Cauvery dispute

ಕಾವೇರಿ ವಿವಾದ: ಭಾಷಿಕ ಅಲ್ಪಸಂಖ್ಯಾತರ ರಕ್ಷಣೆಗೆ ಸೌಹಾರ್ದಯುತ ಸಂಬಂಧಕ್ಕೆ ತಮಿಳುನಾಡು ಸಚಿವ ಕರೆ
ಕಾವೇರಿ ವಿವಾದ ಭುಗಿಲೆದ್ದಿದ್ದು ಕರ್ನಾಟಕ-ತಮಿಳುನಾಡು ನಡುವೆ ಮತ್ತೆ ತಿಕ್ಕಾಟ ಪ್ರಾರಂಭವಾಗಿದೆ. ಈ ನಡುವೆ ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್ ಉಭಯ ರಾಜ್ಯಗಳ ನಡುವೆ ಸೌಹಾರ್ದಯುತ ಸಂಬಂಧಕ್ಕೆ ಕರೆ ನೀಡಿದ್ದಾರೆ.

ಕಾವೇರಿ 'ಸಂಕಷ್ಟ ಸೂತ್ರ'ಕ್ಕೆ ಒತ್ತಡ ಹಾಕಬೇಕಿದೆ, ತಜ್ಞರ ತಂಡದ ಜೊತೆ ಚರ್ಚೆ ಬಳಿಕ ತೀರ್ಮಾನ: ಸಿಎಂ ಸಿದ್ದರಾಮಯ್ಯ
ಕಾವೇರಿ ಸಂಕಷ್ಟ ಸೂತ್ರಕ್ಕೆ ಒತ್ತಡದ ಅಗತ್ಯವಿದ್ದು, ಇಂದು ಸಂಜೆ ತಜ್ಞರ ತಂಡದ ಜೊತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಹೋರಾಟಗಾರರ ನಿಯೋಗಕ್ಕೆ ತಿಳಿಸಿದ್ದಾರೆ.

ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್'ನಲ್ಲಿ ಇಂದು ವಿಚಾರಣೆ, ಕರ್ನಾಟಕಕ್ಕೆ ಮಹತ್ವದ ದಿನ
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಿಚಾರಣೆ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ವಸ್ತುಸ್ಥಿತಿಯನ್ನು ಮಂದಿಟ್ಟು, ಅಂಕಿ ಅಂಶಗಳ ಸಮೇತ ಸಮರ್ಥ ವಾದ ಮಂಡಿಸಲು ರಾಜ್ಯಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಡುವಿನ ಒಳಜಗಳದಿಂದ ಕಾವೇರಿ ಹೋರಾಟಕ್ಕೆ ಹಿನ್ನಡೆ: ಮುಖ್ಯಮಂತ್ರಿ ಚಂದ್ರು
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಒಳಜಗಳದಿಂದ ಕಾವೇರಿ ಹೋರಾಟಕ್ಕೆ ಹಿನ್ನಡೆಯಾಗಿದೆ. ಈ ಇಬ್ಬರಿಗೂ ರಾಜ್ಯದ ಜನರ ಹಿತ ಬೇಕಿಲ್ಲ, ಅಧಿಕಾರ ಉಳಿಸಿಕೊಳ್ಳುವುದಷ್ಟೆ ಮುಖ್ಯವಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು.

ಕಾವೇರಿ ವಿವಾದ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಮಾಡಿದ ತಮಿಳುನಾಡು ಸಂಸದರು
ಜಲಸಂಪನ್ಮೂಲ ಸಚಿವ ದುರೈಮುರುಗನ್ ನೇತೃತ್ವದ ಸರ್ವಪಕ್ಷಗಳ ತಮಿಳುನಾಡು ಸಂಸದರ ನಿಯೋಗ ಮಂಗಳವಾರ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಸಲ್ಲಿಸಿ, ಬಾಕಿ ಇರುವ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ಕಾವೇರಿ ವಿವಾದ: ಕೇಂದ್ರ ಮಧ್ಯಸ್ಥಿಕೆ ವಹಿಸಿ, ರಾಜ್ಯಕ್ಕೆ ಪರಿಹಾರ ನೀಡಲಿ; ದೆಹಲಿಗೆ ಹೋಗುತ್ತೇನೆ ಎಂದ ಡಿಕೆ ಶಿವಕುಮಾರ್
ತಮಿಳುನಾಡಿಗೆ ನೀರು ಬಿಡುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯವು ಅತಂತ್ರ ಸ್ಥಿತಿಯಲ್ಲಿದ್ದು, ಕೇಂದ್ರ ಸರ್ಕಾರವು ಮಧ್ಯಸ್ಥಿಕೆ ವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಒತ್ತಾಯಿಸಿದರು.

ಕಾವೇರಿ ವಿವಾದ: ಪರಸ್ಪರ ಮಾತುಕತೆ ಮೂಲಕ ಮಾತ್ರ ಪರಿಹರಿಸಲು ಸಾಧ್ಯ- ಹೆಚ್. ಡಿ. ದೇವೇಗೌಡ
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ಜಲ ವಿವಾದವನ್ನು ಕಾನೂನಾತ್ಮಕವಾಗಿ ಬಗೆಹರಿಸಲು ಸಾಧ್ಯವಿಲ್ಲ ಎಂದಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ದಶಕಗಳಷ್ಟು ಹಳೆಯದಾದ ಸಮಸ್ಯೆಯನ್ನು ಉಭಯ ರಾಜ್ಯಗಳು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ಕಾವೇರಿ: ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಕರ್ನಾಟಕಕ್ಕೆ ಪ್ರಾಧಿಕಾರ ಆದೇಶ
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಶಾಕ್ ನೀಡಿದ್ದು, ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಆದೇಶ ನೀಡಿದೆ.

ತಮಿಳುನಾಡಿಗೆ ಕಾವೇರಿ ನೀರು: ರಾಜ್ಯದ ರೈತ ಸಂಘಟನೆಗಳಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ
ಕೆಆರ್ ಎಸ್ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(ಸಿಡಬ್ಲ್ಯುಎಂಎ) ನೀಡಿರುವ ಆದೇಶ ಪ್ರಶ್ನಿಸಿ ಕರ್ನಾಟಕ ರೈತ ಸಂಘಟನೆಗಳು ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ...

