ರಾಜ್ಯಸಿಇಟಿ ಪರೀಕ್ಷೆ ಮುಂದೂಡಿಕೆ
ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಜವಾಬ್ದಾರಿ ಹೊತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಸೋಮವಾರ ತಿಳಿಸಿದ್ದಾರೆ.