Ceasefire Violation

ಕಾಶ್ಮೀರ: ರಾಜೋರಿ ಬಳಿ ಪಾಕಿಸ್ತಾನದಿಂದ ಅಪ್ರಚೋದಿತ ಶೆಲ್ ದಾಳಿ; ಭಾರತದ ಇಬ್ಬರು ಸೈನಿಕರು ಹುತಾತ್ಮ
ಪದೇ ಪದೇ ಕಾಲು ಕರೆದು ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನ, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ತೀವ್ರ ಶೆಲ್ಲಿಂಗ್ ನಲ್ಲಿ ಭಾರತ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.

ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ: ಭಾರತೀಯ ಯೋಧ ಹುತಾತ್ಮ
ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ, ಹಿಂಸಾಚಾರ ಕುಕೃತ್ಯ ಮುಂದುವರಿದಿದೆ. ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ವಲಯದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದರಿಂದ ಉಂಟಾದ ಗುಂಡಿನ ಚಕಮಕಿಯಲ್ಲಿ ಇಂದು ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.

ಭಾರತದ ಪ್ರತಿದಾಳಿಗೆ 11 ಪಾಕಿ ಸೈನಿಕರು ಸಾವು, 16 ಮಂದಿಗೆ ತೀವ್ರ ಗಾಯ!
ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಪುಂಡಾಟಕ್ಕೆ ಭಾರತೀಯ ಸೇನೆ ನಡೆಸಿದ ಪ್ರತಿದಾಳಿಗೆ 11 ಪಾಕಿ ಸೈನಿಕರು ಸಾವನ್ನಪ್ಪಿದ್ದು 16 ಮಂದಿಗೆ ತೀವ್ರ ಗಾಯಗಳಾಗಿವೆ ಎಂದು ಸೇನಾಪಡೆಯ ಮೂಲಗಳು ತಿಳಿಸಿವೆ.

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಭಾರತೀಯ ಯೋಧ ಹುತಾತ್ಮ
ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ಸೇನಾಪಡೆಯ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ ಹುತಾತ್ಮರಾಗಿರುವ ಘಟನೆ ಭಾನುವಾರ ನಡೆದಿದೆ.

2010ರಿಂದೀಚೆಗೆ ಪಾಕ್ ಯೋಧರ ಕದನ ವಿರಾಮ ಉಲ್ಲಂಘನೆ ಪ್ರಕರಣಗಳು 60ಪಟ್ಟು ಹೆಚ್ಚಳ: ಗೃಹ ಸಚಿವಾಲಯ
ಪಾಕಿಸ್ತಾನದ ಯೋಧರು ಕಳೆದ 3 ವರ್ಷದಲ್ಲಿ 8500 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದ್ದು, 2010ರಿಂದೀಚೆಗೆ ಕದನ ವಿರಾಮ ಉಲ್ಲಂಘನೆ ಪ್ರಕರಣಗಳ ಪ್ರಮಾಣ 60ಪಟ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿದೆ.

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಭಾರತದ ಯೋಧ ಹುತಾತ್ಮ
ಪಾಕಿಸ್ತಾನ ಸೇನೆ ಇಂದು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕ್ ಸೇನೆಯ ಶೆಲ್ಲಿಂಗ್ ನಿಂದಾಗಿ ಇಂಡೋ-ಪಾಕ್ ಗಡಿಯ ನೌಶೇರಾ ಸೆಕ್ಟರ್ ನಲ್ಲಿ ಕರ್ತವ್ಯ ನಿರತರಾಗಿದ್ದ ಭಾರತದ ಸೈನಿಕ ಹುತಾತ್ಮರಾಗಿದ್ದಾರೆ.

ಜಮ್ಮು-ಕಾಶ್ಮೀರ: ಪಾಕ್ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ನಾಗರೀಕ ಸಾವು, ಮತ್ತೋರ್ವನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಾಲಕೋಟ್ ಹಾಗೂ ಮೆಂಧಾರ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ನಾಗರೀಕ ಸಾವನ್ನಪ್ಪಿ ಮತ್ತೋರ್ವನಿಗೆ ಗಾಯವಾಗಿರುವ ಘಟನೆ ನಡೆದಿದೆ.

ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿ ಶೆಲ್ ದಾಳಿ ನಡೆಸಿದ ಪಾಕ್, ಭಾರತೀಯ ಯೋಧರಿಂದ ದಿಟ್ಟ ಹೋರಾಟ
ಜಮ್ಮು ಖಾಶ್ಮೀರದ ಕುಪ್ವಾರಾ ಜಿಲ್ಲೆಯ ಮಾಚಲ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಎಲ್‌ಒಸಿ ಉದ್ದಕ್ಕೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನವು ಶೆಲ್ ದಾಳಿ ನಡೆಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಅತ್ತ ಉಗ್ರರು, ಇತ್ತ ಪಾಕ್ ಸೈನಿಕರು: ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಯೋಧ ಹುತಾತ್ಮ
ಪಾಕಿಸ್ತಾನ ಸೇನೆ ಮತ್ತೆ ತನ್ನ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ ಮುಂದುವರೆಸಿದ್ದು, ಪಾಕಿಸ್ತಾನ ಸೇನೆಯ ಶೆಲ್ ದಾಳಿಗೆ ಭಾರತದ ಓರ್ವ ಯೋಧ ಹುತಾತ್ಮರಾಗಿದ್ದಾರೆ.

