Cauvery water

ಬೆಂಗಳೂರು ಬಂದ್: ನಗರ ನಿವಾಸಿಗಳಿಂದ ಮಿಶ್ರ ಪ್ರತಿಕ್ರಿಯೆ, ಜನರ ಸಹಜ ಜೀವನಕ್ಕೆ ತಟ್ಟಿದ ಬಂದ್ ಬಿಸಿ
ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಇಂದು ಸೆ.26ರಂದು ಕನ್ನಡ ಪರ ಸಂಘಟನೆಗಳು ಮತ್ತು ರೈತರು ಕರೆ ನೀಡಿರುವ ಬಂದ್‌ಗೆ ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಾವೇರಿ ವಿವಾದ: ತಮಿಳುನಾಡಿನಲ್ಲೂ ಮುಂದುವರೆದ ರೈತರ ಪ್ರತಿಭಟನೆ!
ತಮಿಳುನಾಡಿನಲ್ಲಿಯೂ ಕಾವೇರಿ ಹೋರಾಟ ತೀವ್ರಗೊಂಡಿದೆ. ತಮ್ಮ ರಾಜ್ಯಕ್ಕೆ ನದಿ ನೀರು ಬಿಡುವಂತೆ ಒತ್ತಾಯಿಸಿ ತಿರುಚ್ಚಿಯ ರೈತರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕರ್ನಾಟಕವನ್ನು ಒತ್ತಾಯಿಸಿದರು.

ಕಾವೇರಿ ಕಿಚ್ಚು: ನಾಳೆ ಬೆಂಗಳೂರು ಬಂದ್; ಶಾಲಾ ಕಾಲೇಜ್ ಗಳಿಗೆ ರಜೆ, ಬಿಎಂಟಿಸಿ ಡೌಟ್, ಮೆಟ್ರೋ ಇರುತ್ತೆ
ನೆರೆಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಈಗಾಗಲೇ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಮಂಗಳವಾರ ಬೆಂಗಳೂರು ಸಂಪೂರ್ಣ ಬಂದ್ ಕರೆ ನೀಡಲಾಗಿದೆ. ಅಲ್ಲದೆ ಶುಕ್ರವಾರ ರಾಜ್ಯ ಬಂದ್ ಗೂ...

ಸೆ.29ಕ್ಕೆ ಅಖಂಡ ಕರ್ನಾಟಕ ಬಂದ್: ಕನ್ನಡಪರ ಸಂಘಟನೆಗಳ ಕರೆ
ಕಾವೇರಿ ನದಿ ನೀರಿನ ಹೋರಾಟ ಮಂಡ್ಯ, ಮೈಸೂರು, ಬೆಂಗಳೂರು ನಂತರ ಇಡೀ ಕರ್ನಾಟಕದಾದ್ಯಂತ ವ್ಯಾಪಿಸುತ್ತಿದೆ. ಇದೇ ಸೆಪ್ಟೆಂಬರ್ 26ರಂದು ಮಂಗಳವಾರ ಬೆಂಗಳೂರು ಬಂದ್ ಗೆ ಕರೆ ನೀಡಿದ್ದರೆ ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.

ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಆದೇಶ ಖಂಡಿಸಿ ಸೆಪ್ಟೆಂಬರ್ 23ಕ್ಕೆ ಮಂಡ್ಯ ಬಂದ್
ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದ್ದು, ಸುಪ್ರೀಂ ತೀರ್ಪು ಖಂಡಿಸಿ ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್‌ಗೆ ಕರೆ ನೀಡಲಾಗಿದೆ.

ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
ಮುಂದಿನ 15 ದಿನಗಳ ಕಾಲ ತಮಿಳುನಾಡಿನ ಬಿಳಿಗುಂಡ್ಲುವಿಗೆ ಕಾವೇರಿ ಮತ್ತು ಕಬಿನಿ ಜಲಾನಯನ ಪ್ರದೇಶಗಳಿಂದ 5,000 ಕ್ಯೂಸೆಕ್ಸ್ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಕೇಳಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ನಿರ್ದೇಶನದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

ರಾಜ್ಯ ಸರ್ಕಾರದ ನಡೆ ರೈತರನ್ನು ಇಕ್ಕಟಿಗೆ ಸಿಲುಕಿಸಿದೆ: ಮಾಜಿ ಸಿಎಂ ಬೊಮ್ಮಾಯಿ
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಅನುಸರಿಸುತ್ತಿದ್ದು, ಸರ್ಕಾರದ ಈ ನಡೆ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ಕಾವೇರಿ ವಿವಾದ: ವಿರೋಧದ ನಡುವೆ ಮತ್ತೆ ತಮಿಳುನಾಡಿಗೆ ನೀರು ಬಿಡುಗಡೆ, ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಅನುಸರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಮತ್ತೆ ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಬಿಡುಗಡೆ ಮಾಡುತ್ತಿದೆ ಎಂದು ತಿಳಿದುಬಂದಿದೆ.

ಮತ್ತೆ ತಮಿಳುನಾಡಿಗೆ ಕಾವೇರಿ ನೀರು: ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರ ಕಾನೂನಾತ್ಮಕ ಹೋರಾಟ ನಡೆಸಬೇಕು: ಬೊಮ್ಮಾಯಿ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

