Centre

ಕರ್ನಾಟಕಕ್ಕೆ ಕೇಂದ್ರದಿಂದ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಶ್ವೇತಪತ್ರ ಹೊರಡಿಸಿ: ಸಿಎಂಗೆ ಬಿಜೆಪಿ ಸವಾಲು
ರಾಜ್ಯಕ್ಕೆ ಬರಬೇಕಿರುವ ಅನುದಾನದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ತೋರುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪವನ್ನು ರಾಜ್ಯ ಬಿಜೆಪಿ ತಳ್ಳಿಹಾಕಿದೆ.

ಕೇಂದ್ರ ಸರ್ಕಾರದಿಂದ 'ಭಾರತ್ ಬ್ರ್ಯಾಂಡ್' ಅಕ್ಕಿ ಬಿಡುಗಡೆ: ಕೆಜಿಗೆ 29 ರೂ., ಆನ್'ಲೈನ್, ರೀಟೇಲ್ ಮಳಿಗೆಗಳಲ್ಲಿ ಮಾರಾಟ!
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಬಿಜೆಪಿ ಚುನಾವಣೆಗೆ ಸಿದ್ಧತೆ, ತಂತ್ರಗಳನ್ನು ರೂಪಿಸಲು ಆರಂಭಿಸಿದೆ. ಇದರಂತೆ ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ಸೆಳೆಯುತ್ತಿರುವ ಕಾಂಗ್ರೆಸ್'ಗೆ ಟಕ್ಕರ್ ನೀಡಿರುವ ಕೇಂದ್ರ ಸರ್ಕಾರ ಪ್ರತಿ ಒಂದು ಕೆ.ಜಿ ಅಕ್ಕಿಗೆ ರೂ.29 ದರ ನಿಗದಿ...

ಮತದಾರರಿಗೆ ಗ್ಯಾರಂಟಿ ಭಾಗ್ಯಗಳ ಆಮಿಷ: ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ 'ಹೈ' ನೋಟಿಸ್
ಚುನಾವಣೆ ವೇಳೆ ಮತದಾರರಿಗೆ ಗ್ಯಾರಂಟಿ ಭಾಗ್ಯಗಳ ಆಮಿಷವೊಡ್ಡಿ ಮತ ಪಡೆಯುವ ರಾಜಕೀಯ ಪಕ್ಷಗಳ ಮಾದರಿಗೆ ಕರ್ನಾಟಕ ರಾಜ್ಯ ಅವಕಾಶ ಮಾಡಿಕೊಟ್ಟಿದ್ದು, ಇಂತಹ ನಡೆ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು’ ಎಂಬ ಮನವಿಗೆ ಹೈಕೋರ್ಟ್ ಸ್ಪಂದಿಸಿದೆ.

ಕೇಂದ್ರ ಬಜೆಟ್ 2024-25: ಆಯವ್ಯಯ ಮಂಡನೆ ಮುಕ್ತಾಯ, ಸರ್ಕಾರದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಹೊರಡಿಸುತ್ತೇವೆ; ನಿರ್ಮಲಾ ಸೀತಾರಾಮನ್
ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮುಕ್ತಾಯಗೊಳಿಸಿದ್ದು, ಸರ್ಕಾರದ ಆರ್ಥಿಕ ಸ್ಥಿತಿಗತಿ ಕುರಿತು ಸಂಸತ್ತಿನಲ್ಲಿ ಶ್ವೇತಪತ್ರ ಹೊರಡಿಸುತ್ತೇವೆಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

ಕೇಂದ್ರ ಬಜೆಟ್ 2024-25: ಇಂದು ದ್ರೌಪದಿ ಮುರ್ಮು ಭಾಷಣ, ನಾಳೆ ಸೀತಾರಾಮನ್ ಬಜೆಟ್ ಮಂಡನೆ, ಇದು ನಾರಿ ಶಕ್ತಿಯ ಹಬ್ಬ- ಪ್ರಧಾನಿ ಮೋದಿ
ಕೇಂದ್ರ ಬಜೆಟ್ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಲಿದ್ದು, ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ನಾರಿ ಶಕ್ತಿಯ ಹಬ್ಬವೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು: ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಡಾ. ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನಕ್ಕೆ ಒತ್ತಾಯಿಸಿ ಕೇಂದ್ರಕ್ಕೆ ಪತ್ರ- ಸಿಎಂ ಸಿದ್ದರಾಮಯ್ಯ
ಡಾ. ಶಿವಕುಮಾರ ಸ್ವಾಮೀಜಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ 'ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮಹಾದ್ರೋಹ: ಮನೆ ಮನೆ ಪ್ರಚಾರಕ್ಕೆ ಕಾಂಗ್ರೆಸ್ ಸಿದ್ಧತೆ!
ರಾಜ್ಯಕ್ಕೆ ಬರಬೇಕಾಗಿರುವ 1.90 ಲಕ್ಷ ಕೋಟಿ ರೂ. ತೆರಿಗೆ ಅನುದಾನವನ್ನು ಉಳಿಸಿಕೊಂಡು ಕೇಂದ್ರ ಸರ್ಕಾರ ಮಹಾದ್ರೋಹ ಮಾಡುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದ್ದು, ಮನೆ ಮನೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಲು ಚಿಂತನೆ ನಡೆಸಿದೆ ಎಂದು ತಿಳಿದುಬದಿದೆ.

7 ಕೋಟಿ ಕನ್ನಡಿಗರಿಗೆ ಅವಮಾನ: ಗಣರಾಜ್ಯೋತ್ಸವ ಪರೇಡ್ಗೆ ರಾಜ್ಯದ ಟ್ಯಾಬ್ಲೋ ಸೇರಿಸದ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ
ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ಗೆ ರಾಜ್ಯದ ಟ್ಯಾಬ್ಲೋವನ್ನು ಸೇರಿಸದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

