Case

ಬೆಂಗಳೂರು: ಹೊಸ ವರ್ಷ ಆಚರಣೆ ವೇಳೆ 78 ಡ್ರಂಕ್ ಆಂಡ್ ಡ್ರೈವ್ ಪ್ರಕರಣ ದಾಖಲು
ಹೊಸ ವರ್ಷ ಮುನ್ನಾ ದಿನ ನಗರದ ಎಂ.ಜಿ ರೋಡ್, ಬ್ರಿಗೇಡ್ ರೋಡ್ ಸೇರಿದಂತೆ ಇತರೆ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಜನಸಂದಣಿ ಸೇರಿತ್ತು. ಈ ಬಾರಿಯ ಹೊಸ ವರ್ಷವನ್ನು ಸಿಲಿಕಾನ್ ಸಿಟಿ ಜನತೆ ಸಂಭ್ರಮದಿಂದ ಸ್ವಾಗತಿಸಿದರು. ಶನಿವಾರ ಮಧ್ಯಾಹ್ನದಿಂದಲೇ ಸಾಕಷ್ಟು ಜನರು ಪಾರ್ಟಿಗಳನ್ನು ಆರಂಭಿಸಿದ್ದರು.

ಮೇಲ್ಜಾತಿಯವರಿಂದ ಅವಮಾನ, ಹಲ್ಲೆ: ಮನನೊಂದು ಮುಳಬಾಗಿಲಿನ ಯುವಕ ಆತ್ಮಹತ್ಯೆ
ಮೇಲ್ಜಾತಿಯವರಿಂದ ಆದ ಅವಮಾನವನ್ನು ಸಹಿಸಲಾಗದೆ ದಲಿತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ನಡೆದಿದೆ.

ಆಸ್ಪತ್ರೆಯಲ್ಲಿ ಅಮಾನವೀಯವಾಗಿ ನಡೆದುಕೊಂಡರೆ ವಜಾಕ್ಕೆ ಕ್ರಮ; ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ- ಡಾ. ಕೆ.ಸುಧಾಕರ್
ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್ ಪತ್ತೆ!
ದುಬೈನಿಂದ ಶ್ರೀಲಂಕಾಗೆ ಮರಳಿದ್ದ 20 ವರ್ಷದ ಯುವಕನಲ್ಲಿ ಮಂಕಿಪಾಕ್ಸ್ ಪತ್ತೆಯಾಗಿದೆ ಎಂದು ಶ್ರೀಲಂಕಾದ ಆರೋಗ್ಯ ಸಚಿವ ಕೆಹೆಲಿಯಾ ರಂಬುಕ್ವೆಲ್ಲಾ ಮಾಹಿತಿ ನೀಡಿದ್ದಾರೆ.

ವಾಯುಪಡೆ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಆರು ಮಂದಿ ಸಿಬ್ಬಂದಿ ವಿರುದ್ಧ ಕೇಸು ದಾಖಲು
ಜಾಲಹಳ್ಳಿಯ ವಾಯುಪಡೆ ತಾಂತ್ರಿಕ ಮಹಾವಿದ್ಯಾಲಯದ (AFTC) 27ರ ಹರೆಯದ ವಿದ್ಯಾರ್ಥಿ ಅಂಕಿತ್ ಕುಮಾರ್ ಝಾ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕಾಲೇಜಿನ ಆರು ಮಂದಿ ಸಿಬ್ಬಂದಿ ಮೇಲೆ ಹತ್ಯೆ ಮೊಕದ್ದಮೆ ದಾಖಲಿಸಲಾಗಿದೆ.

ಲೈಂಗಿಕ ಕಿರುಕುಳ ಆರೋಪ: ಮುರುಘಾ ಮಠದ ಆಡಳಿತಾಧಿಕಾರಿ ವಿರುದ್ಧ ಪ್ರಕರಣ ದಾಖಲು
ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮುರುಘಾ ಮಠದ ಆಡಳಿತಾಧಿಕಾರಿ ಎಸ್ .ಕೆ. ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ಬಸವರಾಜನ್ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ನಿರ್ಮಾಪಕರಿಗೆ ನಟ ದರ್ಶನ್ ಬೆದರಿಕೆ ಕರೆ: ಚಾಲೆಂಜಿಂಗ್ ಸ್ಟಾರ್ ವಿರುದ್ಧ ಕೆಂಗೇರಿ ಠಾಣೆಯಲ್ಲಿ ದೂರು ದಾಖಲು!
ನಟ ದರ್ಶನ್ ತಮಗೆ ಬೆದರಿಕೆ ಹಾಕಿದ್ದಾರೆಂದು ನಿರ್ಮಾಪಕ ಭರತ್ ವಿಷ್ಣುಕಾಂತ್ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ದೆಹಲಿಯ 12 ಕಡೆಗಳಲ್ಲಿ ಇಡಿ ದಾಳಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಾಜಧಾನಿಯ 12 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಮಂಗಳವಾರ ದಾಳಿ ನಡೆಸಿದೆ.

ನವದೆಹಲಿ: ಮೊಯಿತ್ರಾ, ಮಣಿಮೇಕಲೈ ವಿರುದ್ಧ ಪೊಲೀಸರಿಗೆ ಬಿಜೆಪಿ ಮುಖಂಡರ ದೂರು
ಟಿಎಂಸಿ ಸಂಸದೆ ಮೆಹುವಾ ಮೊಯಿತ್ರಾ ಮತ್ತು ಕೆನಡಾ ಮೂಲದ ಚಿತ್ರ ನಿರ್ದೇಶಕ ಲೀನಾ ಮಣಿಮೇಕಲೈ ವಿರುದ್ಧ ಬಿಜೆಪಿ ಮುಖಂಡರು ಗುರುವಾರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.ಅವರು ಹಿಂದೂಗಳ ಭಾವನೆಗಳಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

