Central Government

'ಬೆಂಗಳೂರು ಗುಲಾಬಿ ಈರುಳ್ಳಿ' ರಫ್ತಿಗೆ ಸುಂಕ ವಿನಾಯಿತಿ ನೀಡಿದ ಕೇಂದ್ರ ಸರ್ಕಾರ
‘ಬೆಂಗಳೂರು ಗುಲಾಬಿ ಈರುಳ್ಳಿ’ ರಫ್ತಿಗೆ ಕೆಲವು ಷರತ್ತುಗಳೊಂದಿಗೆ ಕೇಂದ್ರ ಸರ್ಕಾರವು ಇತ್ತೀಚೆಗಷ್ಟೇ ವಿಧಿಸಿದ್ದ ಸುಂಕದಿಂದ ವಿನಾಯಿತಿ ನೀಡಲಾಗಿದೆ. ಈ ಅಧಿಸೂಚನೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ.

ಕಾವೇರಿ ವಿವಾದ: ಕೇಂದ್ರ ಮಧ್ಯಸ್ಥಿಕೆ ವಹಿಸಿ, ರಾಜ್ಯಕ್ಕೆ ಪರಿಹಾರ ನೀಡಲಿ; ದೆಹಲಿಗೆ ಹೋಗುತ್ತೇನೆ ಎಂದ ಡಿಕೆ ಶಿವಕುಮಾರ್
ತಮಿಳುನಾಡಿಗೆ ನೀರು ಬಿಡುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯವು ಅತಂತ್ರ ಸ್ಥಿತಿಯಲ್ಲಿದ್ದು, ಕೇಂದ್ರ ಸರ್ಕಾರವು ಮಧ್ಯಸ್ಥಿಕೆ ವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಒತ್ತಾಯಿಸಿದರು.

ಬರ ಘೋಷಣೆ ವಿಳಂಬಕ್ಕೆ ಕೇಂದ್ರದ ಮಾರ್ಗಸೂಚಿಯೇ ಸಮಸ್ಯೆ: ಸಿಎಂ ಸಿದ್ದರಾಮಯ್ಯ
ಬರಗಾಲದ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಬರನಿರ್ವಹಣೆ ಕೈಪಿಡಿ -2020 ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿಯೇ ಬರಗಾಲ ಘೋಷಣೆ ವಿಳಂಬವಾಗಿದೆ. ಈ ಮಾನದಂಡಗಳನ್ನು ಬದಲಾವಣೆ ಮಾಡದಿದ್ದರೆ ಬರಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳನ್ನು ನಡೆಸಿ ನೊಂದ ಜನರಿಗೆ ನೆರವಾಗಲು ಸಾಧ್ಯವಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಉಜ್ವಲ ಬಳಕೆದಾರರಿಗೆ 400 ರೂ, ಉಳಿದ ಗ್ರಾಹಕರಿಗೆ 200 ರೂಪಾಯಿ LPG ಸಬ್ಸಿಡಿ: ಕೇಂದ್ರ ಸರ್ಕಾರ
ಹಲವಾರು ವರ್ಷಗಳ ಹಿಂದೆ ಎಲ್‌ಪಿಜಿ ಅಥವಾ ಅಡುಗೆ ಅನಿಲದ ಮೇಲಿನ ಸಬ್ಸಿಡಿಯನ್ನು ಸದ್ದಿಲ್ಲದೆ ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಅದೇ ಸಿಲಿಂಡರ್‌ಗೆ 200 ರೂಪಾಯಿ ಸಬ್ಸಿಡಿಯನ್ನು ಮರುಸ್ಥಾಪಿಸಲು ನಿರ್ಧರಿಸಿದೆ.

ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ: ಕುಚಲಕ್ಕಿ ರಫ್ತಿಗೆ ಶೇ 20ರಷ್ಟು ಸುಂಕ ವಿಧಿಸಿದ ಕೇಂದ್ರ ಸರ್ಕಾರ
ದೇಶೀಯ ಮಾರುಕಟ್ಟೆಯಲ್ಲಿ ಅಗತ್ಯ ದಾಸ್ತಾನು ಮತ್ತು ಬೆಲೆ ಏರಿಕೆಯನ್ನು ನಿಯಂತ್ರಣದಲ್ಲಿಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕುಚಲಕ್ಕಿ ರಫ್ತಿನ ಮೇಲೆ ಶೇ 20ರಷ್ಟು ಸುಂಕ ವಿಧಿಸಿದೆ.

ಹಿಮಾಚಲ ಪ್ರದೇಶ: ಭಾರಿ ಮಳೆಯಿಂದಾಗಿ ವ್ಯಾಪಕ ನಷ್ಟ, ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಪ್ರಯತ್ನ: ಜೆಪಿ ನಡ್ಡಾ
ಭಾರಿ ಮಳೆಯಿಂದಾಗಿ ಹಿಮಾಚಲ ಪ್ರದೇಶ ತತ್ತರಿಸಿದ್ದು, ಭಾರಿ ನಷ್ಟ ಉಂಟಾಗಿದೆ ಮತ್ತು ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾನುವಾರ ಹೇಳಿದ್ದಾರೆ.

ದೇಶದ ಅರ್ಧದಷ್ಟು ನರ್ಸ್‌ಗಳು ದಕ್ಷಿಣದ ಐದು ರಾಜ್ಯಗಳಲ್ಲಿ ತರಬೇತಿ ಪಡೆದಿದ್ದಾರೆ: ಕೇಂದ್ರ ಸರ್ಕಾರ
ಭಾರತದ ಸುಮಾರು ಅರ್ಧದಷ್ಟು ದಾದಿಯರು ಐದು ದಕ್ಷಿಣದ ರಾಜ್ಯಗಳಲ್ಲಿ ತರಬೇತಿ ಪಡೆದಿದ್ದಾರೆ. ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ತೆಲಂಗಾಣದಲ್ಲಿ ತರಬೇತಿ ಪಡೆದಿದ್ದಾರೆ ಎಂದು ಸರ್ಕಾರದ ಅಂಕಿಅಂಶಗಳು ತೋರಿಸಿವೆ.

ಸಂಸತ್ ಸದಸ್ಯತ್ವ ಮರುಸ್ಥಾಪನೆಗೆ ವಿಳಂಬ: ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಕಂಡರೆ ಭಯ: ಸಂಜಯ್ ರಾವುತ್
ಕೇಂದ್ರ ಸರ್ಕಾರವು ರಾಹುಲ್ ಗಾಂಧಿಗೆ ಹೆದರುತ್ತಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಭಾನುವಾರ ಪ್ರತಿಪಾದಿಸಿದ್ದಾರೆ ಮತ್ತು 2019ರ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕನಿಗೆ ನೀಡಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದರೂ ಅವರ ಸಂಸತ್ ಸದಸ್ಯತ್ವವನ್ನು ಮರುಸ್ಥಾಪಿಸಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.

ಪೊಲೀಸರು ಏನು ಮಾಡುತ್ತಿದ್ದರು?: ಮಣಿಪುರ ವೈರಲ್ ವಿಡಿಯೋ ಕುರಿತು ಕೇಂದ್ರ, ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಮತ್ತು ಮೇ 4 ರಂದು ನಡೆದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಮತ್ತು ಮಣಿಪುರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

