Cauvery water row

ತಮಿಳುನಾಡಿಗೆ ಕಾವೇರಿ ನೀರು: ಸಿಡಬ್ಲ್ಯೂಎಂಎ, ಸುಪ್ರೀಂ ಕೋರ್ಟ್ ಮುಂದೆ ವಾಸ್ತವ ಸ್ಥಿತಿಗತಿ ಮಂಡನೆ- ಸಿಎಂ ಸಿದ್ದರಾಮಯ್ಯ
ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ಕುರಿತು ರಾಜ್ಯದ ವಾಸ್ತವ ಸ್ಥಿತಿಗತಿಗಳನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಮತ್ತು ಸುಪ್ರೀಂ ಕೋರ್ಟ್‌ನ ಮುಂದಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.

ಕಾವೇರಿ ವಿವಾದ: ತಮಿಳು ನಾಡು ಅರ್ಜಿ ವಿಚಾರಣೆ ಸೆಪ್ಟೆಂಬರ್ 6ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್
ಕರ್ನಾಟಕ ಮತ್ತು ತಮಿಳು ನಾಡಿನ ಮಧ್ಯೆ ಕಾವೇರಿ ಜಲ ವಿವಾದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 6ಕ್ಕೆ ಮುಂದೂಡಿದೆ.

ಸರ್ವಪಕ್ಷ ಸಭೆಯ ನಂತರ ಕಾವೇರಿ ಜಲ ವಿವಾದ ಬಗ್ಗೆ ತೀರ್ಮಾನ: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್
ತಮಿಳು ನಾಡಿಗೆ ಕಾವೇರಿ ನೀರು ಬಿಡುವ ಕುರಿತು ರಾಜ್ಯ ಸರ್ಕಾರ ಇಂದು ಬುಧವಾರ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದೆ ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

'ಕಾವೇರಿ' ಖ್ಯಾತೆ: ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ಪ್ರಗತಿಯಲ್ಲಿ: ಸಿಎಂ, ಡಿಸಿಎಂ ಸೇರಿ ಮಾಜಿ ಮುಖ್ಯಮಂತ್ರಿಗಳು, ನಾಯಕರು ಭಾಗಿ
ತಮಿಳು ನಾಡಿಗೆ ಕಾವೇರಿ ನೀರು ಹಂಚಿಕೆ ಮಾಡುವ ಸಂಬಂಧ ಚರ್ಚಿಸಿ ಒಂದು ಸರ್ವಸಮ್ಮತ ನಿರ್ಧಾರಕ್ಕೆ ಬರಲು ಸರ್ಕಾರ ಕರೆದಿರುವ ಸರ್ವಪಕ್ಷ ಸಭೆ ವಿಧಾನ ಸೌಧದಲ್ಲಿ ಆರಂಭವಾಗಿದೆ.

'ಕಾವೇರಿ'ದ ವಿವಾದ: ಇಂದು ಸರ್ವಪಕ್ಷ ಸಭೆ, ತಮಿಳು ನಾಡು ಕ್ಯಾತೆ ಎದುರಿಸಲು ಸರ್ಕಾರ ಮಹತ್ವದ ತೀರ್ಮಾನ ಸಾಧ್ಯತೆ
ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 3 ತಿಂಗಳು ಆಗುತ್ತಿರುವ ಹೊತ್ತಿನಲ್ಲಿ ತಮಿಳು ನಾಡಿನೊಂದಿಗಿನ ಕಾವೇರಿ ಜಲವಿವಾದ ಮತ್ತೆ ಭುಗಿಲೆದ್ದಿದೆ. ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳು ನಾಡಿಗೆ ಕರ್ನಾಟಕ ನೀರು ಬಿಡುತ್ತಿರುವುದಕ್ಕೆ ವಿಪಕ್ಷಗಳು, ರಾಜ್ಯ ರೈತ ಸಂಘ ಸೇರಿದಂತೆ ಹಲವರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಮಂಡ್ಯದಲ್ಲಿ ಕಾವೇರಿ ಕಿಚ್ಚು: ಬೆಂಗಳೂರು-ಮೈಸೂರು ಹೆದ್ದಾರಿ ತಡೆಗೆ ರೈತರ ಯತ್ನ, ಪೊಲೀಸರ ನಡುವೆ ವಾಗ್ವಾದ! ವಿಡಿಯೋ
ತಮಿಳುನಾಡಿಗೆ ಕಾವೇರಿ ನೀರು ಹರಿಯಬಿಟ್ಟಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರಮುಖ ಕಾವೇರಿ ಜಲಾನಯನ ಪ್ರದೇಶವಾದ ಮಂಡ್ಯದಲ್ಲಿ ರೈತರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿವಾದ: ನಾಳೆ ರಾಜ್ಯ ಸರ್ಕಾರ ಸುಪ್ರೀಂಗೆ ಮೇಲ್ಮನವಿ, ಸಂಪುಟ ಸಭೆಯಲ್ಲಿ ತೀರ್ಮಾನ
ತಮಿಳುನಾಡಿಗೆ ರಾಜ್ಯದಿಂದ ನಿತ್ಯ 10,000 ಕ್ಯೂಸೆಕ್ಸ್‌ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶದ ವಿರುದ್ಧ ಸುಪ್ರೀಂಕೋರ್ಟ್'ದೆ ಮೇಲ್ಮನವಿ ಸಲ್ಲಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ.

ಕಾವೇರಿ ಜಲವಿವಾದ ಸಮಸ್ಯೆ ಚರ್ಚೆಗೆ ಸರ್ವಪಕ್ಷ ಸಭೆ, ಆದೇಶ ಪುನರ್ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ: ಡಿ ಕೆ ಶಿವಕುಮಾರ್
ಕಾವೇರಿ ನೀರಿಗೆ ತಮಿಳುನಾಡು ಆಗ್ರಹಿಸುತ್ತಿರುವುದರಿಂದ ಉಂಟಾಗಿರುವ ಸಮಸ್ಯೆ ಬಗ್ಗೆ ಚರ್ಚಿಸಲು ಶೀಘ್ರವೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಕಾವೇರಿ ವಿವಾದ: 24,000 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್ ಗೆ ತಮಿಳುನಾಡು ಮೊರೆ!
ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಬೆಳೆದು ನಿಂತಿರುವ ಬೆಳೆಗಾಗಿ ಇಂದಿನಿಂದ 24, 000 ಕ್ಯೂಸೆಕ್ಸ್ ನೀರನ್ನು ತನ್ನ ಜಲಾಶಯಗಳಿಂದ ತಕ್ಷಣವೇ ಬಿಡುಗಡೆ ಮಾಡುವಂತೆ ಕರ್ನಾಟಕ ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದೆ.

