Central Government

ಚುನಾವಣಾ ತಂತ್ರಗಾರರ ಮಾತು ಕೇಳಿ ಫ್ರೀ ಘೋಷಿಸುವ ಮೊದಲು ಕೇಂದ್ರಕ್ಕೆ ಪತ್ರ ಬರೆದಿದ್ರಾ: ಕೇಂದ್ರ ಸರ್ಕಾರದ ಪರ ಎಚ್ ಡಿಕೆ ಬ್ಯಾಟಿಂಗ್
ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ಸಂಬಂಧಿಸಿದಂತೆ ತಾನು ಎಸಗಿದ ಸ್ವಯಂಕೃತ ಅಪರಾಧಕ್ಕೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಾ ಇದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಎಎಪಿ ಸರ್ಕಾರದ ಅಡಿಯಲ್ಲಿ ಕಾನೂನು ಸುವ್ಯವಸ್ಥೆ ಇದ್ದಿದ್ದರೆ ದೆಹಲಿ ಅತ್ಯಂತ ಸುರಕ್ಷಿತವಾಗಿರುತ್ತಿತ್ತು: ಅರವಿಂದ ಕೇಜ್ರಿವಾಲ್
ಲೆಫ್ಟಿನೆಂಟ್ ಗವರ್ನರ್ ಬದಲಿಗೆ ಎಎಪಿ ಸರ್ಕಾರದ ಅಡಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಇದ್ದಿದ್ದರೆ ರಾಷ್ಟ್ರ ರಾಜಧಾನಿ ಸುರಕ್ಷಿತ ಸ್ಥಳವಾಗುತ್ತಿತ್ತು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಒಂಬತ್ತು ವರ್ಷ: ಜೂನ್ 10-11 ರಂದು 4 ರಾಜ್ಯಗಳ ಸಾರ್ವಜನಿಕ ಸಭೆಗಳಲ್ಲಿ ಅಮಿತ್ ಶಾ ಭಾಷಣ
ಬಿಜೆಪಿ ನಾಯಕ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನರೇಂದ್ರ ಮೋದಿ ಸರ್ಕಾರದ ಒಂಬತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕ್ರಮಗಳ ಭಾಗವಾಗಿ ಜೂನ್ 10 ಮತ್ತು 11 ರಂದು ನಾಲ್ಕು ರಾಜ್ಯಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ; ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಲು ಕೇಂದ್ರಕ್ಕೆ ಒತ್ತಾಯ- ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕುಸ್ತಿಪಟುಗಳ ಸಮಸ್ಯೆ ಬಗೆಹರಿಸಲು ಕೇಂದ್ರ ಪ್ರಯತ್ನಿಸುತ್ತಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಕುಸ್ತಿಪಟುಗಳ ಸಮಸ್ಯೆಗಳನ್ನು ಪರಿಹರಿಸಲು ಮತ್ತು ನವದೆಹಲಿಯಲ್ಲಿ ಅವರ ಪ್ರತಿಭಟನೆಯನ್ನು ಕೊನೆಗೊಳಿಸಲು ಕೇಂದ್ರ ಸರ್ಕಾರವು ಅತ್ಯುತ್ತಮವಾಗಿ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಶನಿವಾರ ಹೇಳಿದ್ದಾರೆ.

ಸಿಲಿಂಡರ್ ಮೇಲಿನ ಸಬ್ಸಿಡಿ ಬಿಟ್ಟಂತೆ, ಉಚಿತಗಳು ಬೇಡವೆಂದವರು ಗ್ಯಾರಂಟಿ ಯೋಜನೆಗಳನ್ನು ತ್ಯಜಿಸಬಹುದು: ಡಿಕೆ ಶಿವಕುಮಾರ್
ಕಾಂಗ್ರೆಸ್ ಸರ್ಕಾರವು ಐದು ಖಾತರಿಗಳನ್ನು ಘೋಷಿಸಿದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಹೇಳಿಕೆ ನೀಡಿದ್ದು, 2 ಕೋಟಿ ಉದ್ಯೋಗ ಸೃಷ್ಟಿ ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ಈಡೇರಿಸುವ ಸರದಿ ಈಗ ಕೇಂದ್ರ ಸರ್ಕಾರದ್ದಾಗಿದೆ ಎಂದಿದ್ದಾರೆ.

ಕೇಂದ್ರ vs ದೆಹಲಿ ಸರ್ಕಾರ: ಮೇ 11ರ ತೀರ್ಪು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಮನವಿ
ಸಾರ್ವಜನಿಕ ಭದ್ರತೆ, ಪೊಲೀಸ್ (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಭೂಮಿಯ ವಿಷಯಗಳನ್ನು ಹೊರತುಪಡಿಸಿ ದೆಹಲಿ ಸರ್ಕಾರವು ಇತರೆಲ್ಲ ಸೇವೆಗಳಿಗೆ ಸಂಬಂಧಿಸಿದ ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಹೊಂದಿದೆ ಎಂದು ಮೇ 11ರಂದು ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ದೆಹಲಿ v/s ಕೇಂದ್ರ: ಚುನಾಯಿತ ಸರ್ಕಾರಕ್ಕೆ ಆಡಳಿತಾತ್ಮಕ ಅಧಿಕಾರ ಇರಬೇಕು; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ರಾಷ್ಟ್ರ ರಾಜಧಾನಿಯ ಆಡಳಿತಾತ್ಮಕ ಸೇವೆಗಳ ಮೇಲಿನ ನಿಯಂತ್ರಣದ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಅರವಿಂದ ಕೇಜ್ರಿವಾಲ್ ಸರ್ಕಾರಕ್ಕೆ ದೊಡ್ಡ ಗೆಲುವು ಸಿಕ್ಕಂತಾಗಿದೆ.

ಪತ್ರಕರ್ತರ ಸೋಗಿನಲ್ಲಿದ್ದ ವ್ಯಕ್ತಿಗಳಿಂದ ಅತೀಕ್ ಅಹ್ಮದ್ ಹತ್ಯೆ; ಪತ್ರಕರ್ತರಿಗಾಗಿ ಎಸ್ಒಪಿ ಸಿದ್ಧಪಡಿಸಲು ಕೇಂದ್ರ ನಿರ್ಧಾರ
ಪ್ರಯಾಗ್‌ರಾಜ್‌ನಲ್ಲಿ ಗ್ಯಾಂಗ್‌ಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಹತ್ಯೆಗೈದ ಮೂವರು ದಾಳಿಕೋರರು ಮಾಧ್ಯಮದವರಂತೆ ನಟಿಸಿದ ಹಿನ್ನೆಲೆಯಲ್ಲಿ ಪತ್ರಕರ್ತರ ಸುರಕ್ಷತೆ ಮತ್ತು ಭದ್ರತೆಗಾಗಿ ಎಸ್‌ಒಪಿ (ಪ್ರಮಾಣಿತ ಕಾರ್ಯಾಚರಣೆ ವಿಧಾನ) ಸಿದ್ಧಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

