ದೇಶವೇತನ ಕಡಿತ, ಶಿಸ್ತುಕ್ರಮ! ನಾಳಿನ ಮುಷ್ಕರದಲ್ಲಿ ಭಾಗವಹಿಸುವ ನೌಕರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ
ಕಾರ್ಮಿಕ ಸುಧಾರಣೆಗಳು, ವಿದೇಶಿ ನೇರ ಹೂಡಿಕೆ (ಎಫ್ಡಿಐ) ಮತ್ತು ಖಾಸಗೀಕರಣ ಸೇರಿದಂತೆ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಪ್ರತಿಭಟಿಸಲು ಜನವರಿ 8ರಂದು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿದ ಕೇಂದ್ರ ಸರ್ಕಾರಿ ನೌಕರರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಕೇಂದ್ರವು ಎಚ್ಚರಿಸಿದೆ.