Central Government

ನವೆಂಬರ್ 8 ರಂದು ಸಿಜೆಐ ನಿವೃತ್ತಿ; ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಸರ್ಕಾರ ಪತ್ರ
ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ಮುಂದಿನ ವರ್ಷ ಅಕ್ಟೋಬರ್‌ನಿಂದ ಕಾರುಗಳಲ್ಲಿ 6 ಏರ್‌ಬ್ಯಾಗ್ ಕಡ್ಡಾಯಗೊಳಿಸಿದ ಸರ್ಕಾರ
ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರವು ಮುಂದಿನ ವರ್ಷ ಅಕ್ಟೋಬರ್ ತಿಂಗಳಿನಿಂದ ಪ್ರಯಾಣಿಕರ ವಾಹನಗಳಲ್ಲಿ ಕನಿಷ್ಠ ಆರು ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಿದೆ.

ನೋಟು ಅಮಾನ್ಯಗೊಳಿಸಿದ ಕೇಂದ್ರದ ನಿರ್ಧಾರ ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆ ಅಕ್ಟೋಬರ್ 12ಕ್ಕೆ
ನ್ಯಾಯಮೂರ್ತಿ ಎಸ್.ಎ. ನಜೀರ್ ನೇತೃತ್ವದ ಸಾಂವಿಧಾನಿಕ ಪೀಠ, ಅರ್ಜಿಗಳು ಶೈಕ್ಷಣಿಕ ವಿಚಾರಕ್ಕೆ ಸಂಬಂಧಿಸಿದ್ದವುಗಳಾದರೆ ಅವುಗಳನ್ನು ಪರಿಗಣಿಸುವುದಾಗಿ ಹೇಳಿದೆ.

ಎನ್ ಐಎ ದಾಳಿ ಬೆನ್ನಲ್ಲೇ ದೇಶಾದ್ಯಂತ ಪಿಎಫ್ ಐ ಸಂಘಟನೆ ಐದು ವರ್ಷ ಬ್ಯಾನ್: ಕೇಂದ್ರ ಸರ್ಕಾರದ ಮಹತ್ವದ ಆದೇಶ
ದೇಶವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ದೇಶದಾದ್ಯಂತ ಐದು ವರ್ಷಗಳ ಕಾಲ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್’ಐ) ಸಂಘಟನೆಯನ್ನು ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಬೆಲೆ ಏರಿಕೆ ತಡೆಯಲು ಗೋಧಿ ಹಿಟ್ಟು, ಮೈದಾ, ರವೆ ರಫ್ತಿಗೆ ನಿರ್ಬಂಧ ಹೇರಿದ ಸರ್ಕಾರ!
ಮೇ ತಿಂಗಳಲ್ಲಿ ಗೋಧಿ ರಫ್ತು ನಿಷೇಧಿಸಿದ ನಂತರ, ಹೆಚ್ಚಾಗುತ್ತಿರುವ ಬೆಲೆಗಳನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರ ಶನಿವಾರ ಗೋಧಿ ಹಿಟ್ಟು, ಮೈದಾ, ರವೆ ಮತ್ತು ಹೋಲ್‌ಮೀಲ್ ಅಟ್ಟಾ ರಫ್ತುಗಳನ್ನು ನಿಷೇಧಿಸಿದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿ ವಲಯದಲ್ಲಿ ಗರಿಷ್ಠ ಯೋಜನೆಗಳು ವಿಳಂಬ: ಸರ್ಕಾರದ ವರದಿ
ರಸ್ತೆ ಸಾರಿಗೆ ಮತ್ತು ಹೆದ್ದಾರಿ ವಲಯದಲ್ಲಿ ಗರಿಷ್ಠ 300 ಯೋಜನೆಗಳು ವಿಳಂಬವಾಗಿದ್ದರೆ, ರೈಲ್ವೆ 119 ಮತ್ತು ಪೆಟ್ರೋಲಿಯಂ ವಲಯದಲ್ಲಿ 90 ಯೋಜನೆಗಳು ನೆನೆಗುದಿಗೆ ಬಿದ್ದಿವೆ ಎಂದು ಸರ್ಕಾರದ ವರದಿ ತೋರಿಸಿದೆ.

ಹೀಗೆ ಆದರೆ ರಾಷ್ಟ್ರವು ಹೇಗೆ ಪ್ರಗತಿ ಸಾಧಿಸುತ್ತದೆ: ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಅರವಿಂದ್ ಕೇಜ್ರಿವಾಲ್
ಹಣದುಬ್ಬರ ಮತ್ತು ನಿರುದ್ಯೋಗ ಸೇರಿದಂತೆ ಹಲವು ವಿಚಾರಗಳ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಹೀಗೆ ಆದರೆ, ರಾಷ್ಟ್ರವು ಹೇಗೆ ಪ್ರಗತಿ ಸಾಧಿಸುತ್ತದೆ ಎಂದು ಪ್ರಶ್ನಿಸಿದ್ದಾರೆ.

ಭಾರತಕ್ಕೆ ಗೋಧಿ ಆಮದು ಮಾಡಿಕೊಳ್ಳುವ ಯೋಜನೆಯಿಲ್ಲ: ಕೇಂದ್ರ ಸರ್ಕಾರ
ದೇಶದ ಅಗತ್ಯತೆಗಳನ್ನು ಪೂರೈಸಲು ಸಾಕಾಗುವಷ್ಟು ದಾಸ್ತಾನು ಇರುವುದರಿಂದ ಗೋಧಿಯನ್ನು ಭಾರತಕ್ಕೆ ಆಮದು ಮಾಡಿಕೊಳ್ಳುವ ಯಾವುದೇ ಯೋಜನೆಯನ್ನು ಸರ್ಕಾರ ಹೊಂದಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನಕಲಿ, ದೇಶ ವಿರೋಧಿ ವಿಷಯ ಪ್ರಸಾರ: ಏಳು ಭಾರತೀಯ, ಒಂದು ಪಾಕ್ ಯೂಟ್ಯೂಬ್ ಚಾನೆಲ್ ಗೆ ಕೇಂದ್ರ ನಿರ್ಬಂಧ
ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿಯನ್ನು ಹರಡಿದ ಆರೋಪದ ಮೇಲೆ ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿದ್ದ ಒಂದು ಸೇರಿದಂತೆ 8 ಯೂಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ಗುರುವಾರ ಆದೇಶಿಸಿದೆ.

