CCB

ಬೆಂಗಳೂರು ಫಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿ; ಇನ್ನಷ್ಟು ಜನರಿಗೆ CCB ನೋಟಿಸ್ ಜಾರಿ
ಮೇ 19 ಮತ್ತು 20ರ ಮಧ್ಯರಾತ್ರಿ ಪಾರ್ಟಿಯಲ್ಲಿ ಭಾಗವಹಿಸಿದ್ದ ಹೇಮಾ ಮತ್ತು ಇತರ 85 ಮಂದಿಗೆ ನಡೆಸಿದ ಪರೀಕ್ಷೆಯಲ್ಲಿ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿತ್ತು. ಪಾರ್ಟಿಯಲ್ಲಿ ಕನಿಷ್ಠ 101 ಜನರು ಭಾಗವಹಿಸಿದ್ದರು. ಅದನ್ನು ಹುಟ್ಟುಹಬ್ಬದ ಸಂಭ್ರಮಾಚರಣೆ ಎಂದು ಹೇಳಲಾಗಿತ್ತು.

ರೇವ್ ಪಾರ್ಟಿ ಪ್ರಕರಣ: ವಿಚಾರಣೆಗೆ ಪೊಲೀಸರ ಮುಂದೆ ಹಾಜರಾಗಲು ಸಮಯ ಕೋರಿದ ತೆಲುಗು ನಟಿ ಹೇಮಾ
ಇತ್ತೀಚೆಗೆ ಬೆಂಗಳೂರು ನಗರದ ಹೊರವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ತೆಲುಗಿನ ಜನಪ್ರಿಯ ನಟಿ ಹೇಮಾ ಅವರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳದ ಮುಂದೆ ವಿಚಾರಣೆಗೆ ಹಾಜರಾಗಲು ಸಮಯ ಕೋರಿದ್ದಾರೆ.

ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾಗೆ ಸಿಸಿಬಿ ನೋಟಿಸ್, ಮೇ 27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ
ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಟಾಲಿವುಡ್ ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಮೇ.27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬರ್ ಗಳು NIA ವಶಕ್ಕೆ, ಜಯನಗರದಲ್ಲಿ 1.40 ಕೋಟಿ ರೂ ಹಣ ಜಪ್ತಿ, ಬೆನ್ನಿಗಾನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಯುವತಿಗೆ ಕಿರುಕುಳ: ಈ ದಿನದ ಸುದ್ದಿ ಮುಖ್ಯಾಂಶಗಳು-13-04-2024
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ NIA ವಶಕ್ಕೆ ನೀಡಿದ್ದಾರೆ.

ಪಾಕ್ ಪರ ಘೋಷಣೆ ಪ್ರಕರಣ: ಬಂಧಿತ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿರುವ ಮೂವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಡ್ರಗ್ಸ್ ದಂಧೆ: ನೇತ್ರ ತಜ್ಞ ಸೇರಿ ನಾಲ್ವರ ಬಂಧನ; 2.35 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಮತ್ತೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ, ನೇತ್ರ ತಜ್ಞ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿ ರೂ.2.35 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ.

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ: 44 ಮಹಿಳೆಯರ ರಕ್ಷಣೆ, 34 ಮಂದಿ ಸಿಸಿಬಿ ವಶಕ್ಕೆ
ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡ ಮೇಲೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ದಾಳಿ ನಡೆಸಿದ್ದು, 44 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ಸುಳ್ಳು ಪ್ರಕರಣ ಸೃಷ್ಟಿಸಿ 72 ಲಕ್ಷ ರೂಪಾಯಿ ದುರ್ಬಳಕೆ: ಇನ್ಸ್‌ಪೆಕ್ಟರ್ ಅಮಾನತು, ಸಹಾಯಕನ ಬಂಧನ
ಸುಳ್ಳು ಪ್ರಕರಣ ಸೃಷ್ಟಿಸಿ 72 ಲಕ್ಷ ರೂಪಾಯಿ ಲಪಟಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇನ್ಸ್‌ಪೆಕ್ಟರ್ ಸಹಾಯಕನನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಇದೇ ವೇಳೆ ಆರೋಪ ಹೊತ್ತಿರುವ ರಾಮನಗರ ಜಿಲ್ಲೆ ಬಿಡದಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಶಂಕರ್ ನಾಯಕ್ ಅವರೂ ಅಮಾನತುಗೊಂಡಿದ್ದಾರೆಂದು ತಿಳಿದುಬಂದಿದೆ.

ಡ್ರಗ್ಸ್ ಸಾಗಣೆ: ಸಿಸಿಬಿಯಿಂದ ಅಂತರ್ ರಾಜ್ಯ ಬಸ್ ಗಳ ತಪಾಸಣೆ
ಹೊರ ರಾಜ್ಯದಿಂದ ಬರುವ ಬಸ್‌ಗಳಲ್ಲಿ ಡ್ರಗ್ಸ್ ಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಶನಿವಾರ ಶೋಧ ನಡೆಸಿದರು.

