Cauvery water row

ಕರ್ನಾಟಕ ಬಂದ್ ಹಿಂಪಡೆಯುವುದಿಲ್ಲ- ಕನ್ನಡಪರ ಹೋರಾಟಗಾರರು; ಇಂದು ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಮಾಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಹಿರಿಯ ಚಳವಳಿಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಡಿದ್ದು ಅಂದರೆ ಸೆಪ್ಟೆಂಬರ್ 29ರಂದು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಮೇಕೆದಾಟು ಯೋಜನೆ ಮತ್ತು ಸಂಕಷ್ಟ ಸೂತ್ರದಿಂದ ಕಾವೇರಿ ನೀರಿನ ಸಮಸ್ಯೆ ಇತ್ಯರ್ಥ ಸಾಧ್ಯ: ಸಿಎಂ ಸಿದ್ದರಾಮಯ್ಯ
ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ಕರ್ನಾಟಕ-ತಮಿಳುನಾಡು ನಡುವಿನ ನೀರಿನ ಸಮಸ್ಯೆ ಬಗೆಹರಿಸಬಹುದು. ಮೇಕೆದಾಟು ಅಣೆಕಟ್ಟು ನಿರ್ಮಿಸಿದರೆ 67 ಟಿಎಂಸಿ ನೀರು ಸಂಗ್ರಹಿಸಬಹುದು. ಮಳೆ ಕೊರತೆ ಸಂದರ್ಭದಲ್ಲಿ ಉಭಯ ರಾಜ್ಯಗಳು ನೀರು ಬಳಸಬಹುದು ಎಂದು ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಮಗೆ ಅಧಿಕಾರ ಮುಖ್ಯವಲ್ಲ, ರಾಜ್ಯದ ರೈತರ ಹಿತ ಮುಖ್ಯ: ಸಿಎಂ ಸಿದ್ದರಾಮಯ್ಯ
ನಮಗೆ ಅಧಿಕಾರ ಮುಖ್ಯವಲ್ಲ, ರಾಜ್ಯದ ರೈತರ ಹಿತ ಮುಖ್ಯ, ರಾಜ್ಯದ ಜನತೆಯ ಹಿತರಕ್ಷಣೆಗೆ ಕ್ರಮ ಕೈಗೊಳ್ಳಲು ಸರ್ಕಾರ ಹಿಂದೆ ಬಿದ್ದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾವೇರಿ ನೀರಿನ ವಿವಾದ: ತಮಿಳುನಾಡು ಮನವೊಲಿಸಲು INDIA ಮೈತ್ರಿಕೂಟ ಬಳಸಿ; ಕಾಂಗ್ರೆಸ್'ಗೆ ಬಿಜೆಪಿ ಆಗ್ರಹ
ಕಾವೇರಿ ನದಿ ನೀರಿಗಾಗಿ ಆಗ್ರಹಿಸುತ್ತಿರುವ ತಮಿಳುನಾಡು ರಾಜ್ಯದ ಮನವೊಲಿಸಲು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ INDIA ಮೈತ್ರಿಕೂಟವನ್ನು ಬಳಕೆ ಮಾಡಬೇಕೆಂದು ಬಿಜೆಪಿ ಆಗ್ರಹಿಸಿದೆ.

ಸೆಪ್ಟೆಂಬರ್ 26 ಮಂಗಳವಾರ ಬೆಂಗಳೂರು ಬಂದ್ ನಿಶ್ಚಿತ, ರಾಮನಗರವೂ ಬಂದ್: ಕುರುಬೂರು ಶಾಂತಕುಮಾರ್
ರಾಜ್ಯದಲ್ಲಿ ಕಾವೇರಿ ನದಿ ನೀರಿನ ಕಿಚ್ಚು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಮಂಡ್ಯ, ರಾಮನಗರ ಮತ್ತು ಬೆಂಗಳೂರಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

ತನ್ನ ವೈಫಲ್ಯ ಮುಚ್ಚಿಹಾಕಲು ಕಾಂಗ್ರೆಸ್ ಕಾವೇರಿ ವಿವಾದವನ್ನು ರಾಜಕೀಯಗೊಳಿಸುತ್ತಿದೆ, ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಲಿ: ಬೊಮ್ಮಾಯಿ
ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಕರ್ನಾಟಕದ ಹಿತಾಸಕ್ತಿ ಕಡೆಗಣಿಸಿದರೆ ಮಠಾಧೀಶರು, ರೈತರು, ಬೆಂಗಳೂರಿನ ನಾಗರಿಕರು ದಂಗೆ ಏಳಲಿದ್ದಾರೆ ಎಂದು ಮಾಜಿ ಸಿಎಂ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕಾವೇರಿ ಕಿಚ್ಚು: ಮಂಡ್ಯ, ಮೈಸೂರು ಭಾಗಗಳಲ್ಲಿ ತೀವ್ರ ಪ್ರತಿಭಟನೆ, ಬೆಂಗಳೂರಿಗೆ ನೀರು ಪೂರೈಕೆ ನಿಲ್ಲಿಸಲು ಆಗ್ರಹ
ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ ನಿತ್ಯ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ಬೆನ್ನಲ್ಲೇ ಕರ್ನಾಟಕದಲ್ಲಿ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರವಾಗಿದೆ.

ಕಾವೇರಿ ವಿವಾದ: 'ಸುಪ್ರೀಂ' ಆದೇಶಕ್ಕೆ ವಿರೋಧ; ವಿಧಾನಸೌಧಕ್ಕೆ ಮುತ್ತಿಗೆ ಯತ್ನ, ಕನ್ನಡಪರ ಹೋರಾಟಗಾರರ ಬಂಧನ
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಕನ್ನಡಪರ ಹೋರಾಟಗಾರರು ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ರಾಜ್ಯದ ಪಾಲಿಗೆ 'ಸುಪ್ರೀಂ' ತೀರ್ಪು ಮರಣ ಶಾಸನ: ಮಂಡ್ಯ, ಮೈಸೂರು ಭಾಗದಲ್ಲಿ ಪ್ರತಿಭಟನೆ, ಸಂಸದರ ರಾಜೀನಾಮೆಗೆ ಒತ್ತಾಯ
ಕಾವೇರಿ ಜಲ ವಿವಾದದಲ್ಲಿ ಸುಪ್ರೀಂ ಕೋರ್ಟ್ ನಲ್ಲಿಯಾದರೂ ತಮ್ಮ ಪರ ತೀರ್ಪು ಬರಬಹುದೆಂದು ನಿರೀಕ್ಷಿಸಿದ್ದ ಕರ್ನಾಟಕಕ್ಕೆ ಇಂದು ಗುರುವಾರ ಬಿಗ್ ಶಾಕ್ ಎದುರಾಗಿದೆ.

