ರಾಜ್ಯಬೆಂಗಳೂರಿನಲ್ಲಿ 117 ಸ್ಮಶಾನ ಕಾರ್ಮಿಕರ ಸೇವೆ ಖಾಯಂ, ಇನ್ನು 100 ಕಾರ್ಮಿಕರ ಸೇವೆ ಖಾಯಂಗೆ ಆದೇಶ: ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರಿನಲ್ಲಿ 117 ಸ್ಮಶಾನ ಕಾರ್ಮಿಕರನ್ನು ಸೇವೆಯಲ್ಲಿ ಖಾಯಂ ಮಾಡಲಾಗಿದೆ. ಉಳಿದ 100 ಜನರಿಗೆ ಖಾಯಂ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಬೆಂಗಳೂರು ನಗರದ ಸ್ಮಶಾನ ಕಾರ್ಮಿಕರ ಜತೆ ಇಂದು ಬೆಳಗ್ಗೆ ಅವರು ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಉಪಾಹಾರ ಸೇವಿಸಿದ ನಂತರ ಈ ವಿಷಯ ತಿಳಿಸಿದ್ದಾರೆ.