cauvery issue

ಮಳೆ ಇಲ್ಲದೆ ರೈತರು ಕಂಗಾಲು; ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಲಿ; ಪಿಎಂ ಗೆ ಎಚ್.ಡಿ ದೇವೇಗೌಡ ಪತ್ರ
ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಈಗ ಏನು ವಾಸ್ತವಾಂಶ ಇದೆಯೋ ಅದರ ಆಧಾರದ ಮೇಲೆ ಕೇಂದ್ರ ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಹಾಕಬೇಕು. ಅರ್ಜಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು .

ಸುದೀಪ್, ದರ್ಶನ್, ಶಿವಣ್ಣ, ಯಶ್ ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ? ತಮಿಳು ಚಿತ್ರ ವಿತರಿಸಿ 36 ಕೋಟಿ ರೂ. ಪಡೆದವರು ಕಾಣೋಲ್ವಾ?
ಕಾವೇರಿ ವಿಚಾರದಲ್ಲಿ ನಿಮ್ಮ ಕಣ್ಣಿಗೆ ನಾವು ನಾಲ್ಕು ಮಂದಿ ಮಾತ್ರ ಕಾಣುವುದಾ? ಬೇರೆ ಯಾರು ಕಾವುದಿಲ್ಲವಾ? ಎಂದು ಪ್ರಶ್ನಿಸುವ ಮೂಲಕ ನಟ ದರ್ಶನ್, ಕಲಾವಿದರ ಪರ ಬ್ಯಾಟ್ ಬೀಸಿದ್ದಾರೆ.

ಅನಂತಕುಮಾರ್ ಇದ್ದಿದ್ದರೆ ಕಾವೇರಿ ವಿವಾದ ಆಗುತ್ತಿರಲಿಲ್ಲ- ಡಿಕೆ ಶಿವಕುಮಾರ್; ಅವರಿಲ್ಲದೆ ತಬ್ಬಲಿಯಾಗಿದ್ದೇವೆ- ಬಿಎಸ್ ವೈ
"ಅನಂತಕುಮಾರ್ ಅವರು ಇದ್ದಿದ್ದರೇ ಯಾವುದೇ ಕಾರಣಕ್ಕೂ ಕಾವೇರಿ ವಿವಾದ ಇಷ್ಟರಮಟ್ಟಿಗೆ ಹೋಗಲು ಬಿಡುತ್ತಿರಲಿಲ್ಲ. ಅವರು ರಾಜ್ಯದ ಅಭಿವೃದ್ಧಿಗೆ ಪಕ್ಷ ಭೇದ ಮರೆತು ಕಾರ್ಯ ಮಾಡುತ್ತಿದ್ದ "ಅಜಾತಶತ್ರು-ಡಿಸಿಎಂ ಡಿ.ಕೆ.ಶಿವಕುಮಾರ್

ತಮಿಳುನಾಡಿಗೆ ಕಾವೇರಿ ನೀರು: ರಾಜ್ಯದಾದ್ಯಂತ ಹರಡಿದ ಪ್ರತಿಭಟನೆಯ ಕಿಚ್ಚು
ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದ ಬೆನ್ನಲ್ಲೇ ಸುಪ್ರೀಂ ಆದೇಶ ಖಂಡಿಸಿ ಪ್ರತಿಭಟನೆಗಳು ಮುಂದುವರೆದಿದ್ದು, ಶುಕ್ರವಾರ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಕಾವೇರಿ ಸಮಸ್ಯೆಗೆ ಡಿಎಂಕೆ-ಕಾಂಗ್ರೆಸ್ ಹೊಂದಾಣಿಕೆ ಕಾರಣ; ಕೋರ್ಟ್ ಮುಂದೆ ಸಮರ್ಪಕ ವಾದ ಮಂಡಿಸಲು ಸರ್ಕಾರ ವಿಫಲ: ಬಿಎಸ್ ಯಡಿಯೂರಪ್ಪ
ರಾಜ್ಯ ಸರ್ಕಾರ ಸಮರ್ಪಕ ವಾದ ಮಾಡದೆ ಇದ್ದುದರಿಂದ, ವಾಸ್ತವಿಕ ಸ್ಥಿತಿಯನ್ನು ಸಮರ್ಥವಾಗಿ ಮನದಟ್ಟು ಮಾಡಿಕೊಡಲು ವಿಫಲವಾಗಿದ್ದರಿಂದ ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ರಾಜ್ಯಕ್ಕೆ ಹಿನ್ನಡೆಯಾಯಿತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಕಾವೇರಿ ವಿವಾದ: ನಾಳೆ ದೆಹಲಿಯಲ್ಲಿ ರಾಜ್ಯದ ಸಂಸದರು, ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಸೇರಿ ರಾಜ್ಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕದ ಎಲ್ಲಾ ಸಂಸದರು ಮತ್ತು...

ಸರ್ವಪಕ್ಷ ನಿಯೋಗ ಭೇಟಿ ಕುರಿತು ಪ್ರಧಾನಿ ಕಚೇರಿಯಿಂದ ಯಾವುದೇ ಉತ್ತರವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
"ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ"-ಡಿಕೆ ಶಿವಕುಮಾರ್

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ: ಆ.21ರಂದು ಬೆಂಗಳೂರು-ಮೈಸೂರು ಹೆದ್ದಾರಿ ಬಂದ್'ಗೆ ಬಿಜೆಪಿ ಕರೆ
ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಬಿಡುಗಡೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ರಾಜ್ಯ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಆಗಸ್ಟ್ 21ರಂದು ಬೆಂಗಳೂರು-ಮೈಸೂರು ಹೆದ್ದಾರಿ ಬಂದ್'ಗೆ ಕರೆ ನೀಡಿದೆ.

ಕಾವೇರಿ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲರು ಒಗ್ಗಟ್ಟಾಗಿ ಹೋರಾಡೋಣ: ಸುಮಲತಾ
ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ,ಎಲ್ಲವನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಕಾವೇರಿ ವಿಚಾರದಲ್ಲಿ ಒಂದಾಗಬೇಕು ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ....

