Cauvery water Dispute

ಕರ್ನಾಟಕದಿಂದ ಕಾವೇರಿ ನೀರು ಬಿಡುಗಡೆಗೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ತಮಿಳುನಾಡು ವಿಧಾನಸಭೆ ಸೋಮವಾರ ನಿರ್ಣಯವನ್ನು ಅಂಗೀಕರಿಸಿತು.

ಜಲಾಶಯಗಳಿಗೆ ಒಳಹರಿವು ಕಡಿಮೆ; ಬೇಕಿರುವುದು 106 ಟಿಎಂಸಿ ನೀರು, ಇರುವುದು 56 ಟಿಎಂಸಿ: ಡಿಕೆ ಶಿವಕುಮಾರ್
ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗುತ್ತಿದೆ. ಸದ್ಯ ಜಲಾಶಯಗಳಲ್ಲಿ ಅಗತ್ಯಕ್ಕಿಂತ ಅರ್ಧದಷ್ಟು ನೀರು ಇದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ.

ಕಾವೇರಿ ಜಲ ವಿವಾದ: 'ಡಿಎಂಕೆ ಸರ್ಕಾರ ಗಾಢ ನಿದ್ರೆಯಲ್ಲಿದೆ'; ಎಂಕೆ ಸ್ಟಾಲಿನ್ ವಿರುದ್ಧ ಎಡಪ್ಪಾಡಿ ಕೆ ಪಳನಿಸ್ವಾಮಿ ಕಿಡಿ
ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಭಾನುವಾರ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಈ ವಿಚಾರದಲ್ಲಿ ರಾಜ್ಯದ ಜನರ ಬಗ್ಗೆ ಕಾಳಜಿ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳಿಂದ ಈ ವರ್ಷ ನನ್ನ ಹುಟ್ಟುಹಬ್ಬದ ಆಚರಣೆ ಇಲ್ಲ: ನಟಿ ರಚಿತಾ ರಾಮ್
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯದಲ್ಲಿ ಸರಣಿ ಬಂದ್ ಆಚರಿಸಿದ್ದರ ಬೆನ್ನಲ್ಲೇ ನಟಿ ರಚಿತಾ ರಾಮ್ ಕೂಡ ಈ ಹೋರಾಟಕ್ಕೆ ಪರೋಕ್ಷ ಬೆಂಬಲ ವ್ಯಕ್ತಪಡಿಸಿದ್ದಾರೆ. ತಮ್ಮ ಹುಟ್ಟುಹಬ್ಬಕ್ಕೆ ಸಂಬಂಧಿಸಿದಂತೆ ನಟಿ ತಮ್ಮ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.

ಕರ್ನಾಟಕ ಬಂದ್ ಸಂಪೂರ್ಣ ಶಾಂತಿಯುತ: ಡಿಕೆ ಶಿವಕುಮಾರ್; ಅ.5ಕ್ಕೆ ಕೆಆರ್‌ಎಸ್ ಗೆ ಮುತ್ತಿಗೆ ಎಂದ ವಾಟಾಳ್ ನಾಗರಾಜ್
ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ವರದಿಯಾಗದೆ ಕರ್ನಾಟಕ ಬಂದ್ ಸಂಪೂರ್ಣ ಶಾಂತಿಯುತವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ತಿಳಿಸಿದರು.

ಕರ್ನಾಟಕ ಬಂದ್: ಬಂಧಿತರನ್ನು ಬಿಡುಗಡೆ ಮಾಡಿ; ಈ ಒಗ್ಗಟ್ಟು ನೆರೆ ರಾಜ್ಯಕ್ಕೆ ಎಚ್ಚರಿಕೆ ಗಂಟೆಯಾಗಬೇಕು- ಎಚ್‌ಡಿ ಕುಮಾರಸ್ವಾಮಿ
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ನಡೆಸುತ್ತಿರುವ ಕರ್ನಾಟಕ ಬಂದ್ ವೇಳೆ ಬಂಧಿತರಾಗಿರುವ ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಶುಕ್ರವಾರ ಒತ್ತಾಯಿಸಿದ್ದಾರೆ.

ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸದಾ ಬಿಜೆಪಿ ಬೆಂಬಲವಿರುತ್ತದೆ: ಬಸವರಾಜ ಬೊಮ್ಮಾಯಿ
ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. ಈಗಾಗಲೇ ತಮಿಳುನಾಡಿಗೆ ಹೆಚ್ಚಿನ ನೀರನ್ನು ಹರಿಸಲಾಗಿದ್ದು, ಕಾವೇರಿ ಜಲವಿವಾದ ನ್ಯಾಯಮಂಡಳಿಯ ಆದೇಶವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು ಅವರು ಹೇಳಿದರು.

ಬೆಂಗಳೂರು ಬಂದ್‌ನಿಂದಾಗಿ ಅಂದಾಜು 1,500 ರಿಂದ 2,000 ಕೋಟಿ ರೂ. ನಷ್ಟ; ಕರ್ನಾಟಕ ಬಂದ್‌ಗೆ ಅನುಮತಿಯಿಲ್ಲ- ಪರಮೇಶ್ವರ
ಸೆಪ್ಟೆಂಬರ್ 29ರಂದು ಪ್ರತಿಭಟನೆಗೆ ಮಾತ್ರ ಅವಕಾಶವಿದೆ. ಯಾರಾದರೂ ಬಂದ್ ಆಚರಿಸುವಂತೆ ಬಲವಂತ ಮಾಡಿದರೆ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಗುರುವಾರ ಹೇಳಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಬೆಂಗಳೂರು ಬಂದ್ ವೇಳೆ ಗದ್ದಲ: ಹೋಟೆಲ್‌ನಲ್ಲಿ ಗಲಾಟೆ ಮಾಡಿದ ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ
ಬೆಂಗಳೂರು ಬಂದ್ ವೇಳೆ ಹೊಟೇಲ್‌ನಲ್ಲಿ ಗಲಾಟೆ ಉಂಟುಮಾಡಿದ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ಬುಧವಾರ ಬಂದ್ ಆಚರಿಸಲಾಯಿತು.

