CCB police

ಬಂಧನದಿಂದ ತಪ್ಪಿಸಿಕೊಳ್ಳಲು ತಾನು ಸತ್ತಿರುವುದಾಗಿ ಕಥೆ ಕಟ್ಟಿದ್ದ ರೌಡಿ ಶೀಟರ್ ಬಂಧಿಸಿದ ಸಿಸಿಬಿ ಪೊಲೀಸರು!
ಬಂಧನದಿಂದ ತಪ್ಪಿಸಿಕೊಳ್ಳಲು ಎರಡು ವರ್ಷಗಳ ಕಾಲ ತಾನು ಸತ್ತಿರುವುದಾಗಿ ಬಿಂಬಿಸಿಕೊಂಡಿದ್ದ ರೌಡಿ ಶೀಟರ್ ಒಬ್ಬನನ್ನು ಬಂಧಿಸಿರುವುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕ್ರಿಪ್ಟೋಕರೆನ್ಸಿ ಕಂಪನಿ ಹೆಸರಲ್ಲಿ ವಂಚನೆ; ಅಪ್ಪ ಮಗ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು
ಜಿಜಿಒ ಹೆಸರಿನ ಕ್ರಿಪ್ಟೋಕರೆನ್ಸಿ ಸಂಸ್ಥೆಯಲ್ಲಿ ಮೋಸದ ಹೂಡಿಕೆ ಯೋಜನೆ ಮೂಲಕ ಸಾರ್ವಜನಿಕರಿಗೆ ವಂಚಿಸಿದ ಆರೋಪದ ಮೇಲೆ ಅಪ್ಪ ಮತ್ತು ಮಗ ಸೇರಿದಂತೆ ಮೂವರನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಅಭಿನವ ಹಾಲಸ್ವಾಮಿಯನ್ನು ಸ್ಥಳ ಮಹಜರು ಮಾಡಲು ಕರೆತಂದಿದ್ದ ವೇಳೆ ಮಠದಲ್ಲಿ ಕಂತೆ ಕಂತೆ ಹಣ ಪತ್ತೆ!
ಬಳ್ಳಾರಿ ಜಿಲ್ಲೆಯ ಹೊಸಪೇಟೆ ಸಮೀಪದ ಹಿರೇಹಡಗಲಿಯ ಹಾಲಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಅಭಿನವ ಹಾಲಸ್ವಾಮಿಯನ್ನು ಬಂಧಿಸಿದ ಒಂದು ದಿನದ ನಂತರ ನಿನ್ನೆ ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ಸ್ಥಳ ಮಹಜರಿಗೆ ಹೋಗಿದ್ದ ಸಂದರ್ಭದಲ್ಲಿ ಲಕ್ಷ ಲಕ್ಷ ಕಂತೆ ನೋಟು ಸಿಕ್ಕಿದೆ.

ಟಿಕೆಟ್ ವಂಚನೆ ಪ್ರಕರಣ: ಹಿಂದುತ್ವವಾದಿ ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಬಿಡುಗಡೆ, ವಿಚಾರಣೆ ಆರಂಭ
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಅಸ್ವಸ್ಥರಾಗಿದ್ದ ಚೈತ್ರಾ ಕುಂದಾಪುರ ಅವರು ಚಿಕಿತ್ಸೆ ಪಡೆಯುತ್ತಿದ್ದ ವಿಕ್ಟೋರಿಯಾ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಖರೀದಿಸಿದ್ದ ಕಾರು, ಮನೆ, ಸೈಟು, 2 ಕೋಟಿ ರೂ. ಎಫ್‌ಡಿ ಜಪ್ತಿ
ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಅವರಿಂದ ಕೋಟಿ ಕೋಟಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದುತ್ವವಾದಿ ಚೈತ್ರಾ ಕುಂದಾಪುರ ಅವರು ಇತ್ತೀಚಿಗೆ ಖರೀದಿಸಿದ್ದ ಕಿಯಾ...

ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಸತ್ಯ ಹೊರಬರುತ್ತೆ; ದೊಡ್ಡ ದೊಡ್ಡವರ ಹೆಸರೂ ಹೊರಗೆ ಬರತ್ತೆ: ಚೈತ್ರಾ ಕುಂದಾಪುರ
ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಅವರ ವಿಚಾರಣೆ ಇಂದು ಗುರುವಾರದಿಂದ ಆರಂಭವಾಗಲಿದೆ.

ಬಂಧನಕ್ಕೆ ಮುನ್ನ ಮುಸ್ಲಿಂ ಸ್ನೇಹಿತೆ ಮನೆಯಲ್ಲಿ ಅವಿತಿದ್ದ ಚೈತ್ರಾ ಕುಂದಾಪುರ: ಹಿಂದೂ ಕಾರ್ಯಕರ್ತೆ ಜೊತೆ ಮೂವರ ಅರೆಸ್ಟ್
ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಕಳೆದ ತಡರಾತ್ರಿ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ವಂಚನೆ ಪ್ರಕರಣ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನ
ವಂಚನೆ ಆರೋಪದಡಿ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಅವರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವ ಆರೋಪ ಅವರ ವಿರುದ್ಧ ಕೇಳಿಬಂದಿದೆ.

ಬೆಂಗಳೂರು: ಶಂಕಿತ ಉಗ್ರ ಜುನೈದ್ ಸಹಚರನ ಬಂಧನ; ಆತ್ಮಹತ್ಯೆ ಹೈಡ್ರಾಮಾ ಮಾಡುತ್ತಿದ್ದ ನಟೋರಿಯಸ್ ರೌಡಿ!
ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-2 ಆರೋಪಿಯಾಗಿರುವ ಜುನೈದ್ ಸಹಚರನನ್ನು ಆರ್. ಟಿ.ನಗರ ಪೊಲೀಸರು ಬಂಧಿಸಿದ್ದಾರೆ.

