CBSE

ಜೂ. 24ಕ್ಕೆ 12ನೇ ತರಗತಿ ಪರೀಕ್ಷೆ ರದ್ದು ಕುರಿತು ನಿರ್ಧಾರ ಸಾಧ್ಯತೆ: ಸುಪ್ರೀಂಗೆ ಕೇಂದ್ರ, ಸಿಬಿಎಸ್ಇ
12ನೇ ತರಗತಿಯ ಬಾಕಿ ಉಳಿದ ಪರೀಕ್ಷೆಗಳನ್ನು ರದ್ದುಪಡಿಸುವ ಕುರಿತು ಬುಧವಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಮತ್ತು ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್ಇ) ಮಂಗಳವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿವೆ.

ಸಿಬಿಎಸ್ ಇ 10 ಹಾಗು 12ನೇ ತರಗತಿ ಪರೀಕ್ಷಾ ವೇಳಾ ಪಟ್ಟಿ ಬಿಡುಗಡೆ
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) 10- 12ನೇ ತರಗತಿ ಹೊಸ ಪರೀಕ್ಷಾ ವೇಳಾ ಪಟ್ಟಿಯನ್ನು ಸೋಮವಾರ ಬಿಡುಗಡೆಗೊಳಿಸಿದೆ. ಜುಲೈ 1ರಿಂದ 15 ವರೆಗೆ 10-12ನೇ ತರಗತಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕೆಂಬ ನಿಬಂಧನೆ ವಿಧಿಸಲಾಗಿದೆ.

ಸಿಬಿಎಸ್ ಇ ಪರೀಕ್ಷಾ ವೇಳಾಪಟ್ಟಿ ಪ್ರಕಟ ಸೋಮವಾರಕ್ಕೆ ಮುಂದೂಡಿಕೆ
ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ ಇ)ಯು 10 ಮತ್ತು 12ನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷೆಗಳ ದಿನಾಂಕವನ್ನು ಸೋಮವಾರ ಪ್ರಕಟಿಸಿಲಿದೆ.

ಸಿಬಿಎಸ್ ಇ 10 ಮತ್ತು 12ನೇ ತರಗತಿ ಪರೀಕ್ಷೆ ದಿನಾಂಕ ಇಂದು ಸಂಜೆ 5 ಗಂಟೆಗೆ ಪ್ರಕಟ
ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ ಇ) 10 ಮತ್ತು 12ನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷೆಗಳ ದಿನಾಂಕವನ್ನು ಶನಿವಾರ ಸಂಜೆ 5 ಗಂಟೆಗೆ ಪ್ರಕಟಿಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಸ್ ಪೊಖ್ರಿಯಾಲ್ ತಿಳಿಸಿದ್ದಾರೆ.

1-8 ವರೆಗಿನ ತರಗತಿಗಳ ವಿದ್ಯಾರ್ಥಿಗಳ ತೇರ್ಗಡೆ ಮಾಡಲು ಸಿಬಿಎಸ್ಇ ಗೆ ಸೂಚನೆ
1-8 ವರೆಗಿನ ತರಗತಿಗಳ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡುವಂತೆ ಸಿಬಿಎಸ್ಇ ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚನೆ ನೀಡಿದೆ.

ಕೊರೋನಾ ಭೀತಿ: ದೇಶದಲ್ಲಿ ಸೋಂಕಿತರ ಸಂಖ್ಯೆ 175ಕ್ಕೆ ಏರಿಕೆ, ಸಿಬಿಎಸ್ಇ, ಐಸಿಎಸ್ಇ 10, 12ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ
ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ದೆಹಲಿ ಹಿಂಸಾಚಾರ: ಕೆಲವೆಡೆ ಸಿಬಿಎಸ್ಇ ಪರೀಕ್ಷೆ ಮುಂದೂಡಿಕೆ
ಈಶಾನ್ಯ ದೆಹಲಿ ಹಿಂಸಾಚಾರ ಸಿಬಿಎಸ್ಇ ಪರೀಕ್ಷೆಗಳ ಮೇಲೆ ಕೂಡ ಪರಿಣಾಮ ಬೀರುತ್ತಿದ್ದು ಫೆ 27 ರಂದು ನಿಗದಿಯಾಗಿದ್ದ ಸಿಬಿಎಸ್ಇ 12ನೇ ತರಗತಿಯ ಇಂಗ್ಲಿಷ್ ಪರೀಕ್ಷೆಗಳನ್ನು ದೆಹಲಿಯ 80 ಕೇಂದ್ರಗಳಲ್ಲಿ ಮುಂದೂಡಲಾಗಿದೆ.

ಹೆಣ್ಣು-ಗಂಡು ಮಕ್ಕಳಿಗೆ ಶಾಲೆ ಮತ್ತು ಮನೆಯಲ್ಲಿ ಸಮಾನ ಗಮನ, ಪ್ರಾಶಸ್ತ್ಯ ಕೊಡಿ: ಎನ್ ಸಿಇಆರ್ ಟಿ
ಚಿಕ್ಕ ಮಕ್ಕಳ ಹಂತದಲ್ಲಿಯೇ ಲಿಂಗ ತಾರತಮ್ಯವನ್ನು ಹೋಗಲಾಡಿಸಬೇಕು. ಪೂರ್ವ ಪ್ರಾಥಮಿಕ ಶಾಲಾ ಹಂತದಲ್ಲಿಯೇ ಮಕ್ಕಳಲ್ಲಿ ಹೆಣ್ಣು-ಗಂಡು ಎಂಬ ಬೇಧ-ಭಾವ ತೋರಿಸಬಾರದು ಎಂದು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ ಎನ್ ಸಿಇಆರ್ ಟಿ ಹೇಳಿದೆ.

ಮುಂದಿನ 3 ವರ್ಷಗಳಲ್ಲಿ ಕಡ್ಡಾಯವಾಗಿ ನೀರಿನ ಸದ್ಭಳಕೆ ತೋರಿಸಿ: ಶಾಲೆಗಳಿಗೆ ಸಿಬಿಎಸ್ ಇ ಆದೇಶ
ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ ಇ) ನೀರನ್ನು ಸರಿಯಾಗಿ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ. ಮುಂದಿನ ಮೂರು ವರ್ಷಗಳಲ್ಲಿ ನೀರಿನ ನಿರ್ವಹಣೆ ಮತ್ತು ನಿಗದಿತವಾಗಿ ನೀರಿನ ಲೆಕ್ಕಪರಿಶೋಧನೆ ನಡೆಸುವಂತೆ ಹೇಳಿದೆ.

