Central Government

ಕೇಂದ್ರವು 'ರಹಸ್ಯವಾಗಿ' ರೋಹಿಂಗ್ಯಾಗಳಿಗೆ ಸಹಾಯ ಮಾಡಿದೆ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೋಹಿಂಗ್ಯಾ ನಿರಾಶ್ರಿತರಿಗೆ 'ಖಾಯಂ ನಿವಾಸ' ನೀಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು 'ರಹಸ್ಯವಾಗಿ' ಪ್ರಯತ್ನಿಸುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬುಧವಾರ ಆರೋಪಿಸಿದ್ದಾರೆ.

ವಿರೋಧ ಪಕ್ಷಗಳನ್ನು ನಾಶಪಡಿಸಲು ಕೇಂದ್ರ ಸರ್ಕಾರ ಇ.ಡಿಯನ್ನು ಸಾಧನವನ್ನಾಗಿ ಮಾಡಿಕೊಂಡಿದೆ: ಕಾಂಗ್ರೆಸ್
ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಸಂಸತ್ತಿನಲ್ಲಿ ಕೇಂದ್ರ ಸರ್ಕಾರವು ಇ.ಡಿಯನ್ನು ದುರ್ಬಳಕೆ ಮಾಡಿಕೊಂಡಿರುವ ವಿಚಾರವನ್ನು ಪ್ರಸ್ತಾಪಿಸಲು ಪಕ್ಷಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದರು.

ಕೇಂದ್ರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ವಿರೋಧ ಪಕ್ಷಗಳಿಂದ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ
ಮುಂಗಾರು ಅಧಿವೇಶನದ ಕಲಾಪಗಳ ಮೇಲೆ ಪರಿಣಾಮ ಬೀರಿರುವ ದೇಶದಲ್ಲಿನ ಬೆಲೆ ಏರಿಕೆ ಮತ್ತು ಜಿಎಸ್‌ಟಿ ಹೆಚ್ಚಳದ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡದ ಸರ್ಕಾರದ ಹಠಮಾರಿ ಧೋರಣೆಯ ಬಗ್ಗೆ ವಿರೋಧ ಪಕ್ಷಗಳ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

'ಅಗ್ನಿಪಥ' ವಿವಾದ: ನೇಮಕಾತಿ ಯೋಜನೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ವಿವಿಧ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ದೆಹಲಿ ಹೈಕೋರ್ಟ್ ಗೆ ವರ್ಗಾಯಿಸಿದೆ. ಅಲ್ಲದೆ ಈ ಕುರಿತ ವಿಚಾರಣೆಯನ್ನು ಸಂಪೂರ್ಣವಾಗಿ ದೆಹಲಿ ಹೈಕೋರ್ಟ್ ಗೆ ವರ್ಗಾಯಿಸುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಸೂಚಿಸಿದೆ.

ದಿನನಿತ್ಯ ಬಳಕೆಯ ಅಡುಗೆ ಎಣ್ಣೆ ದರ 10 ರೂ. ಇಳಿಕೆ ಮಾಡಲು ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗುರುವಾರ ಕೂಡ ಸತತವಾಗಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದೆ. ಪ್ರತಿ ಬ್ಯಾರೆಲ್‌ಗೆ 100 ಡಾಲರ್ ಗಿಂತ ಕೆಳಗೆ ಕಚ್ಚಾ ತೈಲ ಬೆಲೆ ಇಳಿಕೆಯಾಗಿದೆ. ಸಂಭಾವ್ಯ ಜಾಗತಿಕ ಮಟ್ಟದಲ್ಲಿ ಆರ್ಥಿಕತೆ ಕುಸಿತ ತೈಲ ಬೇಡಿಕೆ ಮೇಲೆ ಪರಿಣಾಮವನ್ನುಂಟುಮಾಡುವ ಸಾಧ್ಯತೆಯಿದೆ.

ರೈತರಿಗೆ ಅನುಕೂಲವಾಗುವಂತೆ ಎನ್‌ಡಿಆರ್‌ಎಫ್ ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ: ಸಿದ್ದರಾಮಯ್ಯ
ಎನ್‌ಡಿಆರ್‌ಎಫ್ ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಸಮರ್ಪಕವಾದ ಪರಿಹಾರ ನೀಡುವಂತೆ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸರ್ಕಾರಿ ನೌಕರರು ಗೂಗಲ್ ಡ್ರೈವ್, ವಿಪಿಎನ್ ಬಳಕೆ ನಿಷೇಧಿಸಿದ ಕೇಂದ್ರ: ಏನಿದು ಹೊಸ ರೂಲ್ಸ್?
ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್(ವಿಪಿಎನ್) ಕುರಿತ ಕೇಂದ್ರ ಸರ್ಕಾರದ ಹೊಸ ಕಾನೂನು ಜೂನ್ ಕೊನೆಯ ವಾರದಿಂದ ಜಾರಿಗೆ ಬರಲಿದೆ. ಈ ಹೊಸ ಕಾನೂನನ್ನು ವಿರೋಧಿಸಿ ನಾರ್ಡ್ ವಿಪಿಎನ್ (NordVPN)ನಂತಹ ಅನೇಕ ದೊಡ್ಡ...

ಅಗ್ನಿಪಥ ವಿರುದ್ಧ ಹಲವು ರಾಜ್ಯಗಳಲ್ಲಿ ಹಿಂಸಾಚಾರ, ಯೋಜನೆ ವಿರುದ್ಧ ಟೀಕೆ: ಪ್ರಯೋಜನ ಕುರಿತು ಕೇಂದ್ರ ಹೇಳಿದ್ದಿಷ್ಟು!
ಸೇನಾ ನೇಮಕಾತಿಯ ಹೊಸ ಯೋಜನೆ ಅಗ್ನಿಪಥ ಕುರಿತು ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಏತನ್ಮಧ್ಯೆ, ಕೇಂದ್ರ ಸರ್ಕಾರ ಸ್ಪಷ್ಟೀಕರಣವನ್ನು ನೀಡಿದ್ದು ಅಗ್ನಿಪಥ ಯೋಜನೆಯ ವಿರುದ್ಧದ ಟೀಕೆಗಳನ್ನು ತಿರಸ್ಕರಿಸಿದೆ.

ಓಮಿಕ್ರಾನ್ ಹೆಚ್ಚಳ: ಬೆಂಗಳೂರು ಸೇರಿದಂತೆ 8 ನಗರಗಳಲ್ಲಿ ಎಲ್ಲಾ ಪಾಸಿಟಿವ್ ಕೇಸುಗಳ ಜಿನೋಮ್ ಸೀಕ್ವೆನ್ಸಿಂಗ್; ಕೇಂದ್ರ ಸರ್ಕಾರ ನಿರ್ಧಾರ
ದೇಶದ ಏಳು ರಾಜ್ಯಗಳ 8 ನಗರಗಳಲ್ಲಿ ಓಮಿಕ್ರಾನ್ ಸೋಂಕು ಸಮುದಾಯ ಮಟ್ಟಕ್ಕೆ ಹರಡಿರಬಹುದು ಎಂಬ ಸಂಶಯದಿಂದ ಕೇದ್ರ ಸರ್ಕಾರ ಕೋವಿಡ್ ಪಾಸಿಟಿವ್ ಆರ್ ಟಿ-ಪಿಸಿಆರ್ ಸ್ಯಾಂಪಲ್ ಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ನಡೆಸಲು ನಿರ್ಧರಿಸಿದೆ.

