನುವಾರ ಹೇಳಿದ್ದಾರೆ.ಬಿಜೆಪಿ ಶಾಸಕನ ಪತ್ನಿಯಿಂದ ಮನವಿ ಪತ್ರವೊಂದನ್ನು ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ಸೇರಿದ್ಧ ಅಣ್ಣಾಮಲೈ ವಿರುದ್ಧ ಕೊಯಂಬತ್ತೂರಿನಲ್ಲಿ ಪ್ರಕರಣ ದಾಖಲು
ಕಾನೂನುಬಾಹಿರ ಸಭೆ ನಡೆಸಿದ ಕಾರಣದಿಂದ ಮೂರು ದಿನಗಳ ಹಿಂದಷ್ಟೇ ಬಿಜೆಪಿಗೆ ಸೇರಿದ್ದ ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಹಾಗೂ ಕೆಲ ಪಕ್ಷದ ಕಾರ್ಯಕರ್ತರ ವಿರುದ್ಧ ಕೊಯಂಬತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದ್ವೇಷ ಭಾಷಣ ಪ್ರಕರಣ: ಫೇಸ್ ಬುಕ್ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ಪ್ರಕರಣ ದಾಖಲು
ಭಾರತದಲ್ಲಿ ಫೇಸ್ ಬುಕ್ ನ ನೀತಿ ನಿರೂಪಣೆ ಮುಖ್ಯಸ್ಥರಾಗಿರುವ ಅಂಕಿ ದಾಸ್ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಚತ್ತೀಸ್ ಗಢದಲ್ಲಿದಲ್ಲಿ ಪ್ರಕರಣದ ದಾಖಲಾಗಿದೆ.

ಮಾಜಿ ಸಚಿವ ಎಚ್.ಕೆ. ಪಾಟೀಲ್ ದೂರು: ಮಾನವ ಹಕ್ಕುಗಳ ಆಯೋಗದಿಂದ ಪ್ರಕರಣ ದಾಖಲು
ಕೊರೋನಾ ನಿಯಂತ್ರಣಕ್ಕಾಗಿ ಖರೀದಿಸಲಾದ ಔಷಧಿ, ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ ಹಾಗೂ ವೆಂಟಿಲೇಟರ್ ಖರೀದಿಯಲ್ಲಿ ಅಕ್ರಮ, ಸೋಂಕಿನಿಂದ ಮೃತಪಪಟ್ಟವರ ಅಂತ್ಯ ಸಂಸ್ಕಾರವನ್ನು ಗೌರವಯುತವಾಗಿ ನಡೆಸುತ್ತಿಲ್ಲ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಲಿದೆ.

ನೆರೆಮನೆಯ ಬಾಗಿಲ ಬಳಿ ಮೂತ್ರ ವಿಸರ್ಜನೆ: ಎಬಿವಿಪಿ ರಾಷ್ಟ್ರೀಯ ಅಧ್ಯಕ್ಷರ ವಿರುದ್ಧ ದೂರು ದಾಖಲು
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಷ್ಟ್ರೀಯ ಅಧ್ಯಕ್ಷ ಡಾ. ಡಾ.ಸುಬ್ಬಯ್ಯ ಷಣ್ಮುಗಂ ವಿರುದ್ಧಶನಿವಾರ ಕೇಸ್ ವೊಂದು ದಾಖಲಾಗಿದೆ.

ತೆಲಂಗಾಣ ಮರ್ಯಾದಾ ಹತ್ಯೆ ಕುರಿತು ಸಿನಿಮಾ: ರಾಮ್ ಗೋಪಾಲ್ ವರ್ಮಾ ವಿರುದ್ಧ ಪ್ರಕರಣ ದಾಖಲು
ತೆಲಂಗಾಣದಲ್ಲಿ 2018ರಲ್ಲಿ ನಡೆದಿದ್ದ ಮರ್ಯಾದಾ ಹತ್ಯೆ ಘಟನೆ ಆಧರಿಸಿ ನಿರ್ದೇಶಕ ಹಾಗೂ ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ಅವರು ಮರ್ಡರ್ ಹೆಸರಿನಲ್ಲಿ ಸಿನಿಮಾ ನಿರ್ಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವರ್ಮಾ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

