ರಾಜಕೀಯಅಧಿಕಾರಿಗಳ ವರ್ಗಾವಣೆಯಲ್ಲಿ ಹಣ ಪಡೆದಿರುವುದು ಸಾಬೀತಾದರೆ ರಾಜಕೀಯದಿಂದ ನಿವೃತ್ತಿ: ಎಚ್ ಡಿಕೆಗೆ ಸಿದ್ದರಾಮಯ್ಯ ತಿರುಗೇಟು
ಕಾಸಿಗಾಗಿ ಹುದ್ದೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷ ಎಚ್ಡಿ ಕುಮಾರಸ್ವಾಮಿ ನಡುವಿನ ಮಾತಿನ ಸಮರ ತಾರಕಕ್ಕೇರಿದ್ದು, ಸರ್ಕಾರಿ ಅಧಿಕಾರಿಗಳ ಒಂದೇ ವರ್ಗಾವಣೆಯಲ್ಲಿ ಹಣ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.